Yogi Adityanath : ಯುಪಿಯಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ : ವಿಜಯೋತ್ಸವ ಆಚರಿಸಿದ ಸಿಎಂ ಯೋಗಿ 

ಲಕ್ನೋದ ಬಿಜೆಪಿ ಕಚೇರಿಯಲ್ಲಿ ಅದ್ಧೂರಿಯಾಗಿ ವಿಜಯೋತ್ಸವ ಆಚರಿಸಲಾಗಿದ್ದು, ಪಕ್ಷದ ಕಚೇರಿಯಲ್ಲಿದ್ದ ಕಾರ್ಯಕರ್ತರು ಮತ್ತು ಸಾರ್ವಜನಿಕರಿಗೆ ಸಿಎಂ ಯೋಗಿ ಕೃತಜ್ಞತೆ ಸಲ್ಲಿಸಿದ್ದಾರೆ.

Written by - Channabasava A Kashinakunti | Last Updated : Mar 10, 2022, 07:32 PM IST
  • ಸಿಎಂ ಯೋಗಿ ಭಾಷಣ
  • ಸಾರ್ವಜನಿಕರಿಗೆ ಹೇಳಿದ ಧನ್ಯವಾದ ಹೇಳಿದ ಸಿಎಂ ಯೋಗಿ
  • ಭಾರಿ ಬಹುಮತ ಪಡೆದೆ ಬಿಜೆಪಿ
Yogi Adityanath : ಯುಪಿಯಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ : ವಿಜಯೋತ್ಸವ ಆಚರಿಸಿದ ಸಿಎಂ ಯೋಗಿ  title=

ಲಕ್ನೋ : ಉತ್ತರ ಪ್ರದೇಶದ ರಾಜಕೀಯ ಕದನ ಈಗ ನಿಲ್ಲುವ ಹಂತದಲ್ಲಿದೆ. ಬಹುತೇಕ ಸ್ಥಾನಗಳಿಗೆ ಫಲಿತಾಂಶ ಪ್ರಕಟವಾಗಿದೆ. ಹೀಗಿರುವಾಗ ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ರಚನೆಯಾಗುತ್ತಿರುವುದು ಈಗ ಸ್ಪಷ್ಟವಾಗಿದೆ. ಲಕ್ನೋದ ಬಿಜೆಪಿ ಕಚೇರಿಯಲ್ಲಿ ಅದ್ಧೂರಿಯಾಗಿ ವಿಜಯೋತ್ಸವ ಆಚರಿಸಲಾಗಿದ್ದು, ಪಕ್ಷದ ಕಚೇರಿಯಲ್ಲಿದ್ದ ಕಾರ್ಯಕರ್ತರು ಮತ್ತು ಸಾರ್ವಜನಿಕರಿಗೆ ಸಿಎಂ ಯೋಗಿ ಕೃತಜ್ಞತೆ ಸಲ್ಲಿಸಿದ್ದಾರೆ.

ವಿಜಯದ ಕ್ರೆಡಿಟ್ ಮತದಾರರಿಗೆ 

ಈ ವೇಳೆ ಮಾತನಾಡಿದ ಯೋಗಿ ಆದಿತ್ಯನಾಥ್(Yogi Adityanath), ಪ್ರಧಾನಿ ಮೋದಿ ನೇತೃತ್ವದಲ್ಲಿ ನಾಲ್ಕು ರಾಜ್ಯಗಳಲ್ಲಿ ಭರ್ಜರಿ ಬಹುಮತದೊಂದಿಗೆ ಸರ್ಕಾರ ರಚನೆಯಾಗಲಿದೆ. ಈ ಸಂದರ್ಭದಲ್ಲಿ ನಾನು ಪ್ರಧಾನಿ ಮೋದಿ, ಜೆಪಿ ನಡ್ಡಾ ಹಾಗೂ ಬಿಜೆಪಿಯ ಎಲ್ಲಾ ನಾಯಕರಿಗೆ ಧನ್ಯವಾದ ಹೇಳುತ್ತೇನೆ ಎಂದು ಹೇಳಿದರು. ಯುಪಿಯು ದೇಶದ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿದೆ ಎಂದು ಅವರು ಹೇಳಿದರು. ಹಾಗಾಗಿಯೇ ದೇಶ, ಜಗತ್ತಿನ ಕಣ್ಣು ಇತ್ತ ನೆಟ್ಟಿತ್ತು. ಇಂತಹ ಪರಿಸ್ಥಿತಿಯಲ್ಲಿ ನಿಶಾದ್ ಪಕ್ಷ ಮತ್ತು ಅಪ್ನಾ ದಳ (ಎಸ್) ಜೊತೆಗೂಡಿ ನಾವು ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಮರಳಿದ್ದೇವೆ. ಈ ಕೊರೊನಾ ಯುಗದಲ್ಲೂ ಇಂತಹ ದೊಡ್ಡ ರಾಜ್ಯದಲ್ಲಿ ಶಾಂತಿಯುತವಾಗಿ ಚುನಾವಣೆ ನಡೆಸಿದ್ದಕ್ಕಾಗಿ ಚುನಾವಣಾ ಆಯೋಗಕ್ಕೆ ಧನ್ಯವಾದಗಳು ಎಂದು ಹೇಳಿದರು.

ಇದನ್ನೂ ಓದಿ : ಶೀಘ್ರದಲ್ಲೇ ಆಮ್ ಆದ್ಮಿ ಪಕ್ಷಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ..!

5 ವರ್ಷಗಳ ಕೆಲಸದ ಫಲಿತಾಂಶಗಳು

ಬಿಜೆಪಿ(BJP)ಯ ಡಬಲ್ ಇಂಜಿನ್ ಸರ್ಕಾರ ಯುಪಿಯಲ್ಲಿ 5 ವರ್ಷಗಳಲ್ಲಿ ಭದ್ರತೆಯ ವಾತಾವರಣವನ್ನು ನಿರ್ಮಿಸಿದೆ, ಅನೇಕ ಯೋಜನೆಗಳು ಬಡ ಜನರಿಗೆ ಪ್ರಯೋಜನವನ್ನು ನೀಡಿದೆ, ಇದರ ಪರಿಣಾಮವೇ ಸಾರ್ವಜನಿಕರು ಬಿಜೆಪಿಯಲ್ಲಿ ನಂಬಿಕೆ ಇಟ್ಟಿದ್ದಾರೆ ಎಂದು ಸಿಎಂ ಯೋಗಿ ಹೇಳಿದರು.

ಲಕ್ನೋದಲ್ಲಿ ಪಕ್ಷದ ಎಲ್ಲ ನಾಯಕರು ಉಪಸ್ಥಿತರು

ಈ ಭಾಷಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸ್ವತಂತ್ರ ದೇವ್ ಸಿಂಗ್(Swatantra Dev Singh), ಉಪಮುಖ್ಯಮಂತ್ರಿ ದಿನೇಶ್ ಶರ್ಮಾ, ಕೇಶವ್ ಪ್ರಸಾದ್ ಮೌರ್ಯ ಮತ್ತು ಮಿತ್ರ ನಿಶಾದ್ ಪಕ್ಷದ ಅಧ್ಯಕ್ಷ ಸಂಜಯ್ ನಿಶಾದ್ ಕೂಡ ಲಕ್ನೋದ ಪಕ್ಷದ ಕಚೇರಿಯಲ್ಲಿದ್ದಾರೆ.

ಇದನ್ನೂ ಓದಿ : ಪಂಚರಾಜ್ಯ ಫಲಿತಾಂಶ.. ಆತ್ಮಾವಲೋಕನಕ್ಕೆ ಶೀಘ್ರದಲ್ಲೇ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News