ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅತ್ಯಾಚಾರದ ಹೇಳಿಕೆಗೆ ಪ್ರಿಯಾಂಕಾ ಗಾಂಧಿ ಆಕ್ರೋಶ
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶುಕ್ರವಾರದಂದು ಶಾಸಕ ಕೆ ಆರ್ ರಮೇಶ್ ಕುಮಾರ್ ಅವರ ಅತ್ಯಾಚಾರದ ಕುರಿತ ವಿವಾದಾತ್ಮಕ ಹೇಳಿಕೆಗಳನ್ನು ಖಂಡಿಸುತ್ತಾ ಅವುಗಳನ್ನು ಅಸಮರ್ಥನೀಯ ಎಂದು ಕರೆದಿದ್ದಾರೆ.
ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶುಕ್ರವಾರದಂದು ಶಾಸಕ ಕೆ ಆರ್ ರಮೇಶ್ ಕುಮಾರ್ ಅವರ ಅತ್ಯಾಚಾರದ ಕುರಿತ ವಿವಾದಾತ್ಮಕ ಹೇಳಿಕೆಗಳನ್ನು ಖಂಡಿಸುತ್ತಾ ಅವುಗಳನ್ನು ಅಸಮರ್ಥನೀಯ ಎಂದು ಕರೆದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ "ನಾನು ಈ ಮುಂಚೆ ಮಾಡಿರುವ ರಮೇಶ್ ಕುಮಾರ್ ಅವರ ಹೇಳಿಕೆಯನ್ನು ನಾನು ಖಂಡಿಸುತ್ತೇನೆ.ಅವು ಅಸಮರ್ಥನೀಯವಾಗಿವೆ.ಅತ್ಯಾಚಾರ ಒಂದು ಘೋರ ಅಪರಾಧ.ಪೂರ್ಣ ವಿರಾಮ ಹಾಕಿ" ಎಂದು ಅವರು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: KR Ramesh Kumar: 'ರಾಮಮಂದಿರ ಕಟ್ಟಿದರೆ ಸಾಕು ಎನ್ನುವವರಿಗೆ ದೇಶ ಬಿಟ್ಟಿದ್ದೇವೆ'
'ಅತ್ಯಾಚಾರ ಅನಿವಾರ್ಯವಾದಾಗ ಮಲಗಿ ಆನಂದಿಸಬೇಕು' ಎಂದು ಶಾಸಕ ಕೆ ಆರ್ ರಮೇಶ್ ಕುಮಾರ್ ಗುರುವಾರ ವಿಧಾನಸಭೆಯಲ್ಲಿ ಹೇಳಿಕೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆದಿದೆ. ಶೀಘ್ರದಲ್ಲೇ ವೈರಲ್ ಆದ ವೀಡಿಯೊದಲ್ಲಿ, ಕರ್ನಾಟಕ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕುಮಾರ್ ಅವರ ಅವಹೇಳನಕಾರಿ ಹೇಳಿಕೆಗಳಿಗೆ ನಗುತ್ತಿರುವುದನ್ನು ಕಾಣಬಹುದು.
ಅತ್ಯಾಚಾರಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ