ನವದೆಹಲಿ: ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆಗೆ ಉಂಟಾಗಿರುವ ತೊಡಕು ನಿವಾರಿಸಲು ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಲು ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಸಮ್ಮತಿ ಸೂಚಿಸಿದ್ದಾರೆ.


COMMERCIAL BREAK
SCROLL TO CONTINUE READING

ಬುಧವಾರ ಕೇಂದ್ರ ಭೂಸಾರಿಗೆ, ಹೆದ್ದಾರಿ ಮತ್ತು ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಮೇಕೆದಾಟು ಯೋಜನೆ ಜಾರಿಗೆ ತಮಿಳುನಾಡು ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದ್ದು, ವಾಸ್ತವವಾಗಿ  ಮೇಕೆದಾಟು ಯೋಜನೆಯಿಂದ ಎರಡೂ ರಾಜ್ಯಗಳಿಗೆ, ಅದರಲ್ಲೂ ತಮಿಳುನಾಡಿಗೇ ಹೆಚ್ಚು ಅನುಕೂಲವಾಗಲಿದೆ ಎಂದು ಮನವರಿಕೆ ಮಾಡಿಕೊಟ್ಟರು.
ಈ ಕುರಿತು ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿ, ಈ ವಿಷಯವನ್ನು ಬಗೆಹರಿಸುವಂತೆ ಮನವಿ ಮಾಡಿದರು. ಕುಮಾರಸ್ವಾಮಿ ಮನವಿಗೆ ಸ್ಪಂದಿಸಿದ ನಿತಿನ್ ಗಡ್ಕರಿ ಕರ್ನಾಟಕ ಮತ್ತು ತಮಿಳುನಾಡು ಮುಖ್ಯಮಂತ್ರಿಗಳ ಸಭೆ ಕರೆದು ಸಮಸ್ಯೆ ಬಗೆಹರಿಸಲು ಸಹಮತಿ ವ್ಯಕ್ತಪಡಿಸಿದರು.



ಮಹಾದಾಯಿ ನ್ಯಾಯಾಧಿಕರಣ ತೀರ್ಪಿಗೆ ಸಂಬಂಧಿಸಿದಂತೆ ಗೋವಾ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿರುವುದರಿಂದ ರಾಜ್ಯದ ಪಾಲಿನ ನೀರಿನ ಬಳಕೆಗೆ ಅಡ್ಡಿಯಾಗಿದೆ. ಈ ಹಿನ್ನೆಲೆಯಲ್ಲಿ ಗೋವಾ ಸರ್ಕಾರದೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವಂತೆ ಕೂಡ ಕುಮಾರಸ್ವಾಮಿ ಮನವಿ ಮಾಡಿದರು. ಈ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವ ಗಡ್ಕರಿ ಅವರು ಗೋವಾ ಸರ್ಕಾರದೊಂದಿಗೆ ಮಾತುಕತೆ ನಡೆಸುವುದಾಗಿ ಭರವಸೆ ನೀಡಿದರು.


ಮಹಾದಾಯಿ ನ್ಯಾಯಾಧಿಕರಣ ತೀರ್ಪಿಗೆ ಸಂಬಂಧಿಸಿದಂತೆ ಗೋವಾ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿರುವುದರಿಂದ ರಾಜ್ಯದ ಪಾಲಿನ ನೀರಿನ ಬಳಕೆಗೆ ಅಡ್ಡಿಯಾಗಿದೆ. ಈ ಹಿನ್ನೆಲೆಯಲ್ಲಿ ಗೋವಾ ಸರ್ಕಾರದೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದರು. ಈ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವ ಗಡ್ಕರಿ ಅವರು ಗೋವಾ ಸರ್ಕಾರದೊಂದಿಗೆ ಮಾತುಕತೆ ನಡೆಸುವುದಾಗಿ ಭರವಸೆ ನೀಡಿದರು.