ನವದೆಹಲಿ: ದೆಹಲಿಯಲ್ಲಿನ  ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಪೂರೈಕೆಯು ಸುಧಾರಿಸದಿದ್ದರೆ ವಿದ್ಯುತ್ ಸ್ಥಗಿತಗೊಳಿಸುವ ಬಗ್ಗೆ ದೆಹಲಿ ಸಚಿವರು ಎಚ್ಚರಿಕೆ ನೀಡಿದ ಎರಡು ದಿನಗಳ ನಂತರ, ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಇಡೀ ದೇಶದಲ್ಲಿ ವಿದ್ಯುತ್ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಜಂತರ್ ಮಂತರ್ ನಲ್ಲಿ ರೈತರ ಪ್ರತಿಭಟನೆಗೆ ಅವಕಾಶ ನೀಡಿದ ದೆಹಲಿ ಸರ್ಕಾರ


'ಇಡೀ ದೇಶದಲ್ಲಿ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ. ಇದರ ಬಗ್ಗೆ ಹಲವಾರು ಮುಖ್ಯಮಂತ್ರಿಗಳು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಎಲ್ಲರೂ ಒಟ್ಟಾಗಿ ಪರಿಸ್ಥಿತಿಯನ್ನು ಸುಧಾರಿಸಲು ಪ್ರಯತ್ನಿಸುತ್ತಿದ್ದಾರೆ' ಎಂದು ಕೇಜ್ರಿವಾಲ್ (Arvind Kejriwal) ಇಂದು ಮಾಧ್ಯಮಗಳಿಗೆ ತಿಳಿಸಿದರು.ಗುಜರಾತ್, ಪಂಜಾಬ್, ರಾಜಸ್ಥಾನ, ದೆಹಲಿ, ಒಡಿಶಾ ಮತ್ತು ತಮಿಳುನಾಡು ಸೇರಿದಂತೆ ಹಲವಾರು ರಾಜ್ಯಗಳು ಕತ್ತಲೆಯ ಬಗ್ಗೆ ಆತಂಕವನ್ನು ವ್ಯಕ್ತಪಡಿಸುತ್ತಿವೆ.


ಇದನ್ನೂ ಓದಿ: ಎಎಪಿಯ ರಾಷ್ಟ್ರೀಯ ಸಂಚಾಲಕರಾಗಿ ಅವಿರೋಧವಾಗಿ ಅರವಿಂದ ಕೇಜ್ರಿವಾಲ್ ಮರು ಆಯ್ಕೆ


ವಿದ್ಯುತ್ ಬಿಕ್ಕಟ್ಟನ್ನು ಪರಿಹರಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಮತ್ತು ಯಾವುದೇ "ತುರ್ತು ಪರಿಸ್ಥಿತಿ" ಉದ್ಭವಿಸುವುದನ್ನು ಅವರ ಸರ್ಕಾರ ಬಯಸುವುದಿಲ್ಲ ಎಂದು ಕೇಜ್ರಿವಾಲ್ ಹೇಳಿದರು.


ಈ ಹಿಂದಿನ ದಿನ, ದೆಹಲಿಯ ವಿದ್ಯುತ್ ಸಚಿವ ಸತ್ಯೇಂದ್ರ ಜೈನ್ ಅವರು ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ (NTPC) ನಗರಕ್ಕೆ ವಿದ್ಯುತ್ ಪೂರೈಕೆಯನ್ನು ಅರ್ಧದಷ್ಟು ಕಡಿಮೆ ಮಾಡಿರುವುದರಿಂದ ರಾಜ್ಯ ಸರ್ಕಾರವು ದುಬಾರಿ ಅನಿಲ ಆಧಾರಿತ ವಿದ್ಯುತ್ ಮತ್ತು ಹೆಚ್ಚಿನ ಮಾರುಕಟ್ಟೆ ದರದಲ್ಲಿ ಸ್ಪಾಟ್ ಖರೀದಿಯನ್ನು ಅವಲಂಬಿಸಬೇಕಾಗಿದೆ ಎಂದು ಹೇಳಿದ್ದರು.


ಇದನ್ನೂ ಓದಿ: Arvind kejriwal : ಬಾಲಿವುಡ್ ನಟ ಸೋನು ಸೂದ್ ಭೇಟಿಯಾದ ದೆಹಲಿ ಸಿಎಂ ಕೇಜ್ರಿವಾಲ್ : ಹಾಗಿದ್ರೆ ಭೇಟಿಯ ಗುಟ್ಟೇನು?


ಇನ್ನೊಂದೆಡೆಗೆ ದೆಹಲಿ ಸರ್ಕಾರದ ಆರೋಪವನ್ನು ಅಲ್ಲಗಳೆದಿರುವ ಕೇಂದ್ರ ಸರ್ಕಾರವು NTPC ದೆಹಲಿಯಲ್ಲಿ ಯಾವುದೇ ವಿದ್ಯುತ್ ಅಗತ್ಯವನ್ನು ಪೂರೈಸಲು ಸಾಕಷ್ಟು ಕಲ್ಲಿದ್ದಲು ಪೂರೈಕೆಯನ್ನು ಹೊಂದಿದೆ ಮತ್ತು ಡಿಸ್ಕಾಮ್‌ಗಳು ತನ್ನ ದಾದ್ರಿ ವಿದ್ಯುತ್ ಸ್ಥಾವರದಿಂದ ವಿದ್ಯುತ್ ನಿಗದಿಪಡಿಸಬಹುದು ಎಂದು ಹೇಳಿದೆ.


ಇದೇ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಕಲ್ಲಿದ್ದಲು ಮತ್ತು ವಿದ್ಯುತ್ ಸಚಿವಾಲಯಗಳ ಉಸ್ತುವಾರಿ ಹೊಂದಿರುವ ತಮ್ಮ ಸಂಪುಟ ಸಹೋದ್ಯೋಗಿಗಳನ್ನು ಭೇಟಿ ಮಾಡಿ ಸಾಕಷ್ಟು ಕಲ್ಲಿದ್ದಲು ಪೂರೈಕೆ ಮತ್ತು ವಿದ್ಯುತ್ ಕೊರತೆಯ ಸಮಸ್ಯೆ ಕುರಿತು ಚರ್ಚಿಸಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.