ನವದೆಹಲಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ತಮ್ಮ ಲೋಕಸಭಾ ಕ್ಷೇತ್ರವಾದ ವಯನಾಡಕ್ಕೆ ಆಗಸ್ಟ್ 26 ರಿಂದ ಮೂರು ದಿನಗಳ ಭೇಟಿ ನೀಡಿ ಸ್ಥಳೀಯರು ಮತ್ತು ಪಕ್ಷದ ಮುಖಂಡರನ್ನು ಭೇಟಿ ಮಾಡಲಿದ್ದಾರೆ.ಅಲ್ಲದೆ ಇದುವರೆಗೆ ಪ್ರವಾಹದ ನಂತರ ತೆಗೆದುಕೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ ಎನ್ನಲಾಗಿದೆ.


COMMERCIAL BREAK
SCROLL TO CONTINUE READING

ಈ ತಿಂಗಳ ಆರಂಭದಲ್ಲಿ ರಾಹುಲ್ ಕೇರಳಕ್ಕೆ ಎರಡು ದಿನಗಳ ಭೇಟಿ ನೀಡಿದ್ದರು, ವಯನಾಡನಲ್ಲಿ ಸುರಿದ ಧಾರಾಕಾರ ಮಳೆ, ಪ್ರವಾಹ ಮತ್ತು ಭೂಕುಸಿತದಿಂದಾಗಿ ಅಲ್ಲಿನ ಜನ ಜೀವನ ಅಸ್ತವ್ಯಸ್ಥವಾಗಿತ್ತು. ರಾಹುಲ್ ಗಾಂಧಿ ತಮ್ಮ ಸಂಸದೀಯ ಕ್ಷೇತ್ರದಾದ್ಯಂತ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳೀಯ ಅಧಿಕಾರಿಗಳೊಂದಿಗೆ ಸೂಕ್ತ ಕ್ರಮ ತೆಗೆದುಕೊಳ್ಳಲು ನಿರ್ದೇಶನ ನೀಡಿದ್ದರು. ಅಲ್ಲದೆ ಪ್ರಧಾನಿ ಮೋದಿಯವರಿಗೆ ಪತ್ರ ಬರೆದು ಕ್ಷೇತ್ರಕ್ಕೆ ನೆರವು ನೀಡಲು ಮನವಿ ಮಾಡಿಕೊಂಡಿದ್ದರು.


ಮೆಪಾಡ್ಡಿ ಮತ್ತು ಪುತ್ತುಮಾಲಾಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ ಅಲ್ಲಿನ ನಿವಾಸಿಗಳನ್ನು ಉದ್ದೇಶಿಸಿ ಮಾತನಾಡಿ, ಇಂತಹ ಸಮಯದಲ್ಲಿ ಸರ್ಕಾರವು ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುತ್ತದೆ ಎಂದು ಸಂತ್ರಸ್ತರಿಗೆ ಭರವಸೆ ನೀಡಿದರು. ವಯನಾಡಿನಿಂದ ಹಿಂತಿರುವಾಗ ಅವರು ಕೇರಳದ ಜನರು ಪ್ರಕೃತಿ ವಿಕೋಪದ ಸಂದರ್ಭದಲ್ಲಿ ತೋರಿದ ಧೈರ್ಯ ಮತ್ತು ಘನತೆಗೆ ಸಂತಸ ಮತ್ತು ಗೌರವವನ್ನು ವ್ಯಕ್ತಪಡಿಸಿದರು.