Congress President Race: ಮುಂಬರುವ ಲೋಕಸಭೆ ಚುನಾವಣೆ 2024ಕ್ಕೆ sambandhisidante ಕಾಂಗ್ರೆಸ್ ಪಕ್ಷ ತನ್ನ ಸಿದ್ಧತೆಯಲ್ಲಿ ತೊಡಗಿದೆ. ಸಂಘಟನೆಗೆ ಜೀವ ತುಂಬುವ ನಿಟ್ಟಿನಲ್ಲಿ ಪಕ್ಷದ ‘ಭಾರತ್ ಜೋಡೋ ಯಾತ್ರೆ’ ಸಾಗುತ್ತಿದೆ. ಪ್ರಧಾನಿ ಮೋದಿಯ ಬಿರುಗಾಳಿ ಮತ್ತು ರಾಜಕೀಯ ವಲಯದಲ್ಲಿ ಮುನ್ನುಗ್ಗುತ್ತಿರುವ ಕೆಜ್ರಿವಾಲ್ ಹಿನ್ನೆಲೆ ಕಾಂಗ್ರೆಸ್ ತನ್ನ ರಾಜಕೀಯ ನೆಲೆಯನ್ನು ಬಲಪಡಿಸಲು ನಿರಂತರವಾಗಿ ಪ್ರಯತ್ನಿಸುತ್ತಿದೆ. ಇದೆಲ್ಲದರ ನಡುವೆಯೂ ಪಕ್ಷಕ್ಕೆ ಇನ್ನೂ ಪೂರ್ಣಾವಧಿ ಅಧ್ಯಕ್ಷರ ಆಯ್ಕೆ ಸಾಧ್ಯವಾಗಿಲ್ಲ. ಕಳೆದ ಹಲವು ತಿಂಗಳಿಂದ ಅಧ್ಯಕ್ಷ ಸ್ಥಾನಕ್ಕೆ ಹುಡುಕಾಟ ನಡೆಯುತ್ತಿದೆ. ಕಾಂಗ್ರೆಸ್ ಅಧ್ಯಕ್ಷ ಯಾರು? ಈ ಬಗ್ಗೆ ಇನ್ನೂ ಸಸ್ಪೆನ್ಸ್ ಮುಂದುವರೆದಿದೆ.


COMMERCIAL BREAK
SCROLL TO CONTINUE READING

ಕಳೆದ ಲೋಕಸಭಾ ಚುನಾವಣೆಯ ಹೀನಾಯ ಸೋಲಿನ ಬಳಿಕ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನೈತಿಕ ಹೊಣೆ ಹೊತ್ತು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅಂದಿನಿಂದ ಸೋನಿಯಾ ಗಾಂಧಿ ಅವರು ಪಕ್ಷದ ಹಂಗಾಮಿ ಅಧ್ಯಕ್ಷರ ಜವಾಬ್ದಾರಿಯನ್ನು ವಹಿಸಿದ್ಕೊಂದಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರ ನಾಮನಿರ್ದೇಶನ ಪ್ರಕ್ರಿಯೆಯು ಸೆಪ್ಟೆಂಬರ್ 24-30 ರವರೆಗೆ ನಡೆಯಲಿದೆ.


ಕಾಂಗ್ರೆಸ್ ಅಧ್ಯಕ್ಷರ ರೇಸ್‌ನಲ್ಲಿ ರಾಹುಲ್ ಎಲ್ಲಿ ನಿಂತಿದ್ದಾರೆ?
ಕಾಂಗ್ರೆಸ್ ಪಕ್ಷದ ಮುಂದಿನ ಮುಖ್ಯಸ್ಥರು ಯಾರು? ಇದರ ಹೊಣೆ ರಾಹುಲ್ ಗಾಂಧಿ ಅವರಿಗೆ ಸಿಗಲಿದೆಯೇ ಅಥವಾ ಈ ಕುಟುಂಬದ ಹೊರತಾಗಿ ಯಾರಾದರೂ ಹೊರುತ್ತಾರೆಯೇ? ಈ ವಿಷಯದ ಬಗ್ಗೆ ಇನ್ನೂ ಅನುಮಾನದ ಸ್ಥಿತಿ ಇದೆ, ಸದ್ಯ ಈ ಬಗ್ಗೆ ರಾಜಕೀಯ ವಲಯದಲ್ಲಿ ಬಿಸಿ ಬಿಸಿ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಪಕ್ಷದ ಹಲವು ನಾಯಕರು ರಾಹುಲ್ ಗಾಂಧಿ ಅಧ್ಯಕ್ಷರಾಗಬೇಕು ಎಂದು ಬಯಸುತ್ತಿದ್ದಾರೆ, ಆದರೆ ಪಕ್ಷದೊಳಗಿನ ಕೆಲವು ನಾಯಕರು ಗಾಂಧಿ ಕುಟುಂಬವನ್ನು ಹೊರತುಪಡಿಸಿ ಬೇರೆ ಅಧ್ಯಕ್ಷರನ್ನು ಹೊಂದಲು ಬಯಸುತ್ತಿದ್ದಾರೆ. ಗಾಂಧಿ ಕುಟುಂಬದ ಹೊರಗಿನವರು ಅಧ್ಯಕ್ಷರಾಗುತ್ತಾರೆ ಎಂದು ರಾಹುಲ್ ಗಾಂಧಿ ಈ ಹಿಂದೆ ಒಮ್ಮೆ ಹೇಳಿದ್ದರು. ಶನಿವಾರ, ರಾಜಸ್ಥಾನ ಕಾಂಗ್ರೆಸ್, ರಾಹುಲ್ ಗಾಂಧಿಯನ್ನು ಅಧ್ಯಕ್ಷರನ್ನಾಗಿ ಮಾಡಲು ನಿರ್ಣಯವನ್ನು ಅಂಗೀಕರಿಸಿದ್ದು, ಸಿಎಂ ಅಶೋಕ್ ಗೆಹ್ಲೋಟ್ ಈ ಹೆಜ್ಜೆಯನ್ನು ಇಟ್ಟಿದ್ದಾರೆ.


ರಾಹುಲ್ ಬೆಂಬಲಿಸಿದವರು ಯಾರು?
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗುವ ಬಗ್ಗೆ ಚರ್ಚೆ ವೇಗವಾಗಿ ಸಾಗುತ್ತಿವೆ, ಆದರೆ ಸ್ವತಃ ಅಶೋಕ್ ಗೆಹಲೋಟ್ ಅವರೇ ರಾಹುಲ್ ಗಾಂಧಿ ಅಧ್ಯಕ್ಷರಾಗಬೇಕೆಂದು ಬಯಸಿದ್ದಾರೆಇದೇ ವೇಳೆ, 2024 ರ ಲೋಕಸಭಾ ಚುನಾವಣೆಯ ದೃಷ್ಟಿಯಿಂದ, ಪಕ್ಷದ ಚುಕ್ಕಾಣಿ ರಾಹುಲ್ ಗಾಂಧಿಯವರ ಕೈಯಲ್ಲಿರಬೇಕು ಎಂದು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹೇಳಿದ್ದಾರೆ. ಮಲ್ಲಿಕಾರ್ಜುನ ಖರ್ಗೆ, ಅಜಯ್ ಮಾಕನ್, ಪಿಸಿಸಿ ಮುಖ್ಯಸ್ಥ ಗೋವಿಂದ್ ಸಿಂಗ್ ದೋಟಸಾರ ಸೇರಿದಂತೆ ಹಲವು ನಾಯಕರು ರಾಹುಲ್ ಗಾಂಧಿ ಬೆಂಬಲಕ್ಕೆ ನಿಂತಿದ್ದಾರೆ. ಜೈರಾಮ್ ರಮೇಶ್ ಕೂಡ ರಾಹುಲ್ ಬೆಂಬಲಕ್ಕೆ ನಿಂತಿದ್ದಾರೆ, ಆದರೆ ಗಾಂಧಿ ಕುಟುಂಬದ ಹೊರತಾಗಿ ಬೇರೆಯವರು ಅಧ್ಯಕ್ಷರಾದರೂ ಸಂಘಟನೆಗೆ ಸಂಬಂಧಿಸಿದ ವಿಷಯಗಳಲ್ಲಿ ನೆಹರೂ-ಗಾಂಧಿ ಕುಟುಂಬದ ಮಹತ್ವ ಹಾಗೆಯೇ ಉಳಿಯಲಿದೆ ಎಂದು ಅವರು ಹೇಳಿದ್ದಾರೆ. ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ನಿರ್ಭಿಡ ಧ್ವನಿಯಾಗಿದ್ದಾರೆ ಎಂದು ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ.


ರಾಹುಲ್ ಗಾಂಧಿ ವಿರುದ್ಧ ಯಾರು?
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಶೋಕ್ ಗೆಹ್ಲೋಟ್ ಅವರನ್ನು ಕಣಕ್ಕಿಳಿಸಿದರೆ, ಪಕ್ಷದ ಸಂಸದ ಶಶಿ ತರೂರ್ ಕೂಡ ತಮ್ಮ ಹಕ್ಕು ಜತಾಯಿಸುವ ಸಾಧ್ಯತೆ ಇದೆ. ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಪ್ರಜಾಸತ್ತಾತ್ಮಕ ಸ್ಪರ್ಧೆ ನಡೆದರೆ, ಪಕ್ಷಕ್ಕೆ ಹೊಸ ಭರವಸೆ, ಜೀವ ತುಂಬಲಿದೆ ಎಂದು ಶಶಿ ತರೂರ್ ಸೇರಿದಂತೆ ಹಲವು ಪಕ್ಷದ ಮುಖಂಡರು ಪದೇ ಪದೇ ಹೇಳುತ್ತಿದ್ದಾರೆ.


ಹೆಚ್ಚಿನ ಜನರು ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ, ಅದು ಪಕ್ಷದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಅನೇಕ ನಾಯಕರು ನಂಬುತ್ತಾರೆ. ತರೂರ್ ಸೇರಿದಂತೆ ಹಲವು ನಾಯಕರು ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣಾ ಪ್ರಕ್ರಿಯೆಯ ನ್ಯಾಯಸಮ್ಮತೆಯನ್ನು ಪ್ರಶ್ನಿಸಿದ್ದಾರೆ. ತರೂರ್ ಹೊರತಾಗಿ, ಮನೀಷ್ ತಿವಾರಿ, ಕಾರ್ತಿ ಚಿದಂಬರಂ ಸೇರಿದಂತೆ ಹಲವು ನಾಯಕರು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುವ ಮುನ್ನ ಕಾಂಗ್ರೆಸ್ ಸಮಿತಿಯ ಚುನಾವಣಾ ಮಂಡಳಿಯ ಪಟ್ಟಿಯನ್ನು ಸಂಭಾವ್ಯ ಅಭ್ಯರ್ಥಿಗಳಿಗೆ ನೀಡಬೇಕು ಎಂದು ಈ ಹಿಂದೆ ಹೇಳಿದ್ದಾರೆ. 


ಇದನ್ನೂ ಓದಿ-ಜಾನ್ಸನ್ ಬೇಬಿ ಪೌಡರ್ ಉತ್ಪಾದನಾ ಪರವಾನಗಿ ರದ್ದುಗೊಳಿಸಿದ ಈ ರಾಜ್ಯ..!


ಕೆಲವು G-23 ನಾಯಕರ ನಿಲುವು ವಿಭಿನ್ನವಾಗಿದೆ?
ಕಾಂಗ್ರೆಸ್‌ನಲ್ಲಿ ಅಧ್ಯಕ್ಷ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೆಲಸ ಇನ್ನೇನು ಆರಂಭಗೊಳ್ಳುತ್ತಿದೆ ಎನ್ನುವಾಗಲೇ ಪಕ್ಷದೊಳಗಿನ ಗೊಂದಲ ಇನ್ನೂ ಶಮನವಾಗಿಲ್ಲ. ಅಶೋಕ್ ಗೆಹ್ಲೋಟ್ ಅವರ ಮುಂದೆ, ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಅಥವಾ ಜಿ -23 ರ ಯಾವುದೇ ನಾಯಕ ಸೋಲಿಸಬಹುದು. ಹೀಗಿರುವಾಗ ಕಾಂಗ್ರೆಸ್ ನಲ್ಲಿ ಸುದೀರ್ಘ ಅವಧಿಯ ನಂತರ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವ ಪರಿಸ್ಥಿತಿ ನಿರ್ಮಾಣವಾಗಲಿದೆ.


ಇದನ್ನೂ ಓದಿ-ಮುಂಬೈನಲ್ಲಿ ಶಾಲೆಯ ಲಿಫ್ಟ್‌ನಲ್ಲಿ ಸಿಲುಕಿ 26 ವರ್ಷದ ಶಿಕ್ಷಕಿ ಸಾವು


ಕಾಂಗ್ರೆಸ್ ಸಂಸದ ಶಶಿ ತರೂರ್ ಅವರಲ್ಲದೆ, ಜಿ-23 ನಾಯಕರಾದ ಮನೀಶ್ ತಿವಾರಿ, ಆನಂದ್ ಶರ್ಮಾ ಮತ್ತು ಭೂಪೇಂದ್ರ ಹೂಡಾ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಯಲ್ಲಿ ಸ್ಪರ್ಧಿಸುವ ಚರ್ಚೆಗಳು ಹೆಡ್ಲೈನ್ ಗಿಟ್ಟಿಸುತ್ತಿವೆ. ಆದರೆ, ಕಾಂಗ್ರೆಸ್ ಘೋಷಿಸಿರುವ ಚುನಾವಣಾ ಕಾರ್ಯಕ್ರಮದ ಪ್ರಕಾರ, ಸೆಪ್ಟೆಂಬರ್ 22 ರಂದು ಪಕ್ಷದ ಅಧ್ಯಕ್ಷರ ಆಯ್ಕೆಗೆ ಅಧಿಸೂಚನೆ ಹೊರಡಿಸಿದ ನಂತರ ಸೆಪ್ಟೆಂಬರ್ 24 ರಿಂದ ನಾಮಪತ್ರ ಸಲ್ಲಿಸಬಹುದು ಎನ್ನಲಾಗಿದೆ. ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳಿದ್ದಲ್ಲಿ ಅಕ್ಟೋಬರ್ 17 ರಂದು ಮತದಾನ ನಡೆಯಲಿದೆ ಎನ್ನಲಾಗಿದೆ.


ಇದನ್ನೂ ನೋಡಿ-


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.