ನವದೆಹಲಿ: ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಜೊತೆಗೆ ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಶೀಲಾ ದೀಕ್ಷಿತ್ ಅಂತಿಮ ನಿರ್ಧಾರವನ್ನು ರಾಹುಲ್ ಗಾಂಧಿ ತೆಗೆದುಕೊಳ್ಳುತ್ತಾರೆ ಎಂದು ಪ್ರತಿಕ್ರಿಯಿಸಿದರು.


COMMERCIAL BREAK
SCROLL TO CONTINUE READING

ಹಲವು ದಿನಗಳಿಂದ ಮೈತ್ರಿ ವಿಚಾರ ಗೊಂದಲಕ್ಕೆ ಕಾರಣವಾಗಿದ್ದು,ಈಗ ಶೀಲಾ ದೀಕ್ಷಿತ್ ನೀಡಿರುವ ಹೇಳಿಕೆ ಆಮ್ ಆದ್ಮಿ ಪಕ್ಷದೊಂದಿಗಿನ ಮೈತ್ರಿ ಸಾಧ್ಯತೆಯನ್ನು ಮತ್ತೆ ತೆರೆದಿದೆ.ಆದರೆ ಈ ಕುರಿತಾಗಿ ಇನ್ನು ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ.



ಈಗ ಈ ವಿಚಾರದ ಕುರಿತಾಗಿ ಎಎನ್ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿರುವ ಶೀಲಾ ದೀಕ್ಷಿತ್ "ಯಾವಾಗ ಮೈತ್ರಿ ಕುರಿತು ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆಯೋ ಆಗ ನಾವು ಮಾಧ್ಯಮಗಳಿಗೆ ಮಾಹಿತಿ ನೀಡುತ್ತೇವೆ.ಅಂತಿಮವಾಗಿ ಕಾಂಗ್ರೆಸ್ ಅಧ್ಯಕ್ಷರಾದ ರಾಹುಲ್ ಗಾಂಧಿ ಈ ಕುರಿತು ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ.ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ದ "ಎಂದು ಅವರು ತಿಳಿಸಿದರು. 


ಇದಕ್ಕೂ ಮೊದಲು ಕಾಂಗ್ರೆಸ್ ನಾಯಕ ಪಿಸಿ ಚಕೋ ಮಂಗಳವಾರದಂದು ರಾಹುಲ್ ಗಾಂಧಿ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಎಂದು ಹೇಳಿಕೆ ನೀಡಿದ್ದರು.ಕಾಂಗ್ರೆಸ್ ನ ಲ್ಲಿ ಆಮ್ ಆದ್ಮಿ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಭಿನ್ನಾಭಿಪ್ರಾಯಗಳಿವೆ.ಇನ್ನೊಂದೆಡೆ ಕೇಜ್ರಿವಾಲ್ ಅವರಿಗೆ ದೆಹಲಿಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಇಚ್ಛೆ ಇದೆ ಎನ್ನಲಾಗಿದೆ.