Santokh Singh Chaudhary: ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್‌ ಸಂಸದ ವಿಧಿವಶ

Santokh Singh Chaudhary: ಜಲಂಧರ್‌ನ ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್ ಚೌಧರಿ ಇಂದು (ಜನವರಿ 14) ಪಂಜಾಬ್‌ನ ಫಿಲ್ಲೌರ್‌ನಲ್ಲಿ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಹೃದಯಾಘಾತ ಸಂಭವಿಸಿದ್ದು, ವಿಧಿವಶರಾಗಿದ್ದಾರೆ. ಸಂತೋಖ್ ಸಿಂಗ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ರಾಹುಲ್ ಗಾಂಧಿ ಆಸ್ಪತ್ರೆಗೆ ಧಾವಿಸಿದರು. 

Written by - Chetana Devarmani | Last Updated : Jan 14, 2023, 11:46 AM IST
  • ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಹೃದಯಾಘಾತ
  • ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್‌ ಸಂಸದ ವಿಧಿವಶ
  • ಜಲಂಧರ್‌ನ ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್ ಚೌಧರಿ
Santokh Singh Chaudhary: ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್‌ ಸಂಸದ ವಿಧಿವಶ  title=
ಸಂತೋಖ್ ಸಿಂಗ್ ಚೌಧರಿ

Santokh Singh Chaudhary: ಜಲಂಧರ್‌ನ ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್ ಚೌಧರಿ ಇಂದು (ಜನವರಿ 14) ಪಂಜಾಬ್‌ನ ಫಿಲ್ಲೌರ್‌ನಲ್ಲಿ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಹೃದಯಾಘಾತ ಸಂಭವಿಸಿದ್ದು, ವಿಧಿವಶರಾಗಿದ್ದಾರೆ. ಸಂತೋಖ್ ಸಿಂಗ್ ಅವರು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರೊಂದಿಗೆ BJY ನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದರು. ಸಂತೋಖ್ ಸಿಂಗ್ ಅವರನ್ನು ಕೂಡಲೇ ಫಗ್ವಾರಾದ ವಿರ್ಕ್ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಆಸ್ಪತ್ರೆಯ ಅಧಿಕಾರಿಗಳು ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು.

ಇದನ್ನೂ ಓದಿ : 2024ಕ್ಕೆ ಮಂಡ್ಯ ಸಂಸದರು ಬೆಂಗಳೂರಿನಲ್ಲಿ ಸ್ಪರ್ಧೆ!: ಸುಮಲತಾ ವಿರುದ್ದ ನಿಖಿಲ್ ಅಚ್ಚರಿ ಹೇಳಿಕೆ

ಸಂತೋಖ್ ಸಿಂಗ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ರಾಹುಲ್ ಗಾಂಧಿ ಆಸ್ಪತ್ರೆಗೆ ಧಾವಿಸಿದರು. ಕಾಂಗ್ರೆಸ್ ಯಾತ್ರೆಯನ್ನು ದಿನದ ಮಟ್ಟಿಗೆ ಸ್ಥಗಿತಗೊಳಿಸಿದೆ. ಸಂತೋಖ್ ಸಿಂಗ್ ನಿಧನಕ್ಕೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ದುಃಖ ವ್ಯಕ್ತಪಡಿಸಿದ್ದು, ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

"ಜಲಂಧರ್‌ನ ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್ ಚೌಧರಿ ಅವರ ಅಕಾಲಿಕ ಮರಣದಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ" ಎಂದು ಬರೆದಿದ್ದಾರೆ.

ಪಂಜಾಬ್‌ನ ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಕೂಡ ಸಂತಾಪ ಸೂಚಿಸಿದ್ದು, ಇಂದು ಹೃದಯಾಘಾತದಿಂದ ಸಂಸದ ಸಂತೋಖ್ ಸಿಂಗ್ ಚೌಧರಿ ಅವರ ಹಠಾತ್ ನಿಧನದ ಬಗ್ಗೆ ಕೇಳಿ ತುಂಬಾ ದುಃಖವಾಗಿದೆ. ವಾಹೆಗುರು ಜೀ ಅವರು ಅಗಲಿದ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಬರೆದಿದ್ದಾರೆ.

ಇದನ್ನೂ ಓದಿ :Santro Ravi Arrested : ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಗುಜರಾತ್‌ನಲ್ಲಿ ಅರೆಸ್ಟ್..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News