ರಾಜ್ಯಸಭೆಯಲ್ಲಿ ಪ್ರತಿಪಕ್ಷದ ಸ್ಥಾನವನ್ನು ಕಳೆದುಕೊಳ್ಳಲಿದೆ ಕಾಂಗ್ರೆಸ್...!

2022 ರ ಐದು ವಿಧಾನಸಭಾ ಚುನಾವಣೆಗಳಲ್ಲಿ ಕಳಪೆ ಪ್ರದರ್ಶನದ ಕಾರಣ ಕಾಂಗ್ರೆಸ್ ಪಕ್ಷವು ರಾಜ್ಯಸಭೆಯಲ್ಲಿ ಪ್ರತಿಪಕ್ಷದ ನಾಯಕನ ಸ್ಥಾನಮಾನವನ್ನು ಕಳೆದುಕೊಳ್ಳಬಹುದು ಎಂದು ಎಎನ್‌ಐ ವರದಿ ಮಾಡಿದೆ.

Written by - Zee Kannada News Desk | Last Updated : Mar 12, 2022, 03:26 PM IST
  • ಈಗ ಮೇಲ್ಮನೆಯಲ್ಲಿ ಕಾಂಗ್ರೆಸ್ ಸಂಸದರ ಸಂಖ್ಯೆಯು ಐತಿಹಾಸಿಕವಾಗಿ ಕನಿಷ್ಠ ಮಟ್ಟದಲ್ಲಿರುತ್ತದೆ
  • ವಿರೋಧ ಪಕ್ಷದ ನಾಯಕನ ಸ್ಥಾನಮಾನವನ್ನು ಕಾಯ್ದುಕೊಳ್ಳಲು ಕನಿಷ್ಠ ಬೆಂಬಲದ ಅಗತ್ಯವಿದೆ.
ರಾಜ್ಯಸಭೆಯಲ್ಲಿ ಪ್ರತಿಪಕ್ಷದ ಸ್ಥಾನವನ್ನು ಕಳೆದುಕೊಳ್ಳಲಿದೆ ಕಾಂಗ್ರೆಸ್...! title=

ನವದೆಹಲಿ: 2022 ರ ಐದು ವಿಧಾನಸಭಾ ಚುನಾವಣೆಗಳಲ್ಲಿ ಕಳಪೆ ಪ್ರದರ್ಶನದ ಕಾರಣ ಕಾಂಗ್ರೆಸ್ ಪಕ್ಷವು ರಾಜ್ಯಸಭೆಯಲ್ಲಿ ಪ್ರತಿಪಕ್ಷದ ನಾಯಕನ ಸ್ಥಾನಮಾನವನ್ನು ಕಳೆದುಕೊಳ್ಳಬಹುದು ಎಂದು ಎಎನ್‌ಐ ವರದಿ ಮಾಡಿದೆ.ಈಗ ಮೇಲ್ಮನೆಯಲ್ಲಿ ಕಾಂಗ್ರೆಸ್ ಸಂಸದರ ಸಂಖ್ಯೆಯು ಐತಿಹಾಸಿಕವಾಗಿ ಕನಿಷ್ಠ ಮಟ್ಟದಲ್ಲಿರುತ್ತದೆ ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನಮಾನವನ್ನು ಕಾಯ್ದುಕೊಳ್ಳಲು ಕನಿಷ್ಠ ಬೆಂಬಲದ ಅಗತ್ಯವಿದೆ.

ಈಗ ಕಾಂಗ್ರೆಸ್ ಪಕ್ಷಕ್ಕೆ ಉಳಿದಿರುವ ಆಯ್ಕೆ ಏನು?

ಕಾಂಗ್ರೆಸ್‌ನಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನಮಾನವನ್ನು ಉಳಿಸಿಕೊಳ್ಳಲು ಪಕ್ಷದ ಏಕೈಕ ಆಯ್ಕೆಯೆಂದರೆ ಮುಂಬರುವ ಗುಜರಾತ್ ಮತ್ತು ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡುವುದು, ಇಲ್ಲದಿದ್ದರೆ ಅದು ರಾಜ್ಯಸಭೆಯಲ್ಲಿ ಪ್ರತಿಪಕ್ಷದ ಸ್ಥಾನವನ್ನು ಕಳೆದುಕೊಳ್ಳಲಿದೆ.

ಇದನ್ನೂ ಓದಿ: UGC Big Announcement: ವಿಶ್ವವಿದ್ಯಾಲಯಗಳಲ್ಲಿ ಪಾಠ ಹೇಳಲು PhD ಅನಿವಾರ್ಯವಲ್ಲ

ರಾಜ್ಯಸಭೆಯಲ್ಲಿ ಕಾಂಗ್ರೆಸ್‌ನ ಪ್ರಸ್ತುತ ಸ್ಥಿತಿ

ಕಾಂಗ್ರೆಸ್ ಪ್ರಸ್ತುತ 34 ಸದಸ್ಯರೊಂದಿಗೆ ರಾಜ್ಯಸಭೆಯಲ್ಲಿ ಪ್ರತಿಪಕ್ಷದ ನಾಯಕನ ಸ್ಥಾನವನ್ನು ಅಲಂಕರಿಸಿದೆ.ಆದರೆ ಅದು ಈ ವರ್ಷ ಕನಿಷ್ಠ ಏಳು ಸ್ಥಾನಗಳನ್ನು ಕಳೆದುಕೊಳ್ಳುವ ಹಾದಿಯಲ್ಲಿದೆ.ಈ ವರ್ಷ ಅಸ್ಸಾಂ, ಕೇರಳ, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಉತ್ತರಪ್ರದೇಶದಲ್ಲೂ ಕಾಂಗ್ರೆಸ್ ಸಂಖ್ಯೆ ಕಡಿಮೆಯಾಗಲಿದೆ.ಸದಸ್ಯರ ನಿವೃತ್ತಿಯಿಂದಾಗಿ ಮೇಲ್ಮನೆಯಲ್ಲಿ ಮುಂದಿನ ವರ್ಷ ಕೆಲವು ಸ್ಥಾನಗಳು ಖಾಲಿಯಾಗಲಿವೆ.ಪ್ರಸ್ತುತ ಲೋಕಸಭೆಯಲ್ಲಿ ಶೇಕಡಾ 10ಕ್ಕಿಂತ ಕಡಿಮೆ ಸದಸ್ಯರನ್ನು ಒಳಗೊಂಡಿದ್ದರಿಂದಾಗಿ ಅದಕ್ಕೆ ಕಳೆದ ಎರಡು ಅವಧಿಯಲ್ಲಿ ಪ್ರತಿಪಕ್ಷದ ಸ್ಥಾನವನ್ನು ಪಡೆಯಲು ವಿಫಲವಾಗಿದೆ.

ಪಂಜಾಬ್‌(Punjab)ನಿಂದ ಐದು ಮತ್ತು ಹಿಮಾಚಲ ಪ್ರದೇಶ, ಅಸ್ಸಾಂ, ಕೇರಳ, ನಾಗಾಲ್ಯಾಂಡ್ ಮತ್ತು ತ್ರಿಪುರಾದಿಂದ ಎಂಟು ಒಟ್ಟು ಖಾಲಿ ಇರುವ 13 ರಾಜ್ಯಸಭಾ ಸ್ಥಾನಗಳನ್ನು ಭರ್ತಿ ಮಾಡಲು ಚುನಾವಣಾ ಆಯೋಗವು ಮಾರ್ಚ್ 31 ರಂದು ಚುನಾವಣೆಯನ್ನು ಈ ತಿಂಗಳ ಆರಂಭದಲ್ಲಿ ಘೋಷಿಸಿತ್ತು.

ಇದನ್ನೂ ಓದಿ: Yogi Adityanath Resignation : ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಯೋಗಿ ಆದಿತ್ಯನಾಥ್!

ಪಂಜಾಬ್‌ನಿಂದ ಮುಂದಿನ ತಿಂಗಳು ನಿವೃತ್ತರಾಗಲಿರುವ ಸದಸ್ಯರಲ್ಲಿ ಕಾಂಗ್ರೆಸ್‌ನ ಇಬ್ಬರು ಸೇರಿದ್ದಾರೆ.ನೂತನ ಪಂಜಾಬ್ ಅಸೆಂಬ್ಲಿಯಲ್ಲಿ ಆಮ್ ಆದ್ಮಿ ಪಕ್ಷ (Aam Admi Party) ವು ತನ್ನ ನಾಲ್ಕನೇ ಮೂರು ಬಹುಮತದೊಂದಿಗೆ ತನ್ನ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಲಿದೆ ಮತ್ತು ಈ ವರ್ಷ ಚುನಾವಣೆ ನಡೆಯಲಿರುವ ರಾಜ್ಯದ ಏಳು ಸ್ಥಾನಗಳಲ್ಲಿ ಕನಿಷ್ಠ ಆರನ್ನಾದರೂ ಗೆಲ್ಲುವ ಸ್ಥಿತಿಯಲ್ಲಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

 

 

Trending News