ನವದೆಹಲಿ: ಟಿಡಿಪಿ ಮತ್ತು ಜಗನ್ ರೆಡ್ಡಿ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ ನಂತರ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ನೋಟಿಸ್ ನೀಡಿದೆ. 


COMMERCIAL BREAK
SCROLL TO CONTINUE READING

ಈ ಸಂಬಂಧ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಲೋಕಸಭೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ಇದರಲ್ಲಿ ಮಾರ್ಚ್ 27 ರಂದು ಅವಿಶ್ವಾಸ ಗೊತ್ತುವಳಿಯ ಪರಿಷ್ಕೃತ ಪಟ್ಟಿಯಲ್ಲಿ ಕಾಂಗ್ರೆಸ್‌ ನೋಟಿಸ್‌ ಅನ್ನೂ ಸೇರಿಸುವಂತೆ ಮನವಿ ಮಾಡಿದ್ದಾರೆ.



ಎನ್.ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಮತ್ತು ಜಗನ್ ರೆಡ್ಡಿಯ ವೈಎಸ್ಆರ್ ಕಾಂಗ್ರೆಸ್ ಪಕ್ಷವು ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡದ ಮೋದಿ ಸರ್ಕಾರದ ವಿರುದ್ಧ ಈಗಾಗಲೇ ಅವಿಶ್ವಾಸ ನಿರ್ಣಯ ಮಂಡಿಸುವುದಾಗಿ ನೋಟಿಸ್ ಸಲ್ಲಿಸಿದ್ದಾರೆ. 


ತೆಲುಗು ದೇಶಂ ಪಕ್ಷದ (ಟಿಡಿಪಿ) ಥೋಟಾ ನರಸಿಂಹಂ ಮತ್ತು ವೈಎಸ್ಆರ್ ಕಾಂಗ್ರೆಸ್ನ ವೈ.ವಿ.ಸುಬ್ಬಾ ರೆಡ್ಡಿ ಅವರು ಅವಿಶ್ವಾಸ ನಿರ್ಣಯ ಮಂಡನೆಯ ನೋಟಿಸ್ ನೀಡಿದ್ದಾರೆ.


ಈ ಮಧ್ಯೆ, ಸಂಸತ್ತಿನಲ್ಲಿ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಸಂಬಂಧ ಮತ್ತು  ಮತ್ತು ತೆಲಂಗಾಣದಲ್ಲಿ ಉದ್ಯೋಗಗಳಿಗೆ ಮೀಸಲಾತಿ ಕೋಟಾವನ್ನು ಹೆಚ್ಚಿಸುವಂತೆ ಎಐಎಡಿಎಂಕೆ ಮತ್ತು ಟಿಆರ್ಎಸ್ ಒತ್ತಾಯಿಸುತ್ತಿವೆ.