Bhopal Gas Leaks: ಬುಧವಾರ ತಡರಾತ್ರಿ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನೀರಿನ ಟ್ಯಾಂಕ್‌ನಿಂದ ಕ್ಲೋರಿನ್ ಅನಿಲ ಸೋರಿಕೆಯಾಗಿದ್ದು ಇಬ್ಬರು ಮಕ್ಕಳು ಸೇರಿದಂತೆ 15 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಧಿಕೃತ ಮಾಹಿತಿಯ ಪ್ರಕಾರ, ಕನಿಷ್ಠ ನಾಲ್ಕೈದು ಜನರನ್ನು ಹಮಿಡಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಭೋಪಾಲ್‌ನ ಈದ್ಗಾ ಪ್ರದೇಶದಲ್ಲಿರುವ ಮದರ್ ಇಂಡಿಯಾ ಕಾಲೋನಿಯಲ್ಲಿ ಈ ಘಟನೆ ನಡೆದಿದೆ.
ನಗರದ ಮದರ್ ಇಂಡಿಯಾ ಕಾಲೋನಿಯಲ್ಲಿರುವ ನೀರು ಶುದ್ಧೀಕರಣ ಘಟಕದಲ್ಲಿ ಅಳವಡಿಸಲಾಗಿದ್ದ ಕ್ಲೋರಿನ್ ಸಿಲಿಂಡರ್ ನಿಂದ ಅನಿಲ ಸೋರಿಕೆಯಾಗಿದೆ. ಇದರ ಪರಿಣಾಮವಾಗಿ ಹಲವರಿಗೆ ಕಣ್ಣುಗಳಲ್ಲಿ ಉರಿ ಕಾಣಿಸಿಕೊಂಡರೆ, ಇನ್ನೂ ಕೆಲವರಿಗೆ ಉಸಿರಾಟದ ಸಮಸ್ಯೆ ಎದುರಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಆಡಳಿತವು ಕಾರ್ಯಪ್ರವೃತ್ತವಾಯಿತು. ವೈದ್ಯಕೀಯ ತಂಡವು ಸ್ಥಳಕ್ಕೆ ತಲುಪಿ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಅಗತ್ಯವಿರುವವರನ್ನು ಆಸ್ಪತ್ರೆಗೆ ರವಾನಿಸಲಾಯಿತು.
ಘಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಅವಿನಾಶ್ ಲವಾನಿಯಾ ಮಾತನಾಡಿ, ಟ್ಯಾಂಕ್‌ನಿಂದ ಕ್ಲೋರಿನ್ ಅನಿಲ ಬಿಡುಗಡೆಯಾಗಿದ್ದರಿಂದ ಜನರು ಭಯಭೀತರಾಗಿ ಮನೆಯಿಂದ ಹೊರ ಬಂದಿದ್ದಾರೆ. ನೀರಿನಲ್ಲಿ ಕ್ಲೋರಿನ್ ಹೆಚ್ಚಿರುವುದರಿಂದ ಸಮಸ್ಯೆ ಉಂಟಾಗಿದೆ, ಆದರೂ ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ- 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಪಕ್ಷದ ಶೇ 50ರಷ್ಟು ಸ್ಥಾನ..!
ಪಾಲಿಕೆ ಅಧಿಕಾರಿಗಳು ನೀರಿನಲ್ಲಿ ಕ್ಲೋರಿನ್ ಮಟ್ಟವನ್ನು ಕಡಿಮೆ ಮಾಡಲು ಪ್ರಾರಂಭಿಸಿದ್ದಾರೆ. ಟ್ಯಾಂಕ್‌ನಿಂದ ನೀರು ಉಕ್ಕಿ ಹರಿದಿದ್ದರಿಂದ ಜನರು ತುರಿಕೆ ಮತ್ತು ಉಸಿರಾಟದ ತೊಂದರೆ ಅನುಭವಿಸಿದರು. ನಾಲ್ಕೈದು ಜನರನ್ನು ಹಮಿಡಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದವರು ತಿಳಿಸಿದರು. ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್ ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಆಸ್ಪತ್ರೆಗೆ ದಾಖಲಾಗಿರುವ ಜನರನ್ನು ಭೇಟಿ ಮಾಡಿದ್ದಾರೆ.
ಹಮೀಡಿಯಾ ಆಸ್ಪತ್ರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ವಿಶ್ವಾಸ್ ಸಾರಂಗ್, ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಜನರು ಭಯಪಡಬಾರದು. ಕಣ್ಣಿನ ಉರಿ ಅಥವಾ ಉಸಿರಾಟದ ತೊಂದರೆಗಳ ಬಗ್ಗೆ ದೂರು ನೀಡುವ ಯಾವುದೇ ವ್ಯಕ್ತಿಗೆ ವೈದ್ಯಕೀಯ ತಂಡಗಳನ್ನು ನಿಯೋಜಿಸಲಾಗಿದೆ. ಈ ಹಂತದಲ್ಲಿ ನಾವು ಏನನ್ನೂ ಹೇಳಲು ಸಾಧ್ಯವಿಲ್ಲ. ಈ ಸಮಸ್ಯೆ ಹೇಗೆ ಸಂಭವಿಸಿತು ಎಂಬುದನ್ನು ಕಂಡುಹಿಡಿಯಲು ತನಿಖೆ ನಡೆಸಲಾಗುವುದು ಎಂದರು.
ಇದನ್ನೂ ಓದಿ- ಕಾಂಗ್ರೆಸ್ ಪಕ್ಷದ ಸಂಘಟನೆಗೆ ಖರ್ಗೆ ಮೇಜರ್ ಸರ್ಜರಿ..!
ಅನಿಲ ಸೋರಿಕೆಯಿಂದ ಭೋಪಾಲ್ ಜನತೆಗೆ ಆತಂಕವೇಕೆ?
ಶಹಜಹಾನಾಬಾದ್‌ನ ಮದರ್ ಇಂಡಿಯಾ ಕಾಲೋನಿಯಲ್ಲಿ ಕ್ಲೋರಿನ್ ಅನಿಲ ಸೋರಿಕೆ ಘಟನೆಯು ಸಾರ್ವಜನಿಕರಲ್ಲಿ ಭೀತಿಯನ್ನು ಉಂಟುಮಾಡಿದೆ. ಏಕೆಂದರೆ 1984 ರಲ್ಲಿ ರಾಜ್ಯ ರಾಜಧಾನಿಯ ಜನರು ಅದೇ ಪರಿಸ್ಥಿತಿಗೆ ಸಾಕ್ಷಿಯಾಗಿದ್ದರು, ವಿಷಕಾರಿ ಅನಿಲ ಸೋರಿಕೆಯು ಅನೇಕ ಜೀವಗಳನ್ನು ಬಲಿ ತೆಗೆದುಕೊಂಡಿತು ಮತ್ತು ಲಕ್ಷಾಂತರ ಜನರನ್ನು ಬಾಧಿಸಿತ್ತು. 1984 ರಲ್ಲಿ, ಡಿಸೆಂಬರ್ 2-3 ರ ಮಧ್ಯರಾತ್ರಿಯಲ್ಲಿ, ಭೋಪಾಲ್‌ನ ಯೂನಿಯನ್ ಕಾರ್ಬೈಡ್ ಕಾರ್ಖಾನೆಯಿಂದ ಅನಿಲ ಸೋರಿಕೆ ದುರಂತ ನಡೆದಿತ್ತು. ಈ ಘಟನೆಯನ್ನು ವಿಶ್ವದ ಅತಿದೊಡ್ಡ ರಾಸಾಯನಿಕ ದುರಂತ ಎಂದು ಕರೆಯಲಾಗುತ್ತದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ