ನವದೆಹಲಿ : ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರು ತಮ್ಮ ಉತ್ತರಾಧಿಕಾರಿಯ ನೇಮಕ ಪ್ರಕ್ರಿಯೆಗೆ ಗುರುವಾರ ಚಾಲನೆ ನೀಡಿದ್ದು, ಅತ್ಯಂತ ಹಿರಿಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರ ಹೆಸರನ್ನು ಕೇಂದ್ರಕ್ಕೆ ಶಿಫಾರಸು ಮಾಡಿದ್ದಾರೆ. ಸಿಜೆಐ ಖುದ್ದು ತಮ್ಮ ಶಿಫಾರಸು ಪತ್ರದ ಪ್ರತಿಯನ್ನು ನ್ಯಾಯಮೂರ್ತಿ ಲಲಿತ್ ಅವರಿಗೆ ಹಸ್ತಾಂತರಿಸಿದರು.


COMMERCIAL BREAK
SCROLL TO CONTINUE READING

2021 ರ ಏಪ್ರಿಲ್ 24 ರಂದು ಎಸ್ ಎ ಬೋಬ್ಡೆ ಅವರಿಂದ ಭಾರತೀಯ ನ್ಯಾಯಾಂಗದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ಭಾರತದ 48 ನೇ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ರಮಣ ಅವರು 16 ತಿಂಗಳ ಅವಧಿಯ ನಂತರ ಆಗಸ್ಟ್ 26 ರಂದು ನಿವೃತ್ತರಾಗಲಿದ್ದಾರೆ. ಆಗಸ್ಟ್ 27 ರಂದು ನ್ಯಾಯಾಂಗದ ಮುಖ್ಯಸ್ಥರಾಗಿ ನೇಮಕಗೊಳ್ಳಲಿರುವ ನ್ಯಾಯಮೂರ್ತಿ ಲಲಿತ್ ಅವರು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಮೂರು ತಿಂಗಳಿಗಿಂತ ಕಡಿಮೆ ಅವಧಿಯನ್ನು ಹೊಂದಿರುತ್ತಾರೆ. ಅವರು ಈ ವರ್ಷ ನವೆಂಬರ್ 8 ರಂದು ನಿವೃತ್ತರಾಗುತ್ತಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.