ನವದೆಹಲಿ: ಜನವರಿ 1, 2023 ಕ್ಕೆ 15 ವರ್ಷ ತುಂಬುವ ಮಕ್ಕಳು 15-18 ವರ್ಷ ವಯಸ್ಸಿನ ವರ್ಗದ ಅಡಿಯಲ್ಲಿ ಕೋವಿಡ್ ಲಸಿಕೆಯನ್ನು (Corona Vaccine) ಪಡೆಯಲು ಅರ್ಹರು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸ್ಪಷ್ಟಪಡಿಸಿದೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಫೆಬ್ರುವರಿ 1 ರಿಂದ ತಮಿಳುನಾಡು ಶಾಲಾ ಕಾಲೇಜುಗಳು ಪುನರಾರಂಭ


ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಡಿಯಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್‌ನ (National Health Mission) ಹೆಚ್ಚುವರಿ ಕಾರ್ಯದರ್ಶಿ ಮತ್ತು ಮಿಷನ್ ನಿರ್ದೇಶಕರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಬರೆದ ಪತ್ರದಲ್ಲಿ, "15-18 ವರ್ಷದೊಳಗಿನ ಮಕ್ಕಳಿಗೆ ಕೊರೊನಾ ಲಸಿಕೆಗಾಗಿ ಮಾರ್ಗಸೂಚಿಗಳನ್ನು ಸಚಿವಾಲಯವು ಡಿಸೆಂಬರ್‌ನಲ್ಲಿ ಬಿಡುಗಡೆ ಮಾಡಿದೆ. 2007 ರಲ್ಲಿ ಅಥವಾ ಅದಕ್ಕಿಂತ ಮೊದಲು  ಹುಟ್ಟಿದ  ಎಲ್ಲರೂ ಕೊರೊನಾ ಲಸಿಕೆ (Corona vaccination) ಪಡೆಯಲು ಅರ್ಹರಾಗಿರುತ್ತಾರೆ ಎಂದು ನಿರ್ದಿಷ್ಟಪಡಿಸಲಾಗಿದೆ.  ಅಲ್ಲದೆ ಜನವರಿ 1, 2023 ಕ್ಕೆ 15 ವರ್ಷ ವಯಸ್ಸನ್ನು ತಲುಪಿದವರು ಅರ್ಹರಾಗಿರುತ್ತಾರೆ" ಎಂದು ಹೇಳಿದೆ. 


ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು 2005, 2006 ಮತ್ತು 2007 ರಲ್ಲಿ ಜನಿಸಿದ ಎಲ್ಲಾ ಫಲಾನುಭವಿಗಳು 15-18 ವರ್ಷದ ವರ್ಗದವರಲ್ಲಿ ಬರುತ್ತಾರೆ. ಇವರು ಲಸಿಕೆ ಪಡೆಯಲು ಅರ್ಹರು ಎಂದು ಸ್ಪಷ್ಟಪಡಿಸಿದೆ.


ಕಳೆದ ವರ್ಷ ಡಿಸೆಂಬರ್ 25 ರಂದು ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರು ಘೋಷಣೆ ಮಾಡಿದ ನಂತರ ದೇಶವು ಜನವರಿ 3 ರಿಂದ 15-18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಲು ಪ್ರಾರಂಭಿಸಿತು.


NTAGI ಯ ಕೊವಿಡ್-19 ವರ್ಕಿಂಗ್ ಗ್ರೂಪ್‌ನ ಅಧ್ಯಕ್ಷರಾಗಿರುವ ಡಾ.ಅರೋರಾ ಅವರು ನೀಡಿದ ಹೇಳಿಕೆಯ ಪ್ರಕಾರ, ಗಮನಾರ್ಹವಾಗಿ, ಭಾರತವು ಈ ವರ್ಷದ ಮಾರ್ಚ್‌ನಲ್ಲಿ ಕೊರೊನಾ ವಿರುದ್ಧ 12-14 ವರ್ಷ ವಯಸ್ಸಿನ ಮಕ್ಕಳಿಗೆ ಚುಚ್ಚುಮದ್ದು ನೀಡಲು ಪ್ರಾರಂಭಿಸಬಹುದು. 


ಇದನ್ನೂ ಓದಿ: Corona Positive: ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್‌ಗೆ ಕೋವಿಡ್ ಪಾಸಿಟಿವ್


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.