Sundarlal Bahuguna : ಚಿಪ್ಕೋ ಚಳುವಳಿಯ ರೂವಾರಿ `ಸುಂದರ್ ಲಾಲ್ ಬಹುಗುಣ` ಬಲಿ ಪಡೆದ ಕೊರೋನಾ!
ಚಿಪ್ಕೊ ಚಳುವಳಿಯು ಕಾಡು ಪ್ರದೇಶ ಹಾಗೂ ಕಾಡಿನ ಮರಗಳನ್ನು ರಕ್ಷಿಸಲು 1974 ರಂದು ಪ್ರಾರಂಭ
ನವದೆಹಲಿ : ಖ್ಯಾತ ಪರಿಸರ ವಾದಿ ಹಾಗೂ ಚಿಪ್ಕೋ ಚಳುವಳಿಯ ರೂವಾರಿ ಸುಂದರ್ ಲಾಲ್ ಬಹುಗುಣ ಅವರು, ಇಂದು ಕೊರೋನಾ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ಬಹುಗುಣ ಅವರು ಕೊರೋನಾ(Corona)ಗೆ ಒಳಗಾಗಿದ್ದರು, ಹೃಷಿಕೇಶ್ ನಲ್ಲಿರುವ ಏಮ್ಸ್ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ : Madhya Pradesh Govt : 'ಕೊರೋನಾದಿಂದ ಮೃತಪಟ್ಟ ಕುಟುಂಬಸ್ಥರಿಗೆ 1 ಲಕ್ಷ ರೂ. ಪರಿಹಾರ'
ಸುಂದರ್ ಲಾಲ್ ಬಹುಗುಣ(Sundarlal Bahuguna) ಅವರು ಜನವರಿ 9 , 1927 ರಲ್ಲಿ ಜನಿಸಿದ್ದಾರೆ. ಹಿಮಾಲಯದಲ್ಲಿ ಕಾಡುಗಳ ಸಂರಕ್ಷಣೆಗಾಗಿ ಹಲವು ವರ್ಷಗಳಿಂದ ಅವರು ಹೋರಾಟ ಮಾಡುತ್ತಿದ್ದರು. ಇವರು ಭಾರತದ ಆರಂಭಿಕ ಪರಿಸರವಾದಿಗಳಲ್ಲಿ ಒಬ್ಬರಾಗಿದ್ದಾರೆ.
Gadchiroli Encounter: ಗಡಚಿರೋಲಿ ಬಳಿ ಕಮಾಂಡೋ ಪೊಲೀಸ್ ಹಾಗೂ ನಕ್ಸಲರ ಮಧ್ಯೆ ಗುಂಡಿನ ಚಕಮಕಿ 13 ನಕ್ಸಲರ ಹತ್ಯೆ
ಸುಂದರ್ ಲಾಲ್ ಬಹುಗುಣ ರವರು ಉತ್ತರಖಂಡ(Uttarakhand)ದ ತೆಹ್ರಿ ಬಳಿ ಮರೊಡ ಎಂಬ ಹಳ್ಳಿಯಲ್ಲಿ 9 ಜನವರಿ 1927 ರಂದು ಜನಿಸಿದರು. ಬಹುಗುಣ ಅವರು 13ನೇ ವಯಸ್ಸಿನಲ್ಲಿ ಶ್ರೀ ದೇವ್ ಸುಮನ್ ರವರ ಮಾರ್ಗದರ್ಶನದಲ್ಲಿ ಸಾಮಾಜಿಕ ಚಟುವಟಿಕೆಗಳನ್ನು ಪ್ರಾರಂಭಿಸಿದರು. ಬಹುಗುಣರವರು 1947 ರ ಮುಂಚಿತವಾಗಿ ವಸಾಹತು ಆಡಳಿತದ ವಿರುದ್ಧ ಜನರನ್ನು ಸಜ್ಜುಗೊಳಿಸಿದ್ದರು. ಅವರು ತಮ್ಮ ಜೀವನದಲ್ಲಿ ಗಾಂಧಿವಾದಿ ತತ್ವಗಳನ್ನು ಅಳವಡಿಸಿಕೊಂಡಿದ್ದರು. ಗಾಂಧಿಯವರ ಪ್ರೇರಣೆಯಿಂದಾಗಿ, ಸುಮಾರು 4700 ಕಿಲೋಮೀಟರ್ ನಷ್ಟು ಹಿಮಾಲಯ ಕಾಡು ಹಾಗೂ ಬೆಟ್ಟಗಳ ನಡುವೆ ಪಾದಯಾತ್ರೆಯನ್ನು ಮಾಡಿ ಮೆಗಾ ಅಭಿವೃದ್ಧಿ ಯೋಜನೆಯಿಂದ ಹಿಮಾಲಯದ ಪರಿಸರಕ್ಕೆ ಆದ ಹಾನಿಯನ್ನು ಗಮನಿಸಿದರು.
ಇದನ್ನೂ ಓದಿ : ಅಗ್ಗದ ಬೆಲೆಯಲ್ಲಿ ಚಿನ್ನ ಖರೀದಿಸಲು ಇಂದೇ ಕೊನೆಯ ಅವಕಾಶ
ಚಿಪ್ಕೊ ಚಳುವಳಿ(Chipko Movement)ಯು ಕಾಡು ಪ್ರದೇಶ ಹಾಗೂ ಕಾಡಿನ ಮರಗಳನ್ನು ರಕ್ಷಿಸಲು ಉತ್ತರಪ್ರದೇಶದಲ್ಲಿ 26 ಮಾರ್ಚ್ 1974 ರಂದು ಪ್ರಾರಂಭಿಸಿದರು. ಹಳ್ಳಿ ಹಳ್ಳಿಗೆ ಪ್ರಯಾಣ ಬೆಳೆಸುವ ಮೂಲಕ ಚಳುವಳಿಗೆ ಬೆಂಬಲವನ್ನು ಪಡೆದರು. ಚಿಪ್ಕೊ ಚಳುವಳಿಯು, ಕರ್ನಾಟಕದಲ್ಲಿ ಅಪ್ಪಿಕೊ ಚಳುವಳಿಗೆ ಸ್ಫೂರ್ತಿಯನ್ನು ನೀಡಿತು. ಬಹುಗುಣರವರು 'ಪರಿಸರವು ಶಾಶ್ವತ ಆರ್ಥಿಕತೆ' ಎಂಬ ಚಿಪ್ಕೊ ಘೋಷಣೆಯನ್ನು ರಚಿಸಿದ್ದಾರೆ. ಅವರು ಚಳುವಳಿಯನ್ನು ಇನ್ನಷ್ಟು ಪ್ರಾಮುಖ್ಯಗೊಳಿಸಲು 1981 ರಿಂದ 1983 ರವರೆಗೆ ಹಳ್ಳಿಯಿಂದ ಹಳ್ಳಿಗೆ ಪ್ರಯಾಣ ಮಾಡಿ ಚಳುವಳಿಗೆ ಬೆಂಬಲವನ್ನು ಪಡೆದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.