Cambridge University in Rahul Gandhi : ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆಗಾಗ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇರುತ್ತಾರೆ. ಆದ್ರೆ, ಈಗ  ಬ್ರಿಟನ್‌ನ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ರಾಹುಲ್ ಗಾಂಧಿ, ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ್ದಾರೆ. ಮೋದಿ ಸರ್ಕಾರದ ಎರಡು ಮಹತ್ವದ ಯೋಜನೆಗಳನ್ನು ರಾಹುಲ್ ಹೊಗಳಿರುವುದು ಸದ್ಯ ಭಾರಿ ಸದ್ದು ಮಾಡುತ್ತಿದೆ. ಅಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಮೋದಿ ಸರ್ಕಾರದಲ್ಲಿ ಜನರ ಬ್ಯಾಂಕ್ ಖಾತೆ ತೆರೆಯುವುದು ಮತ್ತು ಮಹಿಳೆಯರಿಗಾಗಿ ತಂದ ಉಜ್ವಲ ಯೋಜನೆ ಜಾರಿಗೆ ತಂದಿದ್ದು ಮಹತ್ವದ ಹೆಜ್ಜೆಯಾಗಿದೆ.


COMMERCIAL BREAK
SCROLL TO CONTINUE READING

ಕೇಂಬ್ರಿಡ್ಜ್ ನಲ್ಲಿ ರಾಹುಲ್ ಹೇಳಿದ್ದೇನು?


ಬ್ರಿಟನ್‌ ಪ್ರತಿಷ್ಠಿತ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಭಾರತೀಯರಿಗೆ ಪ್ರಯೋಜನಕಾರಿಯಾದ ಮೋದಿ ಸರ್ಕಾರದ ಯೋಜನೆಗಳ ಕೇಳಲಾಯಿತು. ಇದಕ್ಕೆ ಉತ್ತರಿಸಿದ ರಾಹುಲ್ ಗಾಂಧಿ, ಮಹಿಳೆಯರಿಗೆ ಉಚಿತ ಸಿಲಿಂಡರ್ ನೀಡುವ ಉಜ್ವಲ ಯೋಜನೆ ಮತ್ತು ಜನರ ಬ್ಯಾಂಕ್ ಖಾತೆ ತೆರೆಯುವುದು ಉತ್ತಮ ಯೋಜನಗಳಾಗಿವೆ ಎಂದು ಹೇಳಿದರು.


ಇದನ್ನೂ ಓದಿ : Sonia Gandhi Hospitalised : ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು!


ಇನ್ನು ಮುಂದುವರೆದು ಮಾತನಾಡಿದ ರಾಹುಲ್ ಗಾಂಧಿ, ಅವರು ಭಾರತದ ಜನರ ಮೇಲೆ ತಮ್ಮ ಅಭಿಪ್ರಾಯಗಳನ್ನು ಹೇರುತ್ತಿದ್ದಾರೆ, ಅದನ್ನು ಯಾರೂ ಒಪ್ಪಿಕೊಳ್ಳುವುದಿಲ್ಲ. ನೀವು ಕೇವಲ ಒಂದು ಕಲ್ಪನೆಯನ್ನು ಜನರ ಮೇಲೆ ಹೇರಿದರೆ, ಅದರ ಪ್ರತಿಕ್ರಿಯೆ ಖಂಡಿತವಾಗಿಯೂ ಬರುತ್ತದೆ ಎಂದು ಪಿಎಂ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.


ತಮ್ಮ ಮತ್ತು ಇತರ ಹಲವು ವಿರೋಧ ಪಕ್ಷದ ನಾಯಕರ ಫೋನ್‌ಗಳಲ್ಲಿ ಪೆಗಾಸಸ್ ಸ್ಪೈವೇರ್ ಇದೆ, ನಿಮ್ಮ ಮಾತುಗಳು ರೆಕಾರ್ಡ್ ಆಗುತ್ತದೆ. ನೀವು ಮಾತನಾಡುವಾಗ ಜಾಗರೂಕರಾಗಿರಿ ಎಂದು ಸ್ವತಃ ಗುಪ್ತಚರ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಭಾರತೀಯ ಸಾಗರೋತ್ತರ ಕಾಂಗ್ರೆಸ್ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ರಾಹುಲ್ ಗಾಂಧಿಯವರ ಉಪನ್ಯಾಸದ ವೀಡಿಯೊವನ್ನು ಬಿಡುಗಡೆ ಮಾಡಿದ್ದಾರೆ.


ಪ್ರತಿಪಕ್ಷಗಳ ವಿರುದ್ಧ ಪ್ರಕರಣ ದಾಖಲು


ಅಲ್ಲಿ ಮಾತನಾಡಿದ ರಾಹುಲ್ ಗಾಂಧಿ, ನಾವು (ವಿಪಕ್ಷಗಳು) ನಿರಂತರವಾಗಿ ಈ ರೀತಿಯ ಒತ್ತಡವನ್ನು ಅನುಭವಿಸುತ್ತಿದ್ದೇವೆ. ಪ್ರತಿಪಕ್ಷಗಳ ವಿರುದ್ಧ ಪ್ರಕರಣಗಳು ದಾಖಲಾಗುತ್ತಿವೆ. ನನ್ನ ವಿರುದ್ಧ ಕೆಲವು ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಲಾಗಿದ್ದು ಅದು ಯಾವುದೇ ಸಂದರ್ಭದಲ್ಲೂ ಕ್ರಿಮಿನಲ್ ಪ್ರಕರಣಗಳಲ್ಲ ಎಂದು ಹೇಳಿದರು.


ಕಳೆದ ವರ್ಷ, ಅಂತರರಾಷ್ಟ್ರೀಯ ಮಾಧ್ಯಮ ಸಂಸ್ಥೆಯು ಪೆಗಾಸಸ್ ಸ್ಪೈವೇರ್ ಅನ್ನು ಬಳಸಿಕೊಂಡು 300 ಕ್ಕೂ ಹೆಚ್ಚು ಭಾರತೀಯ ಮೊಬೈಲ್ ಫೋನ್ ಸಂಖ್ಯೆಗಳನ್ನು ಕಣ್ಗಾವಲು ಸಂಭಾವ್ಯ ಗುರಿಗಳ ಪಟ್ಟಿಯಲ್ಲಿ ಇರಿಸಲಾಗಿದೆ, ಇದರಲ್ಲಿ ಅನೇಕ ರಾಜಕಾರಣಿಗಳು ಮತ್ತು ಪತ್ರಕರ್ತರ ಫೋನ್ ನಂಬರ್'ಗಳು ಸೇರಿವೆ. ಇದರ ನಂತರ, ಕಾಂಗ್ರೆಸ್ ಮತ್ತು ಇತರ ಹಲವು ವಿರೋಧ ಪಕ್ಷಗಳು ಈ ವಿಷಯದ ಬಗ್ಗೆ ಸಂಸತ್ತಿನಲ್ಲಿ ಮತ್ತು ಸಂಸತ್ತಿನ ಹೊರಗೆ ಸರ್ಕಾರವನ್ನು ಗುರಿಯಾಗಿಸಿಕೊಂಡು ಗುಪ್ತತೆ ಎಂದು ಆರೋಪಿಸಿದವು.


ಇದನ್ನೂ ಓದಿ : ಆಧಾರ್ ಕಾರ್ಡ್ ದುರ್ಬಳಕೆ? SMS ಮೂಲಕ ನಿಮ್ಮ ಕಾರ್ಡ್ ಲಾಕ್ ಮಾಡಿ, ಹೇಗೆಂದು ತಿಳಿಯಿರಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.