ಛತ್ತೀಸ್ಗಢದಲ್ಲಿ ಎನ್ಕೌಂಟರ್: ನಾಲ್ವರು ನಕ್ಸಲರ ಹತ್ಯೆ
ನಕ್ಸಲರ ಮೃತದೇಹಗಳನ್ನು ಮತ್ತು 7 ಶಸ್ತ್ರಾಸ್ತ್ರಗಳನ್ನು ಅವರಿಂದ ವಶಪಡಿಸಿಕೊಳ್ಳಲಾಗಿದ್ದು, ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ರಾಜ್ಯದ ಉಪ ಇನ್ಸ್‌ಪೆಕ್ಟರ್ ಜನರಲ್ ಪಿ.ಸುಂದರ್ ರಾಜ್ ತಿಳಿಸಿದ್ದಾರೆ.
ಧಮ್‌ತರಿ: ಛತ್ತೀಸ್‌ಗಢದ ಧಮ್‌ತರಿ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ವಿಶೇಷ ಭದ್ರತಾ ಪಡೆ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ನಾಲ್ವರು ನಕ್ಸಲರು ಮೃತಪಟ್ಟಿದ್ದಾರೆ. ಇವರಲ್ಲಿ ಮೂವರು ಮಹಿಳೆಯರೂ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ತೊಡಗಿದ್ದ ವಿಶೇಷ ಭದ್ರತಾ ಪಡೆಯ ಸಿಬ್ಬಂದಿ ಇಂದು ಬೆಳಿಗ್ಗೆ ಖಲ್ಲಾರಿ ಮತ್ತು ಮೇಚ್‌ಕಾ ಗ್ರಾಮದ ನಡುವಿನ ಅರಣ್ಯ ಪ್ರದೇಶಕ್ಕೆ ತೆರಳಿದ ಸಂದರ್ಭದಲ್ಲಿ ನಡೆದ ಗಂಡಿನ ದಾಳಿಯಲ್ಲಿ ನಕ್ಸಲರು ಮೃತಪಟ್ಟಿದ್ದಾರೆ.
ನಕ್ಸಲರ ಮೃತದೇಹಗಳನ್ನು ಮತ್ತು 7 ಶಸ್ತ್ರಾಸ್ತ್ರಗಳನ್ನು ಅವರಿಂದ ವಶಪಡಿಸಿಕೊಳ್ಳಲಾಗಿದ್ದು, ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ರಾಜ್ಯದ ಉಪ ಇನ್ಸ್‌ಪೆಕ್ಟರ್ ಜನರಲ್ (ನಕ್ಸಲ್ ನಿಗ್ರಹ ಕಾರ್ಯಾಚರಣೆ)ಪಿ.ಸುಂದರ್ ರಾಜ್ ತಿಳಿಸಿದ್ದಾರೆ.