Congress President Election Nomination : ಗಾಂಧಿ ಕುಟುಂಬದ ಟ್ರಸ್ಟಿ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಈ ಮೊದಲು ಅಂದರೆ, ಶುಕ್ರವಾರ ಶಶಿ ತರೂರ್ ಅವರು ನಾಮಪತ್ರ ಸಲ್ಲಿಸಲಿದ್ದಾರೆ. ಅಧ್ಯಕ್ಷ ಸ್ಥಾನದ ರೇಸ್‌ನಿಂದ ದಿಗ್ವಿಜಯ್ ಸಿಂಗ್ ಮತ್ತು ಅಶೋಕ್ ಗೆಹ್ಲೋಟ್ ಹಿಂದೆ ಸರಿದಿದ್ದಾರೆ. 


COMMERCIAL BREAK
SCROLL TO CONTINUE READING

ಈ ಬಗ್ಗೆ ಮಾತನಾಡಿದ ದಿಗ್ವಿಜಯ್ ಸಿಂಗ್, ಖರ್ಗೆಯವರು ಚುನಾವಣೆಗೆ ಸ್ಪರ್ಧಿಸುವುದರಿಂದ ಇದು ಗಾಂಧಿ ಕುಟುಂಬದ ಆಯ್ಕೆ ಎಂಬುದು ಸ್ಪಷ್ಟವಾಗಿದೆ. ಹೀಗಾಗಿ ನಾನು ಖರ್ಗೆ ವಿರುದ್ಧ ಸ್ಪರ್ಧಿಸಲು ಸಾಧ್ಯವಿಲ್ಲ ಎಂದು  ಹೇಳಿದ್ದಾರೆ.


ಇದನ್ನೂ ಓದಿ : ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಪ್ರಸನ್ನ ಬಿ ವರಾಳೆ ಹೆಸರು ಶಿಫಾರಸ್ಸು


ದಿಗ್ವಿಜಯ್ ಸಿಂಗ್ ಹೇಳಿದ್ದೇನು?


ನಾನು ನನ್ನ ಜೀವನದುದ್ದಕ್ಕೂ ಕಾಂಗ್ರೆಸ್‌ಗಾಗಿ ದುಡಿದಿದ್ದೇನೆ ಮತ್ತು ಮುಂದೆಯೂ ಮಾಡುತ್ತೇನೆ. ದಲಿತರು, ಆದಿವಾಸಿಗಳು ಮತ್ತು ಬಡವರ ಪರವಾಗಿ ನಿಲ್ಲುವುದು, ಕೋಮು ಸೌಹಾರ್ದತೆ ಮತ್ತು ನೆಹರೂ-ಗಾಂಧಿ ಕುಟುಂಬದ ಮೇಲಿನ ಕಾಳಜಿಯನ್ನು ಕದಡುವವರ ವಿರುದ್ಧ ಧ್ವನಿ ಎತ್ತುವ ಮೂರು ವಿಷಯಗಳಲ್ಲಿ ನಾನು ಎಂದಿಗೂ ರಾಜಿ ಮಾಡಿಕೊಂಡಿಲ್ಲ ಎಂದರು.


ಇನ್ನು ಮುಂದುವರೆದು ಮಾತನಾಡಿದ ಅವರು, ಖರ್ಗೆ ನನ್ನ ಹಿರಿಯರು, ನಿನ್ನೆ ಅವರ ನಿವಾಸಕ್ಕೆ ತೆರಳಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವ ವೇಳೆ ನಾನೇನು ಸಲ್ಲಿಸುವುದಿಲ್ಲ ಎಂದು ಹೇಳಿದ್ದೆ. ಆಗ ದಾಖಲಾತಿ ಮಾಡಿಕೊಳ್ಳುತ್ತಿಲ್ಲ ಎಂದರು. ಆ ನಂತರ ಅವರೇ ಈ ಹುದ್ದೆಗೆ ಅಭ್ಯರ್ಥಿ ಎಂದು ಮಾಧ್ಯಮಗಳಿಂದ ತಿಳಿದು ಬಂದಿದೆ. ನಾನು ಅವರೊಂದಿಗೆ ನಿಲ್ಲುತ್ತೇನೆ ಮತ್ತು ಅವರ ವಿರುದ್ಧ ಸ್ಪರ್ಧಿಸುವ ಬಗ್ಗೆ ಯೋಚಿಸಲು ಸಹ ಸಾಧ್ಯವಿಲ್ಲ. ನಾನು ಅವರ ಪ್ರತಿಪಾದಕನಾಗುತ್ತೇನೆ ಎಂದು ಹೇಳಿದ್ದಾರೆ.


ಗಾಂಧಿ ಕುಟುಂಬಕ್ಕೆ ಆಪ್ತರು ಖರ್ಗೆ 


ಸ್ಪಷ್ಟ ಚಿತ್ರಣ ಹೊಂದಿರುವ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್‌ನ ಪ್ರಬಲ ನಾಯಕ. ಅವರು ಗಾಂಧಿ ಕುಟುಂಬಕ್ಕೂ ಆಪ್ತರು. ದಲಿತ ಸಮುದಾಯದಿಂದ ಬಂದಿರುವ ಖರ್ಗೆ ವಿರೋಧ ಪಕ್ಷದ ನಾಯಕರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಶಾಸಕರ ಬಂಡಾಯದ ನಂತರ ರಾಜಸ್ಥಾನಕ್ಕೆ ವೀಕ್ಷಕರಾಗಿ ತೆರಳಿದ್ದರು. ಆದರೆ, ಕಾಂಗ್ರೆಸ್‌ನಲ್ಲಿ ಒಬ್ಬ ವ್ಯಕ್ತಿ-ಒಬ್ಬ ಹುದ್ದೆ ಎಂಬ ತತ್ವ ಇರುವುದರಿಂದ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾದರೆ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಸ್ಥಾನವನ್ನು ತೊರೆಯುತ್ತಾರೆಯೇ ಎಂಬ ಪ್ರಶ್ನೆಯೂ ಉದ್ಭವಿಸಿದೆ. ಈ ಹಿಂದೆ ಸಿಎಂ ಅಶೋಕ್ ಗೆಹ್ಲೋಟ್ ಕೂಡ ಮುಖ್ಯಮಂತ್ರಿ ಸ್ಥಾನ ತೊರೆಯುವಂತೆ ಮನವಿ ಮಾಡಿದ್ದರು.


ಇದನ್ನೂ ಓದಿ : Congress President Election: ಚುನಾವಣಾ ಕಣಕ್ಕೆ ಖರ್ಗೆ ಪ್ರವೇಶ! ಭಾರಿ ಕುತೂಹಲ ಮೂಡಿಸಿದ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ


ಇದೇ ವೇಳೆ ಮಾತನಾಡಿದ ಅಶೋಕ್ ಗೆಹ್ಲೋಟ್, ಮಲ್ಲಿಕಾರ್ಜುನ ಖರ್ಗೆ ವಿಚಾರದಲ್ಲಿ ನಮ್ಮ ಹಿರಿಯ ನಾಯಕರು ನಿರ್ಧಾರ ಕೈಗೊಂಡಿದ್ದಾರೆ. ನಾನು ಅವರ ಪ್ರತಿಪಾದಕನಾಗುತ್ತೇನೆ. ರಾಜಸ್ಥಾನದ ಮುಖ್ಯಮಂತ್ರಿಯಾಗಿರುವುದು ಸೇರಿದಂತೆ ಎಲ್ಲಾ ವಿಷಯಗಳಲ್ಲಿ ಪಕ್ಷದ ಆದೇಶವನ್ನು ಪಾಲಿಸುವುದಾಗಿ ಹೇಳಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.