ಬೆಂಗಳೂರು: ಭಾರೀ ಮಳೆಯಿಂದಾಗಿ ಉಂಟಾಗಿರುವ ಪ್ರವಾಹದಿಂದ ತತ್ತರಿಸಿರುವ ದೇವರ ನಾಡು ಖ್ಯಾತಿಯ ಕೇರಳ ರಾಜ್ಯಕ್ಕೆ ಕರ್ನಾಟಕ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸಹಾಯ ಹಸ್ತ ಚಾಚಿದ್ದಾರೆ. 


COMMERCIAL BREAK
SCROLL TO CONTINUE READING

ಕೇರಳದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಕುರಿತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜತೆ ಮಾತುಕತೆ ನಡೆಸಿರುವ ಸಿಎಂ ಕುಮಾರಸ್ವಾಮಿ, ಕೇರಳಕ್ಕೆ 10 ಕೋಟಿ ರೂ. ಮೌಲ್ಯದ ಪರಿಹಾರ ಸಾಮಗ್ರಿಗಳನ್ನು ರವಾನೆ ಮಾಡುವಂತೆ ಹಾಗೂ ವೈದ್ಯರ ತಂಡ ಕಳುಹಿಸಿ ಕೊಡುವಂತೆ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರಿಗೆ ನಿರ್ದೇಶನ ನೀಡಿದ್ದಾರೆ.




ಕೇರಳದಲ್ಲಿ ಧಾರಾಕಾರ ಮಳೆಗೆ ಪ್ರವಾಹ ಉಂಟಾಗಿ, ವ್ಯಾಪಕ ಹಾನಿಯುಂಟಾಗಿದ್ದು, ಭೂ ಕುಸಿತ ಮತ್ತು ಪ್ರವಾಹದಿಂದಾಗಿ ಈವರೆಗೂ 26 ಜನ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೇ ಎನ್ನಲಾಗಿದೆ.