ಪಂಚ ರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರಿಗೆ ರಾಜೀನಾಮೆ ನೀಡಲು ಸೋನಿಯಾ ಗಾಂಧಿ ಆದೇಶ
ಇತ್ತೀಚಿಗೆ ನಡೆದ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಹೀನಾಯ ಸೋಲನ್ನು ಕಂಡಿರುವ ಹಿನ್ನಲೆಯಲ್ಲಿ ಈಗ ಆಯಾ ರಾಜ್ಯಗಳ ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಬೇಕು ಎಂದು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶಿಸಿದ್ದಾರೆ.
ನವದೆಹಲಿ: ಇತ್ತೀಚಿಗೆ ನಡೆದ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಹೀನಾಯ ಸೋಲನ್ನು ಕಂಡಿರುವ ಹಿನ್ನಲೆಯಲ್ಲಿ ಈಗ ಆಯಾ ರಾಜ್ಯಗಳ ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಬೇಕು ಎಂದು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶಿಸಿದ್ದಾರೆ.
ಈಗ ಈ ವಿಷಯವನ್ನು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿರುವ ಹಿರಿಯ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ (Randeep Surjewala)" ಪಕ್ಷದ ಮರುಸಂಘಟನೆಗೆ ಅನುಕೂಲವಾಗುವಂತೆ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರದ ಪಿಸಿಸಿ ಅಧ್ಯಕ್ಷರು ರಾಜೀನಾಮೆ ನೀಡುವಂತೆ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ (Sonia Gandhi ) ಹೇಳಿದ್ದಾರೆ" ಎಂದು ಅವರು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಬೆಳ್ಳನೆ ಬೆಳಗಾಯಿತು' ಹಾಡಿನ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಲತಾ ಮಂಗೇಶ್ಕರ್..!
Hijab Row: ಶಾಲಾ-ಕಾಲೇಜುಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಡಿಕೆಶಿ ಮನವಿ
ಇನ್ನೊಂದೆಡೆಗೆ ಪಂಜಾಬ್ ನಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರುವ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಪಕ್ಷವು ತೀವ್ರ ಆಂತರಿಕ ಸಂಘರ್ಷದಿಂದಾಗಿ ಹೀನಾಯ ಸೋಲನ್ನು ಅನುಭವಿಸಿತು. ಅಷ್ಟೇ ಅಲ್ಲದೆ ಪಕ್ಷದ ಘಟಾನುಘಟಿ ನಾಯಕರುಗಳು ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.