Congress President Poll: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಎದುರಿಸಲು ಮುಂದಾಗಿರುವ ಲೋಕಸಭಾ ಸದಸ್ಯ ಶಶಿ ತರೂರ್, ಅಭ್ಯರ್ಥಿಗಳ ನಡುವೆ ಬಹಿರಂಗ ಚರ್ಚೆಗೆ ಸಿದ್ಧ ಎಂದು ಭಾನುವಾರ ಹೇಳಿದ್ದಾರೆ. ಇತ್ತೀಚಿಗೆ ಬ್ರಿಟನ್‌ನಲ್ಲಿ ಕನ್ಸರ್ವೇಟಿವ್ ಪಕ್ಷದ ನಾಯಕತ್ವದ ಹುದ್ದೆಯ ಚುನಾವಣೆಯಂತೆಯೇ ಇದು ಪಕ್ಷದ ಬಗ್ಗೆ ಜನರ ಆಸಕ್ತಿಯನ್ನು ಹೆಚ್ಚಿಸಲಿದೆ ಎಂಬುದು ಇದರ ಹಿಂದಿನ ಕಾರಣ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಸದಸ್ಯರ ಹೃದಯದಲ್ಲಿ ನೆಹರೂ-ಗಾಂಧಿ ಕುಟುಂಬಕ್ಕೆ ವಿಶೇಷ ಸ್ಥಾನವಿದೆ ಮತ್ತು ಯಾವಾಗಲೂ ಇರುತ್ತದೆ ಎಂದು ಅವರು ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಸುದ್ದಿ ಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಕಾಂಗ್ರೆಸ್ ಮುಖಂಡ ಹಾಗೂ ಸಂಸದ ಶಶಿ ತರೂರ್, ಗಾಂಧಿ ಕುಟುಂಬದಿಂದ ಹಿಡಿದು ಕಾಂಗ್ರೆಸ್ ಸಂಘಟನೆಯವರೆಗೆ ಹಲವು ಪ್ರಮುಖ ವಿಷಯಗಳನ್ನು ಇಟ್ಟುಕೊಂಡಿದ್ದಾರೆ. ಪರಿಣಾಮಕಾರಿ ನಾಯಕತ್ವ ಮತ್ತು ಸಾಂಸ್ಥಿಕ ಸುಧಾರಣೆಯ ಸಂಯೋಜನೆಯಲ್ಲಿ ಕಾಂಗ್ರೆಸ್‌ನ ಪ್ರಸ್ತುತ ಸವಾಲುಗಳಿಗೆ ಉತ್ತರವಿದೆ ಎಂದು ಅವರು ಹೇಳಿದ್ದಾರೆ. 'ನಾನು ಉನ್ನತ ಮಟ್ಟದ ಪ್ರಮುಖ ಸಂಸ್ಥೆಗಳ ವಿಶ್ವಾಸಾರ್ಹ ದಾಖಲೆಯನ್ನು ಹೊಂದಿದ್ದೇನೆ. ವಿಶ್ವಸಂಸ್ಥೆಯ ಸಾರ್ವಜನಿಕ ಮಾಹಿತಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ, ನಾನು ವಿಶ್ವಾದ್ಯಂತ 77 ಕಚೇರಿಗಳಲ್ಲಿ 800 ಕ್ಕೂ ಹೆಚ್ಚು ಸಿಬ್ಬಂದಿಗಳಿರುವ ವಿಶ್ವಸಂಸ್ಥೆಯ ಅತಿದೊಡ್ಡ ಇಲಾಖೆಗೆ ಸಂವಹನಗಳನ್ನು ನಿರ್ವಹಿಸಿದೆ. ಈ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆಯ ನೇತೃತ್ವ ವಹಿಸಲು ಚುನಾವಣೆಗೆ ಸ್ಪರ್ಧಿಸುವಂತೆ ಅನೇಕರು ನನ್ನನ್ನು ವಿನಂತಿಸಿದ್ದರು' ಎಂದು ತರೂರ್ ಹೇಳಿದ್ದಾರೆ.


ಇದನ್ನೂ ಓದಿ-Rajasthan Political Crisis: 'ಮನೆಯಲ್ಲಿ ಕುಳಿತಲ್ಲಿಯೇ ಲಕ್ಷ್ಮಿ ಬಂದರೆ ನಿರಾಕರಿಸಬಾರದು' ಸಚಿನ್ ಪೈಲಟ್ ಗೆ ಬಿಜೆಪಿ ನಾಯಕನ ಆಫರ್


ಖರ್ಗೆ ಮತ್ತು ತರೂರ್ ನಡುವೆ ನೇರ ಹಣಾಹಣಿ
ಜಾರ್ಖಂಡ್‌ನ ಮಾಜಿ ಸಚಿವ ಕೆ.ಎನ್.ತ್ರಿಪಾಠಿ ಅವರ ನಾಮಪತ್ರ ಶನಿವಾರ ತಿರಸ್ಕೃತಗೊಂಡಿದ್ದು, ಅಖಿಲ ಭಾರತ ಕಾಂಗ್ರೆಸ್ ಸಮಿತಿ 'ಎಐಸಿಸಿ' ಅಧ್ಯಕ್ಷ ಸ್ಥಾನಕ್ಕೆ ಈಗ ಖರ್ಗೆ ಮತ್ತು ತರೂರ್ ನಡುವೆ ಪೈಪೋಟಿ ಏರ್ಪಟ್ಟಿರುವುದು ಇಲ್ಲಿ ಉಲ್ಲೇಖನೀಯ.


ಇದನ್ನೂ ಓದಿ-Congress President Election: ಪಕ್ಷದ ಮೂವರು ಪ್ರಮುಖ ವಕ್ತಾರರಿಂದ ರಾಜೀನಾಮೆ, ಖರ್ಗೆ ಪರ ಪ್ರಚಾರ ಮಾಡುವುದಾಗಿ ಘೋಷಣೆ


ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ: ಅಕ್ಟೋಬರ್ 8, 17 ರಂದು ಚುನಾವಣೆ
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಹಿಂಪಡೆಯಲು ಅಕ್ಟೋಬರ್ 8 ಕೊನೆಯ ದಿನವಾಗಿದೆ. ಅಗತ್ಯ ಬಿದ್ದರೆ ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದೆ. ಅಕ್ಟೋಬರ್ 19 ರಂದು ಮತ ಎಣಿಕೆ ನಡೆಯಲಿದ್ದು, ಅದೇ ದಿನ ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ನೋಡಿ-


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.