ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಶನಿವಾರದಂದು ಪಕ್ಷದ ನಾಯಕ ಗುಲಾಂ ನಬಿ ಆಜಾದ್ ಅವರನ್ನು ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.


COMMERCIAL BREAK
SCROLL TO CONTINUE READING

ಕಾಂಗ್ರೆಸ್ ಪಕ್ಷದ ಭಿನ್ನಮತೀಯ ಬಣ G-23 ನಲ್ಲಿನ ಭಾಗವಾಗಿರುವ ಗುಲಾಂ ನಬಿ ಆಜಾದ್ (Ghulam Nabi Azad) ಅವರು ಇತ್ತೀಚಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ಮೂರನೇ ಸುತ್ತಿನ ಚರ್ಚೆಯನ್ನು ನಡೆಸಿದ್ದರು.ಗಾಂಧಿಯೇತರ ವ್ಯಕ್ತಿಗಳನ್ನು ಕಾಂಗ್ರೆಸ್ ಪಕ್ಷದ ಮುಖ್ಯಸ್ಥರನ್ನಾಗಿ ನೇಮಕಮಾಡಬೇಕು ಎಂದು ಇತ್ತೀಚಿಗೆ ನಡೆದ ಕಾರ್ಯಕಾರಣಿ ಸಭೆಯಲ್ಲಿ G23 ಬಣದ ನಾಯಕರು ಆಗ್ರಹಿಸಿದ್ದರು.ಆದರೆ ಇದನ್ನು ಕಾರ್ಯಕಾರಣಿ ಸಮಿತಿ ತಿರಸ್ಕರಿಸಿತ್ತು.


ಇದನ್ನೂ ಓದಿ: ಶಾಲೆಗಳು ಮುಚ್ಚಲ್ಪಟ್ಟಿರುವುದರಿಂದಾಗಿ 247 ಮಿಲಿಯನ್ ಭಾರತೀಯ ಮಕ್ಕಳ ಮೇಲೆ ಪರಿಣಾಮ


ಇದಾದ ನಂತರ ಗಾಂಧಿ-ಕುಟುಂಬ ನಿಷ್ಠರ ನಿಲುವಿನಿಂದ ಅಸಮಾಧಾನಗೊಂಡಿರುವ ಅತೃಪ್ತರು ಬುಧವಾರದಿಂದ ಸರಣಿ ಸಭೆಗಳನ್ನು ನಡೆಸಿದ್ದಾರೆ.ಆದರೆ ಇನ್ನೊಂದೆಡೆಗೆ ಹಲವು ನಾಯಕರು ಗಾಂಧಿ ಕುಟುಂಬದಿಂದಲೇ ಕಾಂಗ್ರೆಸ್ ಪಕ್ಷವು ಒಂದಾಗಿರಲು ಸಾಧ್ಯ ಎಂದು ಹೇಳಿದ್ದಾರೆ.ಕಳೆದ ಕಾರ್ಯಕಾರಿಣಿ ಸಭೆಯಲ್ಲಿ, ಪಕ್ಷದ ಮುಖಂಡರು ಸೋನಿಯಾ ಗಾಂಧಿ ಅವರ ಮಕ್ಕಳಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಎಲ್ಲಾ ಹುದ್ದೆಗಳಿಂದ ಕೆಳಗಿಳಿಯುವ ಪ್ರಸ್ತಾಪವನ್ನು ತಿರಸ್ಕರಿಸಿದ್ದರು.


ಇದನ್ನೂ ಓದಿ: ಕೊರೋನಾ ಬಿಕ್ಕಟ್ಟಿನಿಂದಾಗಿ ಮುಂಬರುವ ದಿನಗಳಲ್ಲಿ ಪ್ರತಿದಿನ 6,000 ಮಕ್ಕಳು ಸಾವು -ಯುನಿಸೆಫ್ ಎಚ್ಚರಿಕೆ


G-23 ಸತತವಾಗಿ ಚುನಾವಣಾ ನಷ್ಟಗಳ ನಂತರ 2020 ರಲ್ಲಿ ಸೋನಿಯಾ ಗಾಂಧಿಗೆ ಪತ್ರ ಬರೆದಾಗಿನಿಂದ ಸಂಘಟನೆಯ ಪುನರ್ರಚನೆಗೆ ನಿರಂತರವಾಗಿ ಪ್ರಯತ್ನಿಸುತ್ತಿದೆ.ಈಗ ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಂಜಾಬ್ ಅನ್ನು ಕಳೆದುಕೊಂಡಿತು ಮತ್ತು ಉತ್ತರ ಪ್ರದೇಶ ಮತ್ತು ಇತರ ರಾಜ್ಯಗಳಲ್ಲಿ ಹೀನಾಯ ಸೋಲನ್ನು ಅನುಭವಿಸಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.