ರಾಹುಲ್ ಗಾಂಧಿ ಜೊತೆ ಗುರುತಿಸಿಕೊಂಡಿದ್ದ ಕಾಂಗ್ರೆಸ್‌ ಕಾರ್ಯಕಾರಿಣಿಯ ಶವ ಸೂಟ್‌ಕೇಸ್‌ನಲ್ಲಿ ಪತ್ತೆ..! 

Himani Narwal death : ಹರಿಯಾಣದಲ್ಲಿ ನಡೆದ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆ ಹಿಮಾನಿ ನರ್ವಾಲ್ ಅವರ ಭೀಕರ ಹತ್ಯೆ ದೇಶವನ್ನೇ ಬೆಚ್ಚಿಬೀಳಿಸಿದೆ. ಇದೇ ವೇಳೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಹಿಮಾನಿ ಇರುವ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

Written by - Krishna N K | Last Updated : Mar 2, 2025, 08:50 PM IST
    • ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆ ಹಿಮಾನಿ ನರ್ವಾಲ್ ಅವರ ಭೀಕರ ಹತ್ಯೆ
    • ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಹಿಮಾನಿ ಇರುವ ಫೋಟೋ ವೈರಲ್‌
    • ಹರಿಯಾಣದ ರೋಹ್ಟಕ್ ಜಿಲ್ಲೆಯ ಬಸ್ ನಿಲ್ದಾಣದ ಬಳಿ ಸೂಟ್‌ಕೇಸ್‌ನಲ್ಲಿ ಶವ ಪತ್ತೆ
ರಾಹುಲ್ ಗಾಂಧಿ ಜೊತೆ ಗುರುತಿಸಿಕೊಂಡಿದ್ದ ಕಾಂಗ್ರೆಸ್‌ ಕಾರ್ಯಕಾರಿಣಿಯ ಶವ ಸೂಟ್‌ಕೇಸ್‌ನಲ್ಲಿ ಪತ್ತೆ..! 

ಹರಿಯಾಣ : ಹರಿಯಾಣದಲ್ಲಿ 22 ವರ್ಷದ ಕಾಂಗ್ರೆಸ್ ಕಾರ್ಯಕಾರಿಣಿ ಹಿಮಾನಿ ಕೊಲೆ ದೇಶವನ್ನೇ ಬೆಚ್ಚಿಬೀಳಿಸಿದೆ. ಕೊಲೆಯಾದ ಯುವತಿಯು ರಾಹುಲ್ ಗಾಂಧಿ ಜೊತೆಗಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಹರಿಯಾಣದ ರೋಹ್ಟಕ್ ಜಿಲ್ಲೆಯ ಬಸ್ ನಿಲ್ದಾಣದ ಬಳಿ ಸೂಟ್‌ಕೇಸ್‌ನಲ್ಲಿ ಶವ ಪತ್ತೆಯಾಗಿದೆ. 

Add Zee News as a Preferred Source

ಸಂಪ್ಲಾ ಬಸ್ ನಿಲ್ದಾಣದ ಬಳಿ ನಿಗೂಢವಾಗಿ ಬಿದ್ದಿದ್ದ ಸೂಟ್‌ಕೇಸ್ ಅನ್ನು ನೋಡಿದ ಸಾರ್ವಜನಿಕರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಮಾಹಿತಿ ಪಡೆದ ಕೂಡಲೇ ಪೊಲೀಸರು ಮತ್ತು ವಿಧಿವಿಜ್ಞಾನ ತಂಡ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿತು. ಸೂಟ್‌ಕೇಸ್‌ನಲ್ಲಿದ್ದ ದೇಹದ ಕುತ್ತಿಗೆಗೆ ದುಪಟ್ಟಾ ಸುತ್ತಲಾಗಿತ್ತು.. ಕೈಗಳಲ್ಲಿ ಮೆಹಂದಿ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:ಕೇಂದ್ರ ಸಚಿವರ ಮಗಳ ಮೇಲೆ ಲೈಂಗಿಕ ಕಿರುಕುಳ..! ಶಿವ ದೇವಸ್ಥಾನಕ್ಕೆ ಹೋಗಿದ್ದಾಗ ಘಟನೆ.. 

ರೋಹ್ಟಕ್‌ನ ವಿಜಯ್ ನಗರ ಪ್ರದೇಶದ ನಿವಾಸಿ ನರ್ವಾಲ್ ಅವರನ್ನು ದುಪಟ್ಟಾದಿಂದ ಕತ್ತು ಹಿಸುಕಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಅವರ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರೋಹ್ಟಕ್‌ನ ಪಿಜಿಐಎಂಎಸ್ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.

ರೋಹ್ಟಕ್‌ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಅವರ ಭೀಕರ ಹತ್ಯೆಯ ಸುದ್ದಿ ತೀವ್ರ ದುಃಖಕರ ಮತ್ತು ಆಘಾತಕಾರಿಯಾಗಿದೆ. ಇದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಸ್ಥಿತಿಯ ಮೇಲಿನ ಕಳಂಕ. ಅಪರಾಧಿಗಳಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಹರಿಯಾಣ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಹೂಡಾ ಒತ್ತಾಯಿಸಿದ್ದಾರೆ..  

ಇದನ್ನೂ ಓದಿ:ಅದು ನನಗೆ ತುಂಬಾ ಇಷ್ಟವಾಯಿತು..! ಗಂಡ, 2 ಮಕ್ಕಳನ್ನು ಬಿಟ್ಟು ಲವರ್ ಜೊತೆ ಮಹಿಳೆ ಜಂಪ್.. ವಿಡಿಯೋ ವೈರಲ್..

ಕೊಲೆಯಾದ ಹಿಮಾನಿ ನರ್ವಾಲ್ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿ ಅವರೊಂದಿಗೆ ಫೋಟೋ ತೆಗೆಸಿಕೊಂಡರು. ಈ ಫೋಟೋ ಸದ್ಯ ವೈರಲ್ ಆಗುತ್ತಿದೆ. ಸದ್ಯ ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ. ಹೆಚ್ಚಿನ ವಿಚಾರ ತಿಳಿದು ಬರಬೇಕಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

...Read More

Trending News