ನವದೆಹಲಿ : ಕಾಂಗ್ರೆಸ್ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಕೊರೊನಾ ಸೋಂಕು ತಗುಲಿದೆ. ಶುಕ್ರವಾರ ಟ್ವೀಟ್ ಮೂಲಕ ಈ ಮಾಹಿತಿ ನೀಡಿದ್ದಾರೆ. ನಿನ್ನೆ ಅವರ ತಾಯಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕೊರೊನಾ ದೃಢಪಟ್ಟಿತ್ತು.
ಪ್ರಿಯಾಂಕಾ ಗಾಂಧಿ ಟ್ವಿಟ್ಟರ್ ನಲ್ಲಿ, ನನ್ನಗೆ ಕೋವಿಡ್ -19 ಟೆಸ್ಟ್ ಪಾಸಿಟಿವ್ ಬಂದಿದೆ. ನಾನು ಎಲ್ಲಾ ಪ್ರೋಟೋಕಾಲ್‌ಗಳನ್ನು ಅನುಸರಿಸಿ, ನಾನು ಮನೆಯಲ್ಲಿ ಸ್ವಯಂ ಕ್ವಾರಂಟೈನ್ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಎಲ್ಲಾ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ನಾನು ವಿನಂತಿ ಮಾಡಿಕೊಳ್ಳಿನೆ ಎಂದು ಬರೆದುಕೊಂಡಿದ್ದಾರೆ.
I've tested positive for COVID-19 with mild symptoms. Following all the protocols, I have quarantined myself at home.
I would request those who came in contact with me to take all necessary precautions.
— Priyanka Gandhi Vadra (@priyankagandhi) June 3, 2022
ಇದನ್ನೂ ಓದಿ : Sonia Gandhi : ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೊನಾ ಪಾಸಿಟಿವ್!
ಸಚಿವ ಕೆ. ಸುಧಾಕರ್‌ಗೂ ತಗುಲಿದ ಕೊರೊನಾ
ರಾಜ್ಯ ಆರೋಗ್ಯ ಸಚಿವ ಕೆ. ಸುಧಾಕರ್‌ಗೆ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ ಸಚಿವರು, ಮೂರು ಅಲೆಗಳ ಸಂದರ್ಭದಲ್ಲೂ ಕೋವಿಡ್ ಸೋಂಕಿನಿಂದ ಪಾರಾಗಿದ್ದ ನಾನು ಈಗ ಸೋಂಕಿಗೆ ತುತ್ತಾಗಿದ್ದೇನೆ.
ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ.
ಕೆಲ ರೋಗ ಲಕ್ಷಣಗಳು ಕಾಣಿಸಿಕೊಂಡಿದ್ದು ಹೋಮ್ ಐಸೋಲೇಷನ್ ನಲ್ಲಿ ಇದ್ದುಕೊಂಡೇ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಮೂರು ಅಲೆಗಳ ಸಂದರ್ಭದಲ್ಲೂ ಕೋವಿಡ್ ಸೋಂಕಿನಿಂದ ಪಾರಾಗಿದ್ದ ನಾನು ಈಗ ಸೋಂಕಿಗೆ ತುತ್ತಾಗಿದ್ದೇನೆ.
ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ.
ಕೆಲ ರೋಗ ಲಕ್ಷಣಗಳು ಕಾಣಿಸಿಕೊಂಡಿದ್ದು ಹೋಮ್ ಐಸೋಲೇಷನ್ ನಲ್ಲಿ ಇದ್ದುಕೊಂಡೇ ಚಿಕಿತ್ಸೆ ಪಡೆಯುತ್ತಿದ್ದೇನೆ.
— Dr Sudhakar K (@mla_sudhakar) June 2, 2022
ಇದನ್ನೂ ಓದಿ : ಚಂಪಾವತ್ ಉಪಚುನಾವಣೆ : ಸಿಎಂ ಧಾಮಿಗೆ ಗೆಲುವು, ಠೇವಣಿ ಕಳೆದುಕೊಂಡ 'ಕಾಂಗ್ರೆಸ್'
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ