ನವದೆಹಲಿ: ಜಸ್ಟಿಸ್ ಶರದ್ ಅರವಿಂದ್ ಬೊಬ್ಡೆ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ನೇಮಕ ಮಾಡುವಂತೆ ಭಾರತದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿ ಪತ್ರ ಬರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.


COMMERCIAL BREAK
SCROLL TO CONTINUE READING

ಮುಖ್ಯ ನ್ಯಾಯಮೂರ್ತಿ ಗೊಗೊಯ್ ಅವರು ಕಾನೂನು ಮತ್ತು ನ್ಯಾಯ ಸಚಿವಾಲಯಕ್ಕೆ ಬರೆದಿರುವ ಪತ್ರದಲ್ಲಿ, ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ಅವರನ್ನು ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ. 


ಅಕ್ಟೋಬರ್ 3, 2018 ರಂದು ಭಾರತದ 46 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿದ ನ್ಯಾಯಮೂರ್ತಿ ಗೊಗೊಯ್ ನವೆಂಬರ್ 17ರಂದು ನಿವೃತ್ತಿ ಹೊಂದಲಿದ್ದಾರೆ. 


ಸುಪ್ರೀಂಕೋರ್ಟ್ ನಲ್ಲಿ ನ್ಯಾಯಮೂರ್ತಿ ಗೊಗೊಯ್ ಬಳಿಕ ಹಿರಿತನದ ಆಧಾರದ ಮೇಲೆ ಬೊಬ್ಡೆ ಎರಡನೇ ಸ್ಥಾನದಲ್ಲಿದ್ದು, ಇವರು 2021ರ ಎಪ್ರಿಲ್ 23ರಂದು ನಿವೃತ್ತಿಯಾಗಲಿದ್ದಾರೆ. ಜಸ್ಟಿಸ್ ಬೊಬ್ಡೆ(63) ಅವರು ಮಧ್ಯಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. 2013ರ ಏಪ್ರಿಲ್ ನಲ್ಲಿ ಪದೋನ್ನತಿ ಪಡೆದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು.