ಕ್ಲಾಸ್ ಮೇಟ್ ಮೇಲೆ 10ನೇ ತರಗತಿ ವಿದ್ಯಾರ್ಥಿಯಿಂದ ಅತ್ಯಾಚಾರ
ಆರೋಪಿ ವಿದ್ಯಾರ್ಥಿ ವಿರುದ್ಧ ಐಪಿಸಿ ಸೆಕ್ಷನ್ 376ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಪುಣೆ: ಹತ್ತನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕೊಥ್ರುಡ್ ಪೋಲಿಸ್ ಠಾಣೆಯಲ್ಲಿ ದೂರು ಸೋಮವಾರ ದೂರು ದಾಖಲಾಗಿದೆ.
ಶನಿವಾರ ಸಂಜೆ ಸುಮಾರು 6.45ರ ಸಮಯದಲ್ಲಿ ಟ್ಯೂಶನ್'ಗೆ ಹೋಗುತ್ತಿದ್ದ ಹುಡುಗಿಯನ್ನು ನಿಲ್ಲಿಸಿ, ಆಕೆಯೊಂದಿಗೆ ಏನೋ ಮಾತನಾಡಬೇಕೆಂದು ಹೇಳಿ, ಬ್ಯಾಗ್ ಕಿತ್ತುಕೊಂಡು, ಕೈಹಿಡಿದು ಬಲವಂತವಾಗಿ ಎಳೆದೊಯ್ದಿದ್ದಾನೆ. ಬಳಿಕ ಹತ್ತಿರದ ಕಟ್ಟಡದ ಟೆರೇಸ್ ಮೇಲೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಈ ವಿಚಾರವನ್ನು ಹುಡುಗಿ ತನ್ನ ತಾಯಿಗೆ ವಿವರಿಸಿದ್ದಾಳೆ. ಬಳಿಕ ಆಕೆಯ ತಾಯಿ ಪೋಲಿಸ್ ಠಾಣೆಯಲ್ಲಿ ದೂರು ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಆರೋಪಿ ವಿದ್ಯಾರ್ಥಿ ವಿರುದ್ಧ ಐಪಿಸಿ ಸೆಕ್ಷನ್ 376ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.