ಮುಂಬೈ (ಮಹಾರಾಷ್ಟ್ರ): ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 21ರಂದು ಮತದಾನ ನಡೆಯಲಿದೆ. ಸೋಮವಾರ ಮತದಾನಕ್ಕೆ ತೆರಳಿರುವ ಮಹಾರಾಷ್ಟ್ರದ ಕೊಲಾಬಾ ವಿಧಾನಸಭಾ ಕ್ಷೇತ್ರದಲ್ಲಿ ಲೆಕ್ಕವಿಲ್ಲದ 78 ಲಕ್ಷ ರೂ. ಹಣವನ್ನು ಚುನಾವಣಾ ಆಯೋಗ (ಇಸಿ) ಶುಕ್ರವಾರ ವಶಪಡಿಸಿಕೊಂಡಿದೆ. ಒಟ್ಟು ಲೆಕ್ಕವಿಲ್ಲದ ನಗದು 78,70,000 ರೂ. ಹಣವನ್ನು ಇಸಿ ತನ್ನ ವಶಕ್ಕೆ ತೆಗೆದುಕೊಂಡಿದೆ.


COMMERCIAL BREAK
SCROLL TO CONTINUE READING

ಗುರುವಾರ, ಒಂದೇ ಕ್ಷೇತ್ರದ ಐದು ಜನರಿಂದ 2.19 ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ. ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆಗೆ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಾಗಿನಿಂದ ಮುಂಬೈಯಿಂದ 15 ಕೋಟಿ ರೂ.ಗಳ ಲೆಕ್ಕವಿಲ್ಲದ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಐಟಿ ಇಲಾಖೆ ತಿಳಿಸಿದೆ.


"ಮಹಾರಾಷ್ಟ್ರ ರಾಜ್ಯದಲ್ಲಿ 2019 ರ ವಿಧಾನಸಭಾ ಚುನಾವಣೆಗೆ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಾಗಿನಿಂದ ಮುಂಬೈನಲ್ಲಿ ಅಂದಾಜು 15.5 ಕೋಟಿ ರೂ. ಹಣವನ್ನು ಆದಾಯ ತೆರಿಗೆ ಇಲಾಖೆ ವಶಪಡಿಸಿಕೊಂಡಿದೆ" ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಿಗೆ ಇದೇ ಅಕ್ಟೋಬರ್ 21 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಅಕ್ಟೋಬರ್ 24 ರಂದು ಮತ ಎಣಿಕೆ ನಡೆಯಲಿದೆ.