ಭದೋಹಿ: ಉತ್ತರ ಪ್ರದೇಶದ ಪೂರ್ವ ವಿಭಾಗದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅಪಮಾನವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಮತ್ತು ಕೆಲ ಪದಾಧಿಕಾರಿಗಳು ಶನಿವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. 


COMMERCIAL BREAK
SCROLL TO CONTINUE READING

ಕಾಂಗ್ರೆಸ್ ಅಭ್ಯರ್ಥಿ ರಾಮಕಾಂತ್ ಯಾದವ್ ಘಟಕದಲ್ಲಿ ಯಾರೊಂದಿಗೂ ಸಹಕರಿಸುತ್ತಿಲ್ಲ ಎಂದು ಜಿಲ್ಲಾ ಘಟಕದ ಪದಾಧಿಕಾರಿಗಳು ಪ್ರಿಯಾಂಕಾ ಗಾಂಧಿಗೆ ಶುಕ್ರವಾರ ದೂರು ನೀಡಿದ್ದೆವು. ಆದರೆ ಪ್ರಿಯಾಂಕ ಗಾಂಧಿ ಅವರು ಇಲ್ಲಿ ಯಾರನ್ನೂ ಪಕ್ಷದ ರ್ಯಾಲಿಗೆ ಆಹ್ವಾನಿಸಿಲ್ಲ ಎಂದು ಹೇಳಿ ಅವಮಾನಿಸಿದ್ದಾರೆ ಎಂದು ಕಾಂಗ್ರೆಸ್ ನ ಭದೋಹಿ ಜಿಲ್ಲೆಯ ಅಧ್ಯಕ್ಷೆ ನೀಲಮ್ ಮಿಶ್ರಾ ಸುದ್ದಿಗಾರರಿಗೆ ತಿಳಿಸಿದ್ದಾರೆ.


ಶುಕ್ರವಾರ ಪಕ್ಷದ ಅಭ್ಯರ್ಥಿ ರಾಮಾಕಾಂತ್ ಯಾದವ್ ಅವರಿಗೆ ಬೆಂಬಲವಾಗಿ ಭಧೋಹಿಯಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರಿಯಾಂಕಾ ಗಾಂಧಿ ಭಾಗವಹಿಸಿದ್ದರು.


ಪ್ರಿಯಾಂಕಾ ಗಾಂಧಿಯವರು ತಮ್ಮ ಕಳವಳವನ್ನಷ್ಟೇ ನಿರ್ಲಕ್ಷಿಸಿಲ್ಲ, ಆದರೆ ಸಾರ್ವಜನಿಕವಾಗಿ ಅಪಮಾನ ಮಾಡಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಭ್ಯರ್ಥಿಗೆ ಯಾವುದೇ ಎಚ್ಚರಿಕೆ ನೀಡಲಿಲ್ಲ ಎಂದು ಮಿಸ್ರಾ ಹೇಳಿದ್ದಾರೆ.


ರಾಜೀನಾಮೆ ನೀಡಿದ ಬಳಿಕ ಸಭೆ ನಡೆಸಿದ ಪದಾಧಿಕಾರಿಗಳು, ಲೋಕಸಭಾ ಚುನಾವಣೆಯಲ್ಲಿ ಎಸ್ಪಿ-ಬಿಎಸ್ಪಿ ಮೈತ್ರಿಕೂಟದ  ಅಭ್ಯರ್ಥಿ ರಂಗನಾಥ್ ಮಿಶ್ರಾ ಅವರನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ.