ಜನರಿಗೆ ತೊಂದರೆ ಕೊಡುವುದರಲ್ಲಿ ಮೋದಿ ಸರ್ಕಾರ ದಾಖಲೆಗಳನ್ನು ನಿರ್ಮಿಸಿದೆ- ಪ್ರಿಯಾಂಕಾ ಗಾಂಧಿ
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಬಗ್ಗೆ ಭಾನುವಾರ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಮೋದಿ ಸರ್ಕಾರ ಜನರಿಗೆ ತೊಂದರೆ ಕೊಡುವಲ್ಲಿ ದಾಖಲೆಗಳನ್ನು ನಿರ್ಮಿಸಿದೆ ಎಂದು ಆರೋಪಿಸಿದ್ದಾರೆ.
ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಬಗ್ಗೆ ಭಾನುವಾರ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಮೋದಿ ಸರ್ಕಾರ ಜನರಿಗೆ ತೊಂದರೆ ಕೊಡುವಲ್ಲಿ ದಾಖಲೆಗಳನ್ನು ನಿರ್ಮಿಸಿದೆ ಎಂದು ಆರೋಪಿಸಿದ್ದಾರೆ.
ಟ್ವಿಟರ್‌ನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಮಾಧ್ಯಮದ ವರದಿಯನ್ನು ಟ್ಯಾಗ್ ಮಾಡಿದ್ದು, ಈ ವರ್ಷ ಪೆಟ್ರೋಲ್ ಬೆಲೆ ದಾಖಲೆಯ 23.53 ರೂ.ಗಳಷ್ಟು ಹೆಚ್ಚಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: T20 World Cup 2021: ಕನ್ನಡಿಗ ಕೆ.ಎಲ್.ರಾಹುಲ್ ಬ್ಯಾಟಿಂಗ್ ಬಗ್ಗೆ ಕೊಹ್ಲಿ ಹೇಳಿದ್ದೇನು?
'ಮೋದಿ ಜಿ ಸರ್ಕಾರವು ಸಾರ್ವಜನಿಕರಿಗೆ ತೊಂದರೆ ನೀಡುವಲ್ಲಿ ದೊಡ್ಡ ದಾಖಲೆಗಳನ್ನು ಮಾಡಿದೆ.ಅತಿ ಹೆಚ್ಚು ನಿರುದ್ಯೋಗ ಇರುವುದು ಮೋದಿ ಸರ್ಕಾರದಲ್ಲಿ. ಸರ್ಕಾರಿ ಆಸ್ತಿ ಮಾರಾಟವಾಗಿರುವುದು ಮೋದಿ ಸರ್ಕಾರದಲ್ಲಿ ಎಂದು ಅವರು ಟ್ವೀಟ್ ಮಾಡಿದ್ದಾರೆ.ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ ಅವರು ಇದೇ ಮಾಧ್ಯಮ ವರದಿಯನ್ನು ಟ್ಯಾಗ್ ಮಾಡಿ 'ಅಚ್ಛೇ ದಿನ್ (ಒಳ್ಳೆಯ ದಿನಗಳು) ಎಂದು ಟ್ವೀಟ್ ಮಾಡುವ ಮೂಲಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಜೋಡಿಯ ಕೊಲೆಗಾರನ ವಿರುದ್ದ ಪೋಲಿಸ್ ಠಾಣೆ ಮೆಟ್ಟಿಲೇರಿದ ನಾಗರಹಾವು, ಮೈ ಜುಮ್ಮೆನಿಸುತ್ತದೆ ಇಡೀ ಪ್ರಕರಣ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಸತತ ನಾಲ್ಕನೇ ದಿನವಾದ ಶನಿವಾರ ಪ್ರತಿ ಲೀಟರ್‌ಗೆ 35 ಪೈಸೆ ಏರಿಕೆಯಾಗಿದ್ದು,ಆ ಮೂಲಕ ಮೇ 2020 ರಿಂದ ಪೆಟ್ರೋಲ್ ಮೇಲಿನ ದರ ಪ್ರತಿ ಲೀಟರ್‌ಗೆ 36 ರೂ. ಮತ್ತು ಡೀಸೆಲ್ ಮೇಲಿನ ದರ 26.58 ರೂ.ಗೆ ಹೆಚ್ಚಳವಾಗಿದೆ.
ಸರ್ಕಾರಿ ಸ್ವಾಮ್ಯದ ಇಂಧನ ಚಿಲ್ಲರೆ ವ್ಯಾಪಾರಿಗಳ ಬೆಲೆ ಅಧಿಸೂಚನೆಯ ಪ್ರಕಾರ ದೆಹಲಿಯಲ್ಲಿ ಈಗ ಪೆಟ್ರೋಲ್ ಬೆಲೆ ಲೀಟರ್‌ಗೆ 107.24 ರೂ ಮತ್ತು ಡೀಸೆಲ್ ರೂ 95.97 ಆಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.