ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಆರೋಗ್ಯ ತಪಾಸಣೆಗಾಗಿ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ.ಈ ಸಂದರ್ಭದಲ್ಲಿ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಕೂಡ ಆಸ್ಪತ್ರೆಯಲ್ಲಿ ಉಪಸ್ಥಿತರಿದ್ದರು.

Last Updated : Feb 2, 2020, 08:28 PM IST
 ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು  title=

ನವದೆಹಲಿ: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಆರೋಗ್ಯ ತಪಾಸಣೆಗಾಗಿ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ.ಈ ಸಂದರ್ಭದಲ್ಲಿ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಕೂಡ ಆಸ್ಪತ್ರೆಯಲ್ಲಿ ಉಪಸ್ಥಿತರಿದ್ದರು.

ಈ ಹಿಂದೆ ಸೋನಿಯಾ ಗಾಂಧಿಯನ್ನು ಕೊನೆಯ ಬಾರಿಗೆ ಮೇ 2017 ರಲ್ಲಿ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದಕ್ಕೂ ಮೊದಲು 2017 ರ ಫೆಬ್ರವರಿಯಲ್ಲಿ ಅವರು ಉಸಿರಾಟದ ಬಗ್ಗೆ ದೂರು ನೀಡಿದ ನಂತರ ಅವರನ್ನು ಅದೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರನ್ನು ಒಂದು ದಿನ ವೀಕ್ಷಣೆಯಲ್ಲಿಡಲಾಗಿತ್ತು ಮತ್ತು ನಂತರ ಬಿಡುಗಡೆ ಮಾಡಲಾಯಿತು.

ಆಗ ಡಾ.ಡಿ.ಎಸ್. ರಾಣಾ ಅವರು ಹವಾಮಾನದಲ್ಲಿ ಬದಲಾವಣೆಯಿಂದಾಗಿ ಅವರ ಶ್ವಾಸಕೋಶದ ಕ್ರಿಯೆಯ ಮೇಲೆ ಪರಿಣಾಮ ಬೀರಿತ್ತು ಎಂದು ತಿಳಿಸಿದ್ದರು. ನಂತರ  ಅವರಿಗೆ ಸಂಬಂಧಿತ ಪರೀಕ್ಷೆಗಳು ಮತ್ತು ಮುನ್ನೆಚ್ಚರಿಕೆ ಕ್ರಮಗಳಿಗೆ ಒಳಗಾದ ನಂತರ, ಅವರು ಸ್ಥಿರವಾಗಿದ್ದರು. ತೀವ್ರ ಜ್ವರ ಕಾಣಿಸಿಕೊಂಡಿದ್ದರಿಂದ ಸೋನಿಯಾ ಗಾಂಧಿ ಅವರನ್ನು 2016 ರ ನವೆಂಬರ್‌ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನಗಳ ನಂತರ ಅವರನ್ನು ಬಿಡುಗಡೆ ಮಾಡಲಾಯಿತು.

Trending News