ನವದೆಹಲಿ: ಇತ್ತೀಚಿಗೆ ನಡೆದ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಹೀನಾಯ ಸೋಲನ್ನು ಕಂಡಿರುವ ಹಿನ್ನಲೆಯಲ್ಲಿ ಈಗ ಆಯಾ ರಾಜ್ಯಗಳ ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಬೇಕು ಎಂದು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶಿಸಿದ್ದಾರೆ.
ಈಗ ಈ ವಿಷಯವನ್ನು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿರುವ ಹಿರಿಯ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ (Randeep Surjewala)" ಪಕ್ಷದ ಮರುಸಂಘಟನೆಗೆ ಅನುಕೂಲವಾಗುವಂತೆ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರದ ಪಿಸಿಸಿ ಅಧ್ಯಕ್ಷರು ರಾಜೀನಾಮೆ ನೀಡುವಂತೆ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ (Sonia Gandhi ) ಹೇಳಿದ್ದಾರೆ" ಎಂದು ಅವರು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಬೆಳ್ಳನೆ ಬೆಳಗಾಯಿತು' ಹಾಡಿನ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಲತಾ ಮಂಗೇಶ್ಕರ್..!
Congress President, Smt. Sonia Gandhi has asked the PCC Presidents of Uttar Pradesh, Uttarakhand, Punjab, Goa & Manipur to put in their resignations in order to facilitate reorganisation of PCC’s.
— Randeep Singh Surjewala (@rssurjewala) March 15, 2022
ಇತ್ತೀಚಿಗೆ ನಡೆದ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ನಿರೀಕ್ಷಿತ ಮಟ್ಟದಲ್ಲಿ ಪ್ರದರ್ಶನ ನೀಡುವಲ್ಲಿ ವಿಫಲವಾಗಿತ್ತು. ಉತ್ತರ ಪ್ರದೇಶದಲ್ಲಿ ಪಕ್ಷವು ಕೇವಲ 2 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ತೀವ್ರ ಮುಖಭಂಗವನ್ನು ಅನುಭವಿಸಿತ್ತು.
ಇದನ್ನೂ ಓದಿ : Hijab Row: ಶಾಲಾ-ಕಾಲೇಜುಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಡಿಕೆಶಿ ಮನವಿ
ಇನ್ನೊಂದೆಡೆಗೆ ಪಂಜಾಬ್ ನಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರುವ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಪಕ್ಷವು ತೀವ್ರ ಆಂತರಿಕ ಸಂಘರ್ಷದಿಂದಾಗಿ ಹೀನಾಯ ಸೋಲನ್ನು ಅನುಭವಿಸಿತು. ಅಷ್ಟೇ ಅಲ್ಲದೆ ಪಕ್ಷದ ಘಟಾನುಘಟಿ ನಾಯಕರುಗಳು ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.