ಮಧುರೈ: ಕೊರೊನಾ ಕಾಲದಲ್ಲಿ ಜನಸಾಮಾನ್ಯರ ಪರವಾಗಿ ನಿಲ್ಲದ ಪ್ರಧಾನಿ ಮೋದಿ, ಇದೀಗ ರೈತರನ್ನು ನಾಶಗೊಳಿಸಲು ಮುಂದಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.


COMMERCIAL BREAK
SCROLL TO CONTINUE READING

ತಮಿಳುನಾಡು ರಾಜ್ಯದ ಮಧುರೈನ ಅವನಿಯಾಪುರಂನಲ್ಲಿ ಜಲ್ಲಿಕಟ್ಟು ವೀಕ್ಷಣೆಗೆ ಆಗಮಿಸಿದ್ದ ರಾಹುಲ್ ಗಾಂಧಿ(Rahul Gandhi), ಜಲ್ಲಿಕಟ್ಟು ವೀಕ್ಷಣೆ ಬಳಿಕ ಸಭಿಕರನ್ನು ಉದ್ದೇಶಿಸಿ ಮಾತನಾಡಿದರು. ಕೇಂದ್ರ ಸರ್ಕಾರ ಜಾರಿಗೊಳಿಸಿದ 3 ಕೃಷಿ ಕಾಯ್ದೆಗಳನ್ನು ಬಲವಂತವಾಗಿ ಹಿಂದಕ್ಕೆ ಪಡೆಯಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ರಾಹುಲ್ ವಿವರಿಸಿದರು.


ಕೃಷಿ ಕಾನೂನುಗಳ ಕುರಿತಾದ ಸುಪ್ರೀಂ ಸಮಿತಿಯಿಂದ ಹೊರಬಂದ ಭೂಪಿಂದರ್ ಸಿಂಗ್ ಮಾನ್ ಹೇಳಿದ್ದೇನು?


ಕೃಷಿ ಕಾಯ್ದೆ ವಿಚಾರದಲ್ಲಿ ನಾನು ರೈತರ ಪರ ನಿಲ್ಲುತ್ತೇನೆ ಎಂದ ರಾಹುಲ್ ಗಾಂಧಿ, ರೈತರು ದುರ್ಬಲರಾದರೆ ಭಾರತ ದೇಶವೇ ದುರ್ಬಲವಾಗುತ್ತೆ ಎಂದು ಅಭಿಪ್ರಾಯಪಟ್ಟರು.


ಬಾಲ್ಕನಿಯಿಂದ ಬಿದ್ದು ಮೃತಪಟ್ಟ 20 ತಿಂಗಳು ಮಗು ಐವರನ್ನು ಉಳಿಸಿದ್ದು ಹೇಗೆ ಗೊತ್ತಾ?


ಇದೇ ವೇಳೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ ರೈತರನ್ನು ನಿರ್ಲಕ್ಷ್ಯ ಮಾಡುತ್ತಿಲ್ಲ, ಬದಲಾಗಿ ನಾಶ ಮಾಡಲು ಯತ್ನಿಸುತ್ತಿದೆ ಎಂದು ಹರಿಹಾಯ್ದರು. ತಮ್ಮ ಒಂದೆರಡು ಸ್ನೇಹಿತರನ್ನು ಮೆಚ್ಚಿಸುವ ಸಲುವಾಗಿ ರೈತರ ಹಿತಾಸಕ್ತಿಯನ್ನು ಕೇಂದ್ರ ಸರ್ಕಾರ ಬಲಿ ಕೊಡುತ್ತಿದೆ ಎಂದು ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದರು.


ಇಂದು ಮಾರ್ಕ್ಸ್ ವಾದಿ ಉರ್ದು ಕವಿ ಕೈಫಿ ಅಜ್ಮಿ ಜನ್ಮದಿನ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ