ಒಂದು ವಾರಗಳ ಸಂಪೂರ್ಣ ಲಾಕ್ ಡೌನ್ ಫೋಷಿಸಿದ ದೆಹಲಿ ಸರ್ಕಾರ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  ಅವರು ಉಪರಾಜ್ಯಪಾಲರೊಂದಿಗಿನ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಲಾಕ್ ಡೌನ್  ಬಗ್ಗೆ ಪ್ರಕಟಿಸಿದ್ದಾರೆ.    

Written by - Ranjitha R K | Last Updated : Apr 19, 2021, 02:22 PM IST
  • ದೆಹಲಿಯಲ್ಲಿ ಒಂದು ವಾರ ಸಂಪೂರ್ಣ ಲಾಕ್ ಡೌನ್
  • ದೆಹಲಿಯಲ್ಲಿ ಬೆಡ್ ಮತ್ತು ಆಕ್ಸಿಜನ್ ಕೊರತೆ : ಅರವಿಂದ್ ಕೇಜ್ರಿವಾಲ್
  • ದೆಹಲಿ ಬಿಡದಂತೆ ವಲಸೆ ಕಾರ್ಮಿಕರಲ್ಲಿ ಕೇಜ್ರಿವಾಲ್ ಮನವಿ
ಒಂದು ವಾರಗಳ ಸಂಪೂರ್ಣ ಲಾಕ್ ಡೌನ್ ಫೋಷಿಸಿದ ದೆಹಲಿ ಸರ್ಕಾರ title=
ದೆಹಲಿಯಲ್ಲಿ ಒಂದು ವಾರ ಸಂಪೂರ್ಣ ಲಾಕ್ ಡೌನ್ (file photo)

ನವದೆಹಲಿ: ದೇಶದ ರಾಜಧಾನಿಯಾದ ದೆಹಲಿಯಲ್ಲಿ ಕರೋನಾ ವೈರಸ್‌ (Coronavirus) ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಇದೀಗ ಪರಿಸ್ಥಿತಿ ದೆಹಲಿಯಲ್ಲಿ ಸಂಪೂರ್ಣ ಲಾಕ್‌ಡೌನ್ (Lockdown) ವಿಧಿಸಲು ದೆಹಲಿ ಸರ್ಕಾರ ನಿರ್ಧರಿಸಿದೆ. ರಾಜಧಾನಿ ದೆಹಲಿಯಲ್ಲಿ ಇಂದು ರಾತ್ರಿ 10 ಗಂಟೆಯಿಂದ ಪೂರ್ಣ ಲಾಕ್‌ಡೌನ್ ಪ್ರಾರಂಭವಾಗಲಿದೆ.  ಮುಂದಿನ ಸೋಮವಾರ ಅಂದರೆ ಏಪ್ರಿಲ್ 26 ರ ಬೆಳಿಗ್ಗೆ 5 ಗಂಟೆಯವರೆಗೆ ಲಾಕ್ ಡೌನ್ ಇರಲಿದೆ. 

ದೆಹಲಿಯಲ್ಲಿ ಬೆಡ್ ಮತ್ತು ಆಕ್ಸಿಜನ್ ಕೊರತೆ : ಅರವಿಂದ್ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Aravind Kejriwal) ಅವರು ಉಪರಾಜ್ಯಪಾಲರೊಂದಿಗಿನ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಲಾಕ್ ಡೌನ್ (Lockdown) ಬಗ್ಗೆ ಪ್ರಕಟಿಸಿದ್ದಾರೆ.  ಈ ವೇಳೆ ಮಾತನಾಡಿದ ಅವರು,  ನಾವು ಯಾವತ್ತೂ ಸಾರ್ವಜನಿಕರಿಗೆ ಸುಳ್ಳು ಹೇಳಲಿಲ್ಲ, ಎಲ್ಲಾ  ಸಂದರ್ಭಗಳಲ್ಲೂ ಸಾರ್ವಜನಿಕರಿಗೆ ಸರಿಯಾದ ಮಾಹಿತಿಯನ್ನೇ ನೀಡಿದ್ದೇವೆ ಎಂದಿದ್ದಾರೆ. ದೆಹಲಿಯಲ್ಲಿ ಕರೋನಾದ (Coronavirus) ಸ್ಥಿತಿ ಬಹಳ ಗಂಭೀರವಾಗಿದೆ.  ಪ್ರತಿದಿನ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಆಸ್ಪತ್ರೆಗಳಲ್ಲಿ ಬೆಡ್ ಮತ್ತು ಆಕ್ಸಿಜನ್ (Oxygen) ಕೊರತೆ ಇದೆ ಎಂದು ಹೇಳಿದ್ದಾರೆ. ಇದಕ್ಕಾಗಿ ಕೇಂದ್ರ ಸರ್ಕಾರದ ನೆರವನ್ನು ಕೋರಿರುವುದಾಗಿಯೂ ತಿಳಿಸಿದ್ದಾರೆ.  

ಇದನ್ನೂ ಓದಿ : COVID-19 : ಈ 6 ರಾಜ್ಯಗಳಿಂದ ಪ್ರಯಾಣಿಸುವ ರೈಲ್ವೆ ಪ್ರಯಾಣಿಕರಿಗೆ ಕೋವಿಡ್-19 ನೆಗೆಟಿವ್ ರಿಪೋರ್ಟ್ ಕಡ್ಡಾಯ!

ಯಾವುದಕ್ಕೆಲ್ಲಾ ನಿಷೇಧವಿರಲಿದೆ : 
ಲಾಕ್ ಡೌನ್ ಸಮಯದಲ್ಲಿ ಅಗತ್ಯ ಸೇವೆಗಳು ಕಾರ್ಯನಿರ್ವಹಿಸಲಿವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಈ ಸಮಯದಲ್ಲಿ ಜನರಿಗೆ ಮದುವೆಗೆ ಇ-ಪಾಸ್ ನೀಡಲಾಗುವುದು, ಆದರೂ ಕೇವಲ 50 ಜನರಿಗೆ ಮಾತ್ರ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ. 'ಅಗತ್ಯ ಸೇವೆಗಳ ಜೊತೆಗೆ ಆಹಾರ ಸೇವೆಗಳು ಮತ್ತು ವೈದ್ಯಕೀಯ ಸೇವೆಗಳಿಗೆ ಯಾವುದೇ ತೊಡಕುಂಟಾಗುವುದಿಲ್ಲ ಎಂದಿದ್ದಾರೆ. 

ದೆಹಲಿ ಬಿಡದಂತೆ ವಲಸೆ ಕಾರ್ಮಿಕರಲ್ಲಿ ಮನವಿ : 
ಇದೇ ವೇಳೆ, ಈ ಸಂದರ್ಭದಲ್ಲಿ ದೆಹಲಿ (Delhi) ಬಿಟ್ಟು ತೆರಳದಂತೆ ವಲಸೆ ಕಾರ್ಮಿಕರಲ್ಲಿ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿದ್ದಾರೆ. ಕಳೆದ ಬಾರಿ  ಲಾಕ್ ಡೌನ್ ಹೇರಿದಾಗ, ಹೆಚ್ಚಿನ ಸಂಖ್ಯೆಯ ವಲಸೆ ಕಾರ್ಮಿಕರು ತಮ್ಮ ಮನೆಗಳಿಗೆ ಹೋಗಲು ಪ್ರಾರಂಭಿಸಿದ್ದರು. ಆದರೆ ಈ ಬಾರಿ ಯಾರೂ ದೆಹಲಿ  ಬಿಡದಂತೆ ಅವರು ಮನವಿ ಮಾಡಿದ್ದಾರೆ. 

ಇದನ್ನೂ ಓದಿ : Corona Strain: ಕಳೆದ 24 ಗಂಟೆಗಳಲ್ಲಿ 2.75 ಲಕ್ಷ ಹೊಸ ಪ್ರಕರಣ, ಕಳವಳ ಹೆಚ್ಚಿಸುವ ಸಾವಿನ ಅಂಕಿ-ಅಂಶ

ಕಳೆದ 24 ಗಂಟೆಗಳಲ್ಲಿ ಒಟ್ಟು 25462 ಹೊಸ ಪ್ರಕರಣಗಳು ವರದಿಯಾಗಿವೆ. 161 ಜನರು ಸಾವನ್ನಪ್ಪಿದ್ದಾರೆ. ಆರೋಗ್ಯ ಇಲಾಖೆಯ ಅಂಕಿಅಂಶಗಳ ಪ್ರಕಾರ ದೆಹಲಿಯಲ್ಲಿ ಈವರೆಗೆ 8 ಲಕ್ಷ 53 ಸಾವಿರ 460 ಜನರು COVID-19 ಸೋಂಕಿಗೆ ಒಳಗಾಗಿದ್ದಾರೆ. ಇದರಲ್ಲಿ 12121 ಜನರು ಪ್ರಾಣ ಕಳೆದುಕೊಂಡಿದ್ದಾರೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News