ಅಯೋಧ್ಯೆಗೆ ಇಂದು ಸಿಎಂ ಯೋಗಿ ಭೇಟಿ: ಮಂದಿರ ನಿರ್ಮಾಣ ಕಾಮಗಾರಿ ಪರಿಶೀಲನೆ
Yogi Adityanath: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಮೊದಲಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಮಕಥಾ ಪಾರ್ಕ್ ಹೆಲಿಪ್ಯಾಡ್ ತಲುಪಲಿದ್ದಾರೆ.
Yogi Adityanath Ayodhya Visit: ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು ಇಂದು (ಶನಿವಾರ) ಮತ್ತೊಮ್ಮೆ ಅಯೋಧ್ಯೆಗೆ ತೆರಳಿದ್ದಾರೆ. ಈ ವೇಳೆ ರಾಮ ಮಂದಿರ ನಿರ್ಮಾಣದ ಜತೆಗೆ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಸಿಎಂ ಯೋಗಿ ಮಾಹಿತಿ ಪಡೆಯಲಿದ್ದು, ಅಯೋಧ್ಯೆಯ ಹಲವು ಸಂತರನ್ನು ಭೇಟಿ ಮಾಡಲಿದ್ದಾರೆ. ಅಯೋಧ್ಯೆಯ ವಿವಿಧ ಸ್ಥಳಗಳನ್ನು ತಲುಪುವ ಕಾರ್ಯಕ್ರಮವನ್ನು ಸುಮಾರು 2 ಗಂಟೆಗಳ ಕಾಲ ನಿಗದಿಪಡಿಸಲಾಗಿದೆ.
ಇದನ್ನೂ ಓದಿ: ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ: 26 ಟನ್ ಅಕ್ಕಿ ವಶಕ್ಕೆ!
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಮೊದಲಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಮಕಥಾ ಪಾರ್ಕ್ ಹೆಲಿಪ್ಯಾಡ್ ತಲುಪಲಿದ್ದಾರೆ. ಇದಾದ ಬಳಿಕ ದಿವಂಗತ ರಾಮಚಂದ್ರ ಪರಮಹಂಸ ದಾಸ್ ಅವರ ಸಮಾಧಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ನಂತರ ರಾಮಜನ್ಮಭೂಮಿ ಸಂಕೀರ್ಣಕ್ಕೆ ತೆರಳಲಿದ್ದಾರೆ.
ಅಯೋಧ್ಯೆ ಪ್ರವಾಸದಲ್ಲಿ ಸಿಎಂ ಯೋಗಿ:
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಮ ಜನ್ಮಭೂಮಿ ಸಂಕೀರ್ಣಕ್ಕೆ ತೆರಳಿ ಅಲ್ಲಿ ರಾಮ ದೇವರಿಗೆ ಪೂಜೆ ಸಲ್ಲಿಸಲಿದ್ದಾರೆ. ಇದಾದ ಬಳಿಕ ನಿರ್ಮಾಣ ಹಂತದಲ್ಲಿರುವ ರಾಮ ಮಂದಿರ, ಪ್ರಯಾಣಿಕರ ಸೌಲಭ್ಯ ಮತ್ತಿತರ ಕಾಮಗಾರಿಗಳನ್ನು ಪರಿಶೀಲಿಸಲಿದ್ದಾರೆ.
ದಿಗಂಬರ ಅಖಾಡದಲ್ಲಿ ಸ್ವಾಗತಕ್ಕೆ ಸಿದ್ಧತೆ:
ಸಿಎಂ ಯೋಗಿ ಆದಿತ್ಯನಾಥ್ ಅಯೋಧ್ಯೆಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ದಿಗಂಬರ ಅಖಾಡದಲ್ಲಿ ಸ್ವಾಗತಿಸಲು ಸಿದ್ಧತೆಗಳು ನಡೆದಿರುವುದು ಗಮನಾರ್ಹ. ಸಿಎಂ ಯೋಗಿ ಅವರನ್ನು ಸ್ವಾಗತಿಸಲು ದಿಗಂಬರ ಅಖಾಡವನ್ನು ಹೂವಿನಿಂದ ಅಲಂಕರಿಸಲಾಗಿದೆ. ಇದಲ್ಲದೇ ಇಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಎಲ್ಲೆಡೆ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಇದನ್ನೂ ಓದಿ: ಐರ್ಲೆಂಡ್ ವಿರುದ್ಧ ಗೆಲ್ಲುತ್ತಿದ್ದಂತೆ ಜಸ್ಪ್ರೀತ್ ಬುಮ್ರಾ ಪಾಲಿಗೆ ಸೇರಿತು 2 ಶ್ರೇಷ್ಠ ದಾಖಲೆ!
ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಭವ್ಯ ಮಂದಿರದ ನಿರ್ಮಾಣ ಕಾರ್ಯ ವೇಗವಾಗಿ ನಡೆಯುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ