ಬೆಂಗಳೂರು: ಕಾಗವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀಮಂತ ಪಾಟೀಲ ಅವರು ತೀವ್ರ ಎದೆನೋವಿನಿಂದಾಗಿ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. 


COMMERCIAL BREAK
SCROLL TO CONTINUE READING

ಬೆಂಗಳೂರಿನ ವಿಂಡ್ ಫ್ಲವರ್ ಪ್ರಕೃತಿ ರೆಸಾರ್ಟ್ ನಲ್ಲಿ ಇತರ ಕಾಂಗ್ರೆಸ್ ಶಾಸಕರೊಂದಿಗೆ ತಂಗಿದ್ದ ಶ್ರೀಮಂತ ಪಾಟೀಲರಿಗೆ ಬುಧವಾರ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡ ಕಾರಣ ಮೊದಲು ಮುಂಬೈನ ಸಂಜೀವಿನಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಸೇಂಟ್ ಜಾರ್ಜ್ ಆಸ್ಪತ್ರೆಗೆ ದಾಖಲಿಸಲಾಗಿದೆ. 



ದೇವನಹಳ್ಳಿಯ ರೆಸಾರ್ಟ್‌ ನಲ್ಲಿ ಇತರ ಕಾಂಗ್ರೆಸ್‌ ನಾಯಕರೊಂದಿಗೆ ಉಳಿದುಕೊಂಡಿದ್ದು ಪಾಟೀಲ ಅವರು ಬುಧವಾರ ರಾತ್ರಿಯಿಂದಲೇ ನಾಪತ್ತೆಯಾಗಿದ್ದಾರೆ. ರೆಸಾರ್ಟ್ ನಿಂದ ಎಸ್ಕೇಪ್ ಆಗಿದ್ದಾರೆ. ಫೋನ್ ಸ್ವಿಚ್ ಆಫ್ ಆಗಿದೆ ಎಂಬೆಲ್ಲಾ ಸುದ್ದಿ ಹಬ್ಬಿತ್ತು. ಇದಕ್ಕೆ [ಪೂರಕ ಎಂಬಂತೆ ಶ್ರೀಮಂತ ಪಾಟೀಲರು ಮುಂಬೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುದ್ದಿ ಇದೀಗ ಬಹಿರಂಗವಾಗಿದೆ.