ಮಧ್ಯಪ್ರದೇಶದ ವಿಧಾನಸಭೆಯ ವಿಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಮಲ್ ನಾಥ್

ಮಧ್ಯಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಕಾಂಗ್ರೆಸ್ ನಾಯಕ ಕಮಲ್ ನಾಥ್ ಗುರುವಾರದಂದು ರಾಜೀನಾಮೆ ನೀಡಿದ್ದಾರೆ.ಈಗ ಅವರ ರಾಜೀನಾಮೆಯನ್ನು ಕಾಂಗ್ರೆಸ್ ಪಕ್ಷವು ಅಂಗೀಕರಿಸಿದೆ.ಈಗ ಅವರ ರಾಜೀನಾಮೆ ನಂತರ ಡಾ.ಗೋವಿಂದ್ ಸಿಂಗ್ ಅವರು ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

Written by - Zee Kannada News Desk | Last Updated : Apr 28, 2022, 08:05 PM IST
  • ಮಧ್ಯಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಕಾಂಗ್ರೆಸ್ ನಾಯಕ ಕಮಲ್ ನಾಥ್ ಗುರುವಾರದಂದು ರಾಜೀನಾಮೆ ನೀಡಿದ್ದಾರೆ.
  • ಈಗ ಅವರ ರಾಜೀನಾಮೆಯನ್ನು ಕಾಂಗ್ರೆಸ್ ಪಕ್ಷವು ಅಂಗೀಕರಿಸಿದೆ.
ಮಧ್ಯಪ್ರದೇಶದ ವಿಧಾನಸಭೆಯ ವಿಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಮಲ್ ನಾಥ್   title=

ನವದೆಹಲಿ: ಮಧ್ಯಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಕಾಂಗ್ರೆಸ್ ನಾಯಕ ಕಮಲ್ ನಾಥ್ ಗುರುವಾರದಂದು ರಾಜೀನಾಮೆ ನೀಡಿದ್ದಾರೆ.ಈಗ ಅವರ ರಾಜೀನಾಮೆಯನ್ನು ಕಾಂಗ್ರೆಸ್ ಪಕ್ಷವು ಅಂಗೀಕರಿಸಿದೆ.ಈಗ ಅವರ ರಾಜೀನಾಮೆ ನಂತರ ಡಾ.ಗೋವಿಂದ್ ಸಿಂಗ್ ಅವರು ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಕಮಲ್ ನಾಥ್ ಅವರಿಗೆ ಪತ್ರ ಬರೆದಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ 'ಗೌರವಾನ್ವಿತ ಕಾಂಗ್ರೆಸ್ ಅಧ್ಯಕ್ಷರು ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ನಿಮ್ಮ ರಾಜೀನಾಮೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಂಗೀಕರಿಸಿದ್ದಾರೆ.ಮಧ್ಯಪ್ರದೇಶದ ಶಾಸಕಾಂಗ ಪಕ್ಷದ ನಾಯಕರಾಗಿ ನಿಮ್ಮ ಕೊಡುಗೆಯನ್ನು ಪಕ್ಷವು ಮನಃಪೂರ್ವಕವಾಗಿ ಶ್ಲಾಘಿಸುತ್ತದೆ" ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ : Diabetes Symptoms: ಈ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಡಯಾಬಿಟಿಸ್‌ ಪರೀಕ್ಷೆ ಮಾಡಿಸಿಕೊಳ್ಳಿ!

2018 ರಲ್ಲಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ನಂತರ ಕಮಲ್ ನಾಥ್ ಸುಮಾರು 15 ತಿಂಗಳುಗಳ ಕಾಲ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು. ಆದಾಗ್ಯೂ, ಹಾಲಿ ಶಾಸಕರ ರಾಜೀನಾಮೆಗಳ ನಂತರ ರಾಜ್ಯದಲ್ಲಿ ರಾಜಕೀಯ ಪ್ರಕ್ಷುಬ್ಧತೆಯ ನಂತರ ಕಾಂಗ್ರೆಸ್ ಸರ್ಕಾರವು ಮಾರ್ಚ್ 2020 ರಲ್ಲಿ ಪತನವಾಯಿತು. ಕಮಲ್ ನಾಥ್ ನಂತರ ಜುಲೈ 2020 ರಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಹುದ್ದೆಯನ್ನು ವಹಿಸಿಕೊಂಡರು.

ಇದನ್ನೂ ಓದಿ : ಆರೋಗ್ಯಕರವಾಗಿ ತೂಕ ತಿಳಿಸಲು ನಿಮ್ಮ ಬೆಳಗಿನ ಉಪಹಾರದಲ್ಲಿ ಇವುಗಳನ್ನು ತಪ್ಪದೇ ಸೇವಿಸಿ

ಕಾಂಗ್ರೆಸ್ ಪಕ್ಷವು ಇತ್ತೀಚೆಗೆ ಹರಿಯಾಣ, ಹಿಮಾಚಲ ಪ್ರದೇಶ ಮತ್ತು ಪಂಜಾಬ್ ಸೇರಿದಂತೆ ಕೆಲವು ರಾಜ್ಯಗಳಲ್ಲಿ ತನ್ನ ನಾಯಕತ್ವವನ್ನು ಬದಲಾಯಿಸಿದೆ.ಈ ತಿಂಗಳ ಆರಂಭದಲ್ಲಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ಪಂಜಾಬ್ ಘಟಕದ ಹೊಸ ಮುಖ್ಯಸ್ಥರಾಗಿ ಅಮರಿಂದರ್ ಸಿಂಗ್ ಬ್ರಾರ್ (ರಾಜಾ ವಾರಿಂಗ್) ಮತ್ತು ಮಾಜಿ ರಾಜ್ಯಸಭಾ ಸದಸ್ಯ ಪ್ರತಾಪ್ ಸಿಂಗ್ ಬಾಜ್ವಾ ಅವರನ್ನು ಹೊಸ ಶಾಸಕಾಂಗ ಪಕ್ಷದ ನಾಯಕರನ್ನಾಗಿ ನೇಮಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
 

 

Trending News