ರಾಹುಲ್ ಗಾಂಧಿ ಭೇಟಿ ಬಳಿಕ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಹಿಂದಕ್ಕೆ ಪಡೆದ ಸಿಧು

ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರು ಶುಕ್ರವಾರದಂದು (ಅಕ್ಟೋಬರ್ 15, 2021) ನವದೆಹಲಿಯಲ್ಲಿ ರಾಹುಲ್ ಗಾಂಧಿಯವರನ್ನು ಭೇಟಿಯಾದ ನಂತರ ಪಂಜಾಬ್ ಕಾಂಗ್ರೆಸ್ ಮುಖ್ಯ ಸ್ಥಾನಕ್ಕೆ ರಾಜೀನಾಮೆ ಹಿಂತೆಗೆದುಕೊಂಡಿದ್ದಾರೆ.

Written by - Zee Kannada News Desk | Last Updated : Oct 16, 2021, 01:27 AM IST
  • ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರು ಶುಕ್ರವಾರದಂದು (ಅಕ್ಟೋಬರ್ 15, 2021) ನವದೆಹಲಿಯಲ್ಲಿ ರಾಹುಲ್ ಗಾಂಧಿಯವರನ್ನು ಭೇಟಿಯಾದ ನಂತರ ಪಂಜಾಬ್ ಕಾಂಗ್ರೆಸ್ ಮುಖ್ಯ ಸ್ಥಾನಕ್ಕೆ ರಾಜೀನಾಮೆ ಹಿಂತೆಗೆದುಕೊಂಡಿದ್ದಾರೆ.
ರಾಹುಲ್ ಗಾಂಧಿ ಭೇಟಿ ಬಳಿಕ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಹಿಂದಕ್ಕೆ ಪಡೆದ ಸಿಧು  title=

ನವದೆಹಲಿ: ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರು ಶುಕ್ರವಾರದಂದು (ಅಕ್ಟೋಬರ್ 15, 2021) ನವದೆಹಲಿಯಲ್ಲಿ ರಾಹುಲ್ ಗಾಂಧಿಯವರನ್ನು ಭೇಟಿಯಾದ ನಂತರ ಪಂಜಾಬ್ ಕಾಂಗ್ರೆಸ್ ಮುಖ್ಯ ಸ್ಥಾನಕ್ಕೆ ರಾಜೀನಾಮೆ ಹಿಂತೆಗೆದುಕೊಂಡಿದ್ದಾರೆ.

ರಾಹುಲ್ ಗಾಂಧಿಯವರ ನಿವಾಸದಲ್ಲಿ ಭೇಟಿಯಾದ ನಂತರ, "ನನ್ನ ಎಲ್ಲಾ ಕಳವಳಗಳನ್ನು ನಾನು ರಾಹುಲ್ ಗಾಂಧಿಯೊಂದಿಗೆ ಹಂಚಿಕೊಂಡಿದ್ದೇನೆ, ಎಲ್ಲವನ್ನೂ ಬಗೆಹರಿಸಲಾಗಿದೆ" ಎಂದು ಸಿದ್ದು ಹೇಳಿದರು.

ಇದನ್ನೂ ಓದಿ: ನವಜೋತ್ ಸಿಂಗ್ ಸಿಧು ಗೆ ಔತಣಕೂಟಕ್ಕೆ ಆಹ್ವಾನ ನೀಡಿ ಅಚ್ಚರಿ ಮೂಡಿಸಿದ ಸಿಎಂ ಅಮರಿಂದರ್ ಸಿಂಗ್ ...!

ಪಂಜಾಬಿನ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಉಸ್ತುವಾರಿ ಹರೀಶ್ ರಾವತ್ ಅವರು ಕೂಡ ಅಲ್ಲಿ ಉಪಸ್ಥಿತರಿದ್ದರು. ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು "ಸಿಧು (Navjot Singh Sidhu) ಅವರು ರಾಹುಲ್ ಗಾಂಧಿಯೊಂದಿಗೆ ತಮ್ಮ ಕಳವಳವನ್ನು ಹಂಚಿಕೊಂಡಿದ್ದಾರೆ. ಅವರ ಕಾಳಜಿಯನ್ನು ಇಲ್ಲಿ ನೋಡಿಕೊಳ್ಳಲಾಗುವುದು ಎಂದು ನಾವು ಅವರಿಗೆ ಹೇಳಿದ್ದೇವೆ. ಅವರು ತಮ್ಮ ರಾಜೀನಾಮೆಯನ್ನು ಹಿಂಪಡೆದಿದ್ದಾರೆ ಮತ್ತು ಅವರು ಪಿಸಿಸಿ ಅಧ್ಯಕ್ಷರಾಗಿ ತಮ್ಮ ಕರ್ತವ್ಯಗಳನ್ನು ಮುಂದುವರಿಸಲಿದ್ದಾರೆ ಎಂದು ಅವರು ರಾಹುಲ್ ಗಾಂಧಿಗೆ ಭರವಸೆ ನೀಡಿದರು" ಎಂದು ಅವರು ತಿಳಿಸಿದ್ದಾರೆ.

ಎಐಸಿಸಿ ಪ್ರಧಾನ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್ ಮತ್ತು ಪಂಜಾಬ್ ವ್ಯವಹಾರಗಳ ಪಕ್ಷದ ಪ್ರಧಾನ ಕಾರ್ಯದರ್ಶಿ ಹರೀಶ್ ರಾವತ್ ಅವರೊಂದಿಗೆ ಒಂದು ಗಂಟೆಯ ಸಭೆಯ ಒಂದು ದಿನದ ನಂತರ ಈ ಬೆಳವಣಿಗೆ ಬಂದಿದೆ.

ಇದನ್ನೂ ಓದಿ: Punjab Congress Crisis: ರಾಹುಲ್ ಗಾಂಧಿ ಭೇಟಿಯಾದ ನವಜೋತ್ ಸಿಂಗ್ ಸಿಧು

ಎಐಸಿಸಿ ಸಭೆಯ ನಂತರ, ಸಿಧು ಅವರು ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿಯವರ ನಾಯಕತ್ವದಲ್ಲಿ ಸಂಪೂರ್ಣ ನಂಬಿಕೆಯನ್ನು ಹೊಂದಿದ್ದಾರೆ ಮತ್ತು ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರವನ್ನು ಒಪ್ಪಿಕೊಳ್ಳಬಹುದು ಎಂದು ಹೇಳಿದರು.

ಸಿಧು ಅವರು ತಮ್ಮ ರಾಜೀನಾಮೆ ಪತ್ರವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ ನಂತರ ಸೆಪ್ಟೆಂಬರ್ 28 ರಂದು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆ ಕುರಿತು ಯಾವುದೇ ನಿರ್ಧಾರವನ್ನು ಪಕ್ಷದ ನಾಯಕತ್ವ ಇನ್ನೂ ತೆಗೆದುಕೊಂಡಿಲ್ಲ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

 

Trending News