ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ 18-19 ಲೋಕಸಭಾ ಸ್ಥಾನಗಳನ್ನು ಗೆಲ್ಲಲಿದೆ -ಸಿಎಂ ಕುಮಾರಸ್ವಾಮಿ

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಕೂಟ ಒಟ್ಟು 18 ರಿಂದ 19 ಲೋಕಸಭಾ ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದರು.
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಕೂಟ ಒಟ್ಟು 18 ರಿಂದ 19 ಲೋಕಸಭಾ ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದರು.
ಇಲ್ಲಿನ ತಿರುಪತಿ ಬಾಲಾಜಿ ದೇವಸ್ಥಾನದಲ್ಲಿ ಪ್ರಾರ್ಥಿಸಿದ ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಕುಮಾರಸ್ವಾಮಿ, "ನಾವು ಸುಲಭವಾಗಿ ಗೆಲ್ಲುತ್ತೇವೆ.ಅದರ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಕೂಟದಿಂದ ನಾವು 18 ರಿಂದ 19 ಸ್ಥಾನಗಳನ್ನು ಪಡೆಯುತ್ತೇವೆ. "ಎನ್ನುವ ಭರವಸೆ ವ್ಯಕ್ತಪಡಿಸಿದರು.ಹುಟ್ಟುಹಬ್ಬದ ಪ್ರಯುಕ್ತ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರೊಂದಿಗೆ ಆಗಮಿಸಿದ್ದ ಕುಮಾರಸ್ವಾಮಿ ಉಭಯ ಪಕ್ಷಗಳು ಮೈತ್ರಿಕೂಟ ಸುಲಭವಾಗಿ ಚುನಾವಣೆಯಲ್ಲಿ ಗೆಲುವನ್ನು ಸಾಧಿಸಲಿದೆ ಎಂದು ಹೇಳಿದರು.
ಇದೇ ವೇಳೆ ಕೇಂದ್ರದಲ್ಲಿ ಯಾರು ಸರ್ಕಾರ ರಚಿಸುತ್ತಾರೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ "ಮೇ 23 ರ ಫಲಿತಾಂಶ ಬರುವವರೆಗೆ ಕಾಯೋಣ. ಈಗಾಗಲೇ ನಾವು ರಾಹುಲ್ ಗಾಂಧಿಯವರಿಗೆ ಬೆಂಬಲ ನೀಡುವುದಾಗಿ ಹೇಳಿದ್ದೇವೆ.ಆದ್ದರಿಂದ ಈ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲವೆಂದು ಹೇಳಿದರು.