Congress foundation day: ಸೋನಿಯಾ ಗಾಂಧಿ ಧ್ವಜಾರೋಹಣ ಮಾಡುವ ವೇಳೆ ಕೆಳಗೆ ಬಿದ್ದ ಕಾಂಗ್ರೆಸ್ ಪಕ್ಷದ ಧ್ವಜ

Congress foundation day: ಇಂದು ಕಾಂಗ್ರೆಸ್ ನ 137ನೇ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪಕ್ಷದ ಧ್ವಜಾರೋಹಣ ಮಾಡುತ್ತಿದ್ದರು. ಈ ವೇಳೆ ಧ್ವಜ ಕೆಳಗೆ ಬಿದ್ದಿದೆ. 

Edited by - Zee Kannada News Desk | Last Updated : Dec 28, 2021, 12:21 PM IST
  • ಇಂದು ಕಾಂಗ್ರೆಸ್ ನ 137ನೇ ಸಂಸ್ಥಾಪನಾ ದಿನ
  • ಸೋನಿಯಾ ಗಾಂಧಿ ಧ್ವಜಾರೋಹಣ ಮಾಡುವ ವೇಳೆ ಕೆಳಗೆ ಬಿದ್ದ ಕಾಂಗ್ರೆಸ್ ಪಕ್ಷದ ಧ್ವಜ
  • ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮ
Congress foundation day: ಸೋನಿಯಾ ಗಾಂಧಿ ಧ್ವಜಾರೋಹಣ ಮಾಡುವ ವೇಳೆ ಕೆಳಗೆ ಬಿದ್ದ ಕಾಂಗ್ರೆಸ್ ಪಕ್ಷದ ಧ್ವಜ  title=
ಸೋನಿಯಾ ಗಾಂಧಿ

ನವದೆಹಲಿ: ಇಂದು ಕಾಂಗ್ರೆಸ್ ನ 137ನೇ ಸಂಸ್ಥಾಪನಾ ದಿನದ (Congress foundation day) ಸಂದರ್ಭದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (Sonia Gandhi) ಪಕ್ಷದ ಧ್ವಜಾರೋಹಣ (ಮಾಡುತ್ತಿದ್ದರು. ಈ ವೇಳೆ ಧ್ವಜ ಕೆಳಗೆ ಬಿದ್ದಿದೆ. 

ಕಾಂಗ್ರೆಸ್ ಸಂಸ್ಥಾಪನಾ ದಿನವನ್ನು ಆಚರಿಸಲು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಜಮಾಯಿಸಿದ್ದರು. ಬಳಿಕ ಸೋನಿಯಾ ಗಾಂಧಿ ಅವರು ಕಾರ್ಯಕ್ರಮದಲ್ಲಿ ಹಾಜರಿದ್ದ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದರು.

ಕಾಂಗ್ರೆಸ್ ಸಂಸ್ಥಾಪನಾ ದಿನದಂದು ಸೋನಿಯಾ ಗಾಂಧಿ ಸಂದೇಶ ನೀಡಿದ್ದಾರೆ. ಇಂದು ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ ಎಂದು ಹೇಳಿದರು. ಕಾಂಗ್ರೆಸ್ ಎನ್ನುವುದು ಕೇವಲ ರಾಜಕೀಯ ಪಕ್ಷದ ಹೆಸರಲ್ಲ ಆದರೆ ಕಾಂಗ್ರೆಸ್ ಒಂದು ಚಳವಳಿಯ ಹೆಸರಾಗಿದೆ ಎಂದರು. 

ಕಾಂಗ್ರೆಸ್ ಯಾವ ಪರಿಸ್ಥಿತಿಯಲ್ಲಿ ಹುಟ್ಟಿಕೊಂಡಿತು ಎಂಬುದನ್ನು ನಾನು ಹೇಳಬೇಕಾಗಿಲ್ಲ. ಕಾಂಗ್ರೆಸ್ ಮತ್ತು ಅದರ ನಾಯಕರು ಸ್ವಾತಂತ್ರ್ಯ ಚಳವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ಜೈಲುಗಳಲ್ಲಿ ತೀವ್ರ ಚಿತ್ರಹಿಂಸೆ ಅನುಭವಿಸಿದರು ಮತ್ತು ಅನೇಕ ದೇಶಭಕ್ತರು ತಮ್ಮ ಪ್ರಾಣವನ್ನು ತ್ಯಾಗ ಮಾಡಿದರು. ಆಗ ನಮಗೆ ಸ್ವಾತಂತ್ರ್ಯ ಸಿಕ್ಕಿತು ಎಂದರು.

ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸದವರಿಗೆ ಅದರ ಮೌಲ್ಯವನ್ನು ಎಂದಿಗೂ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಸೋನಿಯಾ ಗಾಂಧಿ ಹೇಳಿದರು. 

 

 

ಇಂದು ಭಾರತದ ಆ ಭದ್ರ ಬುನಾದಿಯನ್ನು ದುರ್ಬಲಗೊಳಿಸಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಇತಿಹಾಸವನ್ನು ಸುಳ್ಳು ಮಾಡಲಾಗುತ್ತಿದೆ. ನಮ್ಮ ಗಂಗಾ-ಜಮುನಿ ಸಂಸ್ಕೃತಿಯನ್ನು ನಿರ್ಮೂಲನೆ ಮಾಡುವ ಪ್ರಯತ್ನಗಳು ನಡೆಯುತ್ತಿವೆ. ದೇಶದ ಸಾಮಾನ್ಯ ನಾಗರಿಕರು ಅಭದ್ರತೆಯ ಭಾವನೆಯಲ್ಲಿದ್ದಾರೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಬದಿಗೊತ್ತಲಾಗುತ್ತಿದೆ, ಕಾಂಗ್ರೆಸ್ ಮೌನವಾಗಿರಲು ಸಾಧ್ಯವಿಲ್ಲ ಎಂದರು.

ದೇಶದ ಪರಂಪರೆಯನ್ನು ಹಾಳು ಮಾಡಲು ಕಾಂಗ್ರೆಸ್ ಯಾರಿಗೂ ಅವಕಾಶ ನೀಡುವುದಿಲ್ಲ. ಜನಸಾಮಾನ್ಯರಿಗಾಗಿ, ಪ್ರಜಾಪ್ರಭುತ್ವವನ್ನು ರಕ್ಷಿಸಲು, ನಾವು ದೇಶ ವಿರೋಧಿ ಮತ್ತು ಸಮಾಜ ವಿರೋಧಿ ಪಿತೂರಿಗಳ ವಿರುದ್ಧ ಹೋರಾಡುತ್ತೇವೆ. ಪ್ರತಿ ತ್ಯಾಗವನ್ನೂ ಮಾಡುತ್ತಾರೆ. ಇಂದಿನ ಈ ಸಂದರ್ಭದಲ್ಲಿ, ಕಾಂಗ್ರೆಸ್ ಸಂಘಟನೆಯನ್ನು ಬಲಪಡಿಸಬೇಕು ಎಂದು ಪ್ರತಿಯೊಬ್ಬ ಕಾಂಗ್ರೆಸ್ಸಿಗರು ಅದೇ ಸಂಕಲ್ಪವನ್ನು ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ: BCCI ಅಧ್ಯಕ್ಷ ಸೌರವ್ ಗಂಗೂಲಿಗೆ ಕೊರೊನಾ ಪಾಸಿಟಿವ್, ಕೋಲ್ಕತ್ತಾದಲ್ಲಿ ಆಸ್ಪತ್ರೆಗೆ ದಾಖಲು

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News