ವಾರಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಜಯ್ ರೈ ಕಣಕ್ಕೆ

ಕೊನೆಗೂ ವಾರಣಾಸಿ ಕ್ಷೇತ್ರದಲ್ಲಿ ಎಲ್ಲ ಊಹಾಪೋಹಗಳಿಗೆ ತೆರೆ ಬಿದ್ದಿದ್ದು.ಈಗ ವಾರಣಾಸಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಜಯ್ ರೈ ವಿರುದ್ಧ ಕಣಕ್ಕೆ ಇಳಿಯಲಿದ್ದಾರೆ.ಈಗ ಕಾಂಗ್ರೆಸ್ ಪಕ್ಷವು ತನ್ನ ಟ್ವಿಟ್ಟರ್ ಖಾತೆಯಲ್ಲಿ ವಾರಣಾಸಿ ಅಭ್ಯರ್ಥಿಯನ್ನು ಘೋಷಣೆ ಮಾಡುವುದರ ಮೂಲಕ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎನ್ನುವ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿದೆ.

Last Updated : Apr 25, 2019, 01:27 PM IST
ವಾರಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಜಯ್ ರೈ ಕಣಕ್ಕೆ   title=

ನವದೆಹಲಿ: ಕೊನೆಗೂ ವಾರಣಾಸಿ ಕ್ಷೇತ್ರದಲ್ಲಿ ಎಲ್ಲ ಊಹಾಪೋಹಗಳಿಗೆ ತೆರೆ ಬಿದ್ದಿದ್ದು.ಈಗ ವಾರಣಾಸಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಜಯ್ ರೈ ವಿರುದ್ಧ ಕಣಕ್ಕೆ ಇಳಿಯಲಿದ್ದಾರೆ.ಈಗ ಕಾಂಗ್ರೆಸ್ ಪಕ್ಷವು ತನ್ನ ಟ್ವಿಟ್ಟರ್ ಖಾತೆಯಲ್ಲಿ ವಾರಣಾಸಿ ಅಭ್ಯರ್ಥಿಯನ್ನು ಘೋಷಣೆ ಮಾಡುವುದರ ಮೂಲಕ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎನ್ನುವ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿದೆ.

ಈ ಹಿಂದೆ ಸಮಾಜವಾದಿ ಪಕ್ಷದಲ್ಲಿದ್ದ ಅಜಯ್ ರೈ ನಂತರ 2014 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಿ ಮತಗಳಿಕೆಯಲ್ಲಿ ಮೂರನೇ ಸ್ಥಾನ ಪಡೆದಿದ್ದರು. ಇಂದು ವಾರಣಾಸಿಯಲ್ಲಿ ಪ್ರಧಾನಿ ಮೋದಿ  ಗಂಗಾ ಆರತಿ ಹಾಗೂ ಬೃಹತ್ ರೋಡ್ ಶೋ ನಡೆಸಿರುವ ಸಂದರ್ಭದಲ್ಲೇ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.

ಈ ಹಿಂದೆ ಪ್ರಿಯಾಂಕಾ ಗಾಂಧಿ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರವಾಗಿ ರಾಹುಲ್ ಗಾಂಧಿಯವರನ್ನು ಕೇಳಿದಾಗ ಉತ್ತರಿಸಿದ ಅವರು "ಈ ವಿಚಾರವನ್ನು ನಿಗೂಢವಾಗಿ ಇಡುತ್ತೇನೆ. ನಿಗೂಢತೆಯ ಅಷ್ಟು ಕೆಟ್ಟದ್ದೇನಲ್ಲ" ಎಂದು ಹೇಳಿದ್ದರು.ಇನ್ನು ಪ್ರಿಯಾಂಕಾ ಗಾಂಧಿ ಈ ಬಗ್ಗೆ ಪ್ರತಿಕ್ರಿಯಿಸುತ್ತಾ " ಪಕ್ಷವೇನು ಹೇಳುತ್ತೆ ಅದನ್ನು ನಾನು ಮಾಡುತ್ತೇನೆ ಎಂದು ನಾನು ಈಗಾಗಲೇ ಹಲವು ಬಾರಿ ಹೇಳಿದ್ದೇನೆ" ಎಂದು ಹೇಳಿದ್ದರು.

ಸಮಾಜವಾದಿ ಪಕ್ಷವು ಶಲಿನಿ ಯಾದವ್ ಅವರನ್ನು ವಾರಣಾಸಿ  ಎಸ್ಪಿ-ಬಿಎಸ್ಪಿ ಮೈತ್ರಿಕೂಟದ ಜಂಟಿ ಅಭ್ಯರ್ಥಿಯಾಗಿ ಘೋಷಿಸಿದೆ.

Trending News