ನವದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಮತ್ತು ರಾಜ್ಯಸಭಾ ಸಂಸದೆ ಸೆಲ್ಜಾ ಕುಮಾರಿ ಅವರನ್ನು ಹರಿಯಾಣ ಘಟಕದ ಅಧ್ಯಕ್ಷೆಯಾಗಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಮುಖ್ಯಮಂತ್ರಿ ಭೂಪೇಂದ್ರ ಸಿಂಗ್ ಹೂಡಾ ಅವರನ್ನು ನೇಮಕ ಮಾಡಿ ಬುಧವಾರ ಕಾಂಗ್ರೆಸ್ ಆದೇಶ ಹೊರಡಿಸಿದೆ. 


COMMERCIAL BREAK
SCROLL TO CONTINUE READING

2019ರ ಅಕ್ಟೋಬರ್ ನಲ್ಲಿ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಈ ಬದಲಾವಣೆ ಮಾಡಿದ್ದು, ಕೇಂದ್ರ ಸಚಿವ ಮತ್ತು ಹರಿಯಾಣ ಕಾಂಗ್ರೆಸ್ ಉಸ್ತುವಾರಿ ಗುಲಾಮ್ ನಬಿ ಆಜಾದ್ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಈ ಘೋಷಣೆ ಮಾಡಿದ್ದಾರೆ.


ರಾಜ್ಯಸಭಾ ಸಂಸದ ಸೆಲ್ಜಾ ಕುಮಾರಿ ಯುಪಿಎ ಸರ್ಕಾರದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಲ್ಲಿ ಕ್ಯಾಬಿನೆಟ್ ಸಚಿವರಾಗಿದ್ದರು.