ನವದೆಹಲಿ: ಶಿವಸೇನಾಗೆ ಕಾಂಗ್ರೆಸ್ ಮತ್ತು ಎನ್ಸಿಪಿ ಮೈತ್ರಿಕೂಟ ಬೆಂಬಲ ನೀಡಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿರುವ ಸಂದರ್ಭದಲ್ಲಿ ಈಗ ಕಾಂಗ್ರೆಸ್ ನ ನಾಯಕ ಮಲ್ಲಿಕಾರ್ಜುನ್ ಖರ್ಗೆ ಜನರು ಪ್ರತಿಪಕ್ಷದಲ್ಲಿ ಕುಳಿತುಕೊಳ್ಳಲು ಹೇಳಿದ್ದಾರೆ ಅದನ್ನು ಪಕ್ಷ ಸ್ವೀಕರಿಸಿದೆ ಎಂದು ಹೇಳಿದರು.


COMMERCIAL BREAK
SCROLL TO CONTINUE READING

'ನಾವು ಪ್ರತಿಪಕ್ಷದಲ್ಲಿ ಕುಳಿತುಕೊಳ್ಳಬೇಕು ಎಂದು ಜನರು ಆದೇಶವನ್ನು ನೀಡಿದ್ದಾರೆ ಅದನ್ನು ನಾವು ಸ್ವೀಕರಿಸುತ್ತೇವೆ. ಈಗ ಪಕ್ಷದ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ, ನಾವು ಅದನ್ನು ಪಕ್ಷದ ಹೈಕಮಾಂಡ್ ಗೆ ಬಿಟ್ಟಿದ್ದೇವೆ' ಎಂದು ಅವರು ಹೇಳಿದರು. 'ಕೆಲವು ಹೇಳಿಕೆಗಳಿವೆ, ಕೆಲವರು ಶಿವಸೇನೆಗೆ ಬೆಂಬಲ ನೀಡುವ ಬಗ್ಗೆ ಮಾತನಾಡುತ್ತಿದ್ದಾರೆ ಮತ್ತು ಕೆಲವರು ನಿರಾಕರಿಸುತ್ತಿದ್ದಾರೆ ಆದರೆ ಅಂತಹ ಹೇಳಿಕೆಗಳಲ್ಲಿ ಯಾವುದೇ ಸತ್ಯವಿಲ್ಲ. ಕಾಂಗ್ರೆಸ್ ಪಕ್ಷದ ನಿಲುವು ನಾವು ಸಾರ್ವಜನಿಕ ಜನಾದೇಶದೊಂದಿಗೆ ಹೋಗಬೇಕಾಗಿದೆ ಮತ್ತು ಕಾಂಗ್ರೆಸ್ ಮತ್ತು ಎನ್‌ಸಿಪಿ ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತುಕೊಳ್ಳಬೇಕು ಎಂದು ಅವರು ಸುದ್ದಿಗಾರರಿಗೆ ಹೇಳಿದರು.


ಮಹಾರಾಷ್ಟ್ರ ಕಾಂಗ್ರೆಸ್ ನ ನೂತನವಾಗಿ ಆಯ್ಕೆಯಾದ ಶಾಸಕರು ಜೈಪುರದ ದೆಹಲಿ ರಸ್ತೆಯಲ್ಲಿರುವ ರೆಸಾರ್ಟ್ ನಲ್ಲಿ ತಂಗಿದ್ದಾರೆ. ಖರ್ಗೆ ಹೊರತಾಗಿ, ಮಹಾರಾಷ್ಟ್ರದ ಕೆಲವು ಹಿರಿಯ ನಾಯಕರು ಜೈಪುರದಲ್ಲಿ ಕ್ಯಾಂಪಿಂಗ್ ಮಾಡುತ್ತಿದ್ದಾರೆ ಮತ್ತು ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟಿನ ದೃಷ್ಟಿಯಿಂದ ತಮ್ಮ ಕಾರ್ಯತಂತ್ರವನ್ನು ರೂಪಿಸುತ್ತಿದ್ದಾರೆ.