Char Dham Yatra: ಹಿಮಪಾತದ ನಡುವೆಯೇ ಉತ್ತರಾಖಂಡದಲ್ಲಿ ಮುಂದುವರಿದ ಚಾರ್ ಧಾಮ್ ಯಾತ್ರೆ

ವಿವಿಧ ದೇವಸ್ಥಾನಗಳ ಬಾಗಿಲು ತೆರೆದ ಬಳಿಕ ಇದುವರೆಗೆ 2 ಲಕ್ಷಕ್ಕೂ ಅಧಿಕ ಜನರು ಚಾರ್ ಧಾಮ್ ಯಾತ್ರೆಯ ಅಂಗವಾಗಿ ದೇವಾಲಯಗಳಿಗೆ ಭೇಟಿ ನೀಡಿ ದರ್ಶನ ಪಡೆದುಕೊಂಡಿದ್ದಾರೆ.

Written by - Puttaraj K Alur | Last Updated : Oct 25, 2021, 10:18 AM IST
  • ಭಾರೀ ಹಿಮಪಾತದ ನಡುವೆ ಉತ್ತರಾಖಂಡದಲ್ಲಿ ಚಾರ್ ಧಾಮ್ ಯಾತ್ರೆ ಮುಂದುವರಿದಿದೆ
  • ಗಂಗೋತ್ರಿ ಮತ್ತು ಯಮುನೋತ್ರಿ ಧಾಮದ ಎತ್ತರದ ಶಿಖರಗಳಲ್ಲಿ ಹಿಮಪಾತ ಆರಂಭವಾಗಿದೆ
  • ದೇವಸ್ಥಾನಗಳ ಬಾಗಿಲು ತೆರೆದ ಬಳಿಕ ಇದುವರೆಗೆ 2 ಲಕ್ಷಕ್ಕೂ ಅಧಿಕ ಜನರು ಚಾರ್ ಧಾಮ್ ಯಾತ್ರೆ ಕೈಗೊಂಡಿದ್ದಾರೆ
Char Dham Yatra: ಹಿಮಪಾತದ ನಡುವೆಯೇ ಉತ್ತರಾಖಂಡದಲ್ಲಿ ಮುಂದುವರಿದ ಚಾರ್ ಧಾಮ್ ಯಾತ್ರೆ   title=
ಹೆಲಿಪ್ಯಾಡ್‌ನಿಂದ ಹಿಮವನ್ನು ತೆರವುಗೊಳಿಸಲಾಗುತ್ತಿದೆ

ನವದೆಹಲಿ: ಹಿಮಪಾತದ ನಡುವೆ ಉತ್ತರಾಖಂಡದಲ್ಲಿ ಚಾರ್ ಧಾಮ್ ಯಾತ್ರೆ(Char Dham Yatra) ಮುಂದುವರಿದಿದೆ ಎಂದು ದೇವಸ್ತಾನಂ ಆಡಳಿತ ಮಂಡಳಿ ಸೋಮವಾರ ತಿಳಿಸಿದೆ. ಗಂಗೋತ್ರಿ ಮತ್ತು ಯಮುನೋತ್ರಿ ಧಾಮದ ಎತ್ತರದ ಶಿಖರಗಳಲ್ಲಿ ಹಿಮಪಾತ ಆರಂಭವಾಗಿದೆ. ಕೇದಾರನಾಥದಲ್ಲಿ ಹೆಲಿಕಾಪ್ಟರ್ ಸೇವೆಯ ಮೇಲೆ ಪರಿಣಾಮ ಬೀರಿದ್ದು, ಹೆಲಿಪ್ಯಾಡ್‌ನಿಂದ ಹಿಮವನ್ನು ತೆರವುಗೊಳಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಕಳೆದ ಕೆಲವು ದಿನಗಳಿಂದ ಉತ್ತರಾಖಂಡದಲ್ಲಿ ಭಾರೀ ಹಿಮಪಾತ(Snowfall)ವಾಗುತ್ತಿದೆ. ಇತ್ತೀಚೆಗಷ್ಟೇ ಪ್ರತಿಕೂಲ ಹವಾಮಾನದಿಂದ ಉಂಟಾಗಿದ್ದ ಭಾರೀ ಪ್ರಮಾಣದ ಹಿಮಪಾತ(Uttarakhand Snowfall)ದಿಂದ ಅ.18ರಂದು ದಾರಿ ತಪ್ಪಿದ್ದ 17 ಚಾರಣಿಗರ ಪೈಕಿ 11 ಮಂದಿ ಶವವಾಗಿ ಪತ್ತೆಯಾಗಿದ್ದರು. ಮೃತದೇಹಗಳನ್ನು ಪತ್ತೆಹಚ್ಚಿದ್ದ ವಾಯುಪಡೆ ಸಿಬ್ಬಂದಿ ಬೃಹತ್ ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಿದ್ದರು.

ಇದನ್ನೂ ಓದಿ: Yogi Adityanath: ‘ರಾಮ ದ್ರೋಹಿ’ಗಳಿಂದ ಅಂತರ ಕಾಯ್ದುಕೊಳ್ಳಿ ಎಂದ ಯೋಗಿ ಆದಿತ್ಯನಾಥ್

ಈ ದುರ್ಘಟನೆಯು ಸಮುದ್ರ ಮಟ್ಟದಿಂದ 17,000 ಅಡಿ ಎತ್ತರವಿರುವ ಉತ್ತರಾಖಂಡದ ಲಂಖಗಾ ಪಾಸ್​(Lamkhaga Pass)ನಲ್ಲಿ ನಡೆದಿತ್ತು. ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯನ್ನು ಉತ್ತರಾಖಂಡದ ಹರ್ಸಿಲ್‌ನೊಂದಿಗೆ ಸಂಪರ್ಕಿಸುವ ಅತ್ಯಂತ ಅಪಾಯಕಾರಿ ಪಾಸ್‌ಗಳಲ್ಲಿ ಒಂದಾದ ಲಮ್‌ಖಗಾ ಪಾಸ್‌ಗೆ ಹೋಗುವ ಪ್ರದೇಶದಿಂದ ಇದುವರೆಗೆ 11 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಹಿಮಪಾತವನ್ನು ಲೆಕ್ಕಿಸದೆ ಸಾವಿರಾರು ಭಕ್ತರು ಚಾರ್ ಧಾಮ್ ಯಾತ್ರೆ ಕೈಗೊಂಡಿದ್ದಾರೆ.

ಪ್ರವಾಸಿಗರ ಪ್ರಯಾಣಕ್ಕೆ ಅನುಕೂಲವಾಗಲಿ ಎಂದು ಅಲ್ಲಲ್ಲಿ ಹಿಮ(Snowfall)ವನ್ನು ತೆರವುಗೊಳಿಸುತ್ತಿರುವುದು ಕಂಡುಬಂದಿದೆ. ವಿವಿಧ ದೇವಸ್ಥಾನಗಳ ಬಾಗಿಲು ತೆರೆದ ಬಳಿಕ ಇದುವರೆಗೆ 2 ಲಕ್ಷಕ್ಕೂ ಅಧಿಕ ಜನರು ಚಾರ್ ಧಾಮ್ ಯಾತ್ರೆಯ ಅಂಗವಾಗಿ ದೇವಾಲಯಗಳಿಗೆ ಭೇಟಿ ನೀಡಿ ದರ್ಶನ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.

ಇದನ್ನೂ ಓದಿ: Sovereign Gold Bond scheme: ಅಗ್ಗದ ದರದಲ್ಲಿ ಚಿನ್ನ ಖರೀದಿಗೆ ಮತ್ತೊಂದು ಅವಕಾಶ, ಇಲ್ಲಿದೆ ಮಾಹಿತಿ

ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ‘ಪ್ರಧಾನ ಮಂತ್ರಿ ಆತ್ಮನಿರ್ಭರ್ ಸ್ವಸ್ಥ ಭಾರತ್ ಯೋಜನೆ’ಯನ್ನು ಇಂದು ವಾರಾಣಸಿಯಲ್ಲಿ ಆರಂಭಿಸಲಿದ್ದಾರೆ. ರಾಜ್ಯದಲ್ಲಿ 9 ವೈದ್ಯಕೀಯ ಕಾಲೇಜುಗಳನ್ನು ಉದ್ಘಾಟಿಸಲಿದ್ದಾರೆ. ಪ್ರಧಾನಮಂತ್ರಿ ಕಚೇರಿ (ಪಿಎಂಒ) ಬಿಡುಗಡೆ ಪ್ರಕಾರ, ಪಿಎಂ ಮೋದಿ ವಾರಾಣಸಿ ಅಭಿವೃದ್ಧಿಗಾಗಿ 5,200 ಕೋಟಿ ರೂ.ಗಳಿಗಿಂತ ಹೆಚ್ಚಿನ ಮೌಲ್ಯದ ವಿವಿಧ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಅವರು ಇಂದು ಶ್ರೀನಗರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಶಾ ಅವರ 3 ದಿನಗಳ ಜಮ್ಮು ಮತ್ತು ಕಾಶ್ಮೀರ ಭೇಟಿಯ ಕೊನೆಯ ದಿನ ಇದಾಗಿದೆ. 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಕೇಂದ್ರ ಗೃಹ ಸಚಿವರು ಕಣಿವೆಗೆ ಭೇಟಿ ನೀಡುತ್ತಿರುವುದು ಇದೇ ಮೊದಲು. ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಇಂದು ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ಮತ್ತು ಅ.26 ರಂದು ಅಯೋಧ್ಯೆಯಲ್ಲಿ ರಾಮ್ ಲಲ್ಲಾಗೆ ಪ್ರಾರ್ಥನೆ ಸಲ್ಲಿಸಲಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News