ಆಂಧ್ರ ಪ್ರದೇಶ, ಕರ್ನಾಟಕದ ಕರಾವಳಿ ಭಾಗಗಳಲ್ಲಿ ಇಂದು ಭಾರಿ ಮಳೆ ಸಾಧ್ಯತೆ; ಐಎಂಡಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕನಿಷ್ಠ  21 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ ಎಂದು ಹವಾಮಾನ ಮುನ್ಸೂಚನೆ ಸಂಸ್ಥೆ ತಿಳಿಸಿದೆ.

Last Updated : Oct 13, 2019, 01:20 PM IST
ಆಂಧ್ರ ಪ್ರದೇಶ, ಕರ್ನಾಟಕದ ಕರಾವಳಿ ಭಾಗಗಳಲ್ಲಿ ಇಂದು ಭಾರಿ ಮಳೆ ಸಾಧ್ಯತೆ; ಐಎಂಡಿ title=
File image

ಬೆಂಗಳೂರು: ಆಂಧ್ರಪ್ರದೇಶ, ಯಾನಂ ಮತ್ತು ಕರ್ನಾಟಕದ ಕರಾವಳಿ ಭಾಗಗಳ ಪ್ರತ್ಯೇಕ ಪ್ರದೇಶಗಳಲ್ಲಿ ಭಾನುವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಭವಿಷ್ಯ ನುಡಿದಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕನಿಷ್ಠ  21 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ ಎಂದು ಹವಾಮಾನ ಮುನ್ಸೂಚನೆ ಸಂಸ್ಥೆ  ತಿಳಿಸಿದೆ.

ಆದಾಗ್ಯೂ, ಮುಂಬೈನಲ್ಲಿ ತಾಪಮಾನವು ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಮಧ್ಯಾಹ್ನದವರೆಗೆ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಇದಲ್ಲದೆ, ಉತ್ತರ ಅರೇಬಿಯನ್ ಸಮುದ್ರ, ಗುಜರಾತ್, ಮಧ್ಯಪ್ರದೇಶ, ಛತ್ತೀಸ್‌ಗಢ, ಜಾರ್ಖಂಡ್, ಬಿಹಾರ ಮತ್ತು ಪಶ್ಚಿಮ ಬಂಗಾಳದ ಕೆಲವು ಭಾಗಗಳಿಂದ ನೈಋತ್ಯ ಮಾನ್ಸೂನ್ ನಿನ್ನೆ ಮತ್ತಷ್ಟು ಹಿಂದೆ ಸರಿದಿದೆ.

ಮುಂದಿನ ಎರಡು ದಿನಗಳಲ್ಲಿ ಪೂರ್ವ ಮತ್ತು ಮಧ್ಯ ಭಾರತದ ಹೆಚ್ಚಿನ ಭಾಗಗಳು, ಈಶಾನ್ಯ ಭಾರತದ ಕೆಲವು ಭಾಗಗಳು, ಪಶ್ಚಿಮ ಭಾರತದ ಇನ್ನೂ ಕೆಲವು ಭಾಗಗಳಲ್ಲಿ ನೈಋತ್ಯ ಮಾನ್ಸೂನ್ ಪ್ರಭಾವ ಮತ್ತಷ್ಟು ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Trending News