Jitin Prasada- ಬಿಜೆಪಿಗೆ ಸೇರಿದ ಕಾಂಗ್ರೆಸ್ ನಾಯಕ ಜಿತಿನ್ ಪ್ರಸಾದ್
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಮೊದಲು ಜಿತಿನ್ ಪ್ರಸಾದ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ನವದೆಹಲಿ: ಕಾಂಗ್ರೆಸ್ ಹಿರಿಯ ಮತ್ತು ಕೇಂದ್ರದ ಮಾಜಿ ಸಚಿವ ಜಿತಿನ್ ಪ್ರಸಾದ್ (Jitin Prasada) ಅವರು ಬುಧವಾರ ಕೇಂದ್ರ ಸಚಿವ ಪಿಯೂಷ್ ಗೋಯಲ್ (Piyush Goyal) ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ (BJP) ಸೇರ್ಪಡೆಗೊಂಡಿದ್ದಾರೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಮೊದಲು ಜಿತಿನ್ ಪ್ರಸಾದ್ (Jitin Prasada) ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ (Amith Shah) ಮತ್ತು ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಇತ್ತೀಚೆಗೆ ಅಖಿಲ ಭಾರತ ಕಾಂಗ್ರೆಸ್ ಕಮಿಟಿ (All India Congress Committee)ಗೆ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತವರನ್ನು ಅಧ್ಯಕ್ಷರನ್ನಾಗಿ ನೇಮಿಸುವಂತೆ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರಿಗೆ ಪತ್ರ ಬರೆದಿದ್ದ 23 ಮಂದಿ ಹಿರಿಯ ನಾಯಕರ (G-23 Leaders) ಪೈಕಿ ಜಿತಿನ್ ಪ್ರಸಾದ್ ಕೂಡ ಒಬ್ಬರಾಗಿದ್ದರು. ಮಾಜಿ ಕೇಂದ್ರ ಸಚಿವರಾಗಿದ್ದ 47 ವರ್ಷದ ಜಿತಿನ್ ಪ್ರಸಾದ್ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ (Congress Working Committee)ಯ ವಿಶೇಷ ಆಹ್ವಾನಿತರಾಗಿದ್ದರು.
ಇದನ್ನೂ ಓದಿ- Post Office: ಪೋಸ್ಟ್ ಆಫೀಸ್‌ನೊಂದಿಗೆ ಕೇವಲ ₹5000 ಹೂಡಿಕೆ ಮಾಡಿ ಬುಸಿನೆಸ್ಸ್ ಪ್ರಾರಂಭಿಸಿ
ಹೈಕಮಾಂಡಿಗೆ ಪತ್ರ ಬರೆದ ಬಳಿಕ ಜಿತಿನ್ ಪ್ರಸಾದ್ (Jitin Prasada) ವಿರುದ್ಧ ಕ್ರಮ ಕೈಗೊಳ್ಳುವಂತೆ ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲಾ ಕಾಂಗ್ರೆಸ್ ನಿರ್ಣಯ ಕೈಗೊಂಡಿದೆ. ಜಿತಿನ್ ಪ್ರಸಾದ್ ಅವರ ತಂದೆ ಜಿತೇಂದರ್ ಪ್ರಸಾದ್ ಅವರು ಈ ಹಿಂದೆ ಸೋನಿಯಾ ಗಾಂಧಿ ವಿರುದ್ಧ ಷಡ್ಯಂತ್ರ ಮಾಡಿದ್ದರು ಎಂಬ ಆರೋಪ ಕೂಡ ಇದೆ. ಈ ಹಿನ್ನಲೆಯಲ್ಲಿ ಜಿತಿನ್ ಪ್ರಸಾದ್ ಮತ್ತು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಶೀತಲ ಸಮರ ನಡೆಯುತ್ತಿತ್ತು. ಇದೇ ಹಿನ್ನಲೆಯಲ್ಲಿ ಪ್ರಸಾದ್ ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರಿದ್ದಾರೆ ಎನ್ನಲಾಗಿದೆ.
ಈ ಮೂಲಕ ಉತ್ತರಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗೆ (Uttar Pradesh Assembly Election) ಮುನ್ನ ಭಾರತೀಯ ಜನತಾ ಪಕ್ಷ ಕಾಂಗ್ರೆಸ್ ಗೆ ದೊಡ್ಡ ಹೊಡೆತ ನೀಡಿದೆ. ಕಾಂಗ್ರೆಸ್ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸುವ ಮೂಲಕ ಬಿಜೆಪಿ ತನ್ನ ಮಿಷನ್ 2022ರ ಹಾದಿಯನ್ನು ಸುಗಮಗೊಳಿಸತೊಡಗಿದೆ. ಜಿತಿನ್ ಪ್ರಸಾದ್ ಬಿಜೆಪಿ ಸೇರ್ಪಡೆಗೊಂಡಿರುವುದು ಯುಪಿ ರಾಜಕೀಯದಲ್ಲಿ ದೊಡ್ಡ ಪರಿಣಾಮ ಬೀರುತ್ತದೆ. ಏಕೆಂದರೆ ಜಿತೀನ್ ಪ್ರಸಾದ್ ಬ್ರಾಹ್ಮಣ ಮತದಾರರಲ್ಲಿ ಉತ್ತಮ ಹಿಡಿತ ಹೊಂದಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ- Indian Railways: ಜೂನ್ 10 ರಿಂದ ಟ್ರ್ಯಾಕ್‌ನಲ್ಲಿ ಚಲಿಸಲಿರುವ ರೈಲುಗಳ ಫುಲ್ ಲಿಸ್ಟ್ ಇಲ್ಲಿದೆ
ಜಿತಿನ್ ಪ್ರಸಾದ್ ಕಳೆದುಕೊಂಡಿದ್ದು ಕಾಂಗ್ರೆಸ್ ಪಾಲಿಗೆ ದೊಡ್ಡ ಹೊಡೆತ ಬಿದ್ದಂತಾಗಿದೆ. ಇದರಿಂದ ಜಿ -23 ಗುಂಪಿನಿಂದ ಪಕ್ಷಕ್ಕೆ ಬಿದ್ದ ಮೊದಲ ದೊಡ್ಡ ಹೊಡೆತ ಎಂಬಂತಾಗಿದೆ. ಬಿಜೆಪಿ ಸೇರ್ಪಡೆ ಬಳಿಕ 'ಬಿಜೆಪಿ ಸೇರುವ ಮೂಲಕ ನನ್ನ ಜೀವನದ ಹೊಸ ಅಧ್ಯಾಯ ಶುರುವಾಗಿದೆ' ಎಂದು ಜಿತಿನ್ ಪ್ರಸಾದ್ ಹೇಳಿದ್ದಾರೆ.
ಬಿಜೆಪಿ ರಾಷ್ಟ್ರೀಯ ಕಚೇರಿಯಲ್ಲಿ ಪಕ್ಷಕ್ಕೆ ಸೇರಿದ ಬಳಿಕ ಜಿತಿನ್ ಪ್ರಸಾದ್ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.