Congress Manifesto : ಕಾಂಗ್ರೆಸ್ ಪ್ರಣಾಳಿಕೆಯಲ್ಲಿ 'ನರೇಂದ್ರ ಮೋದಿ ಸ್ಟೇಡಿಯಂ' ಹೆಸರು ಬದಲಾಯಿಸುವುದಾಗಿ ಭರವಸೆ 

ಕಾಂಗ್ರೆಸ್ ಸರ್ಕಾರ ಬಂದರೆ ನರೇಂದ್ರ ಮೋದಿ ಸ್ಟೇಡಿಯಂ ಹೆಸರನ್ನು ಬದಲಾಯಿಸಲಾಗುವುದು ಎಂದು ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಈ ಕ್ರೀಡಾಂಗಣಕ್ಕೆ ಸರ್ದಾರ್ ಪಟೇಲ್ ಹೆಸರಿಡಲಾಗುವುದು ಎಂದು ಭರವಸೆ ನೀಡಿದೆ.

Written by - Channabasava A Kashinakunti | Last Updated : Nov 12, 2022, 03:32 PM IST
  • ಈ ದೊಡ್ಡ ದೊಡ್ಡ ಭರವಸೆಗಳನ್ನು ನೀಡಿದ ಕಾಂಗ್ರೆಸ್
  • ರೈತರಿಗೆ ಕಾಂಗ್ರೆಸ್ ಭರವಸೆ
  • ಹಾಲು ಉತ್ಪಾದಕರಿಗೆ ಸಬ್ಸಿಡಿ
Congress Manifesto : ಕಾಂಗ್ರೆಸ್ ಪ್ರಣಾಳಿಕೆಯಲ್ಲಿ 'ನರೇಂದ್ರ ಮೋದಿ ಸ್ಟೇಡಿಯಂ' ಹೆಸರು ಬದಲಾಯಿಸುವುದಾಗಿ ಭರವಸೆ  title=

Narendra Modi Stadium Name Change : ಗುಜರಾತ್ ವಿಧಾನಸಭೆ ಚುನಾವಣೆ 2022ಕ್ಕೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಸಾಮಾನ್ಯ ಜನರಿಗೆ ಮತ್ತು ಮಹಿಳೆಯರಿಂದ ರೈತರಿಗೆ ಅನೇಕ ದೊಡ್ಡ ಭರವಸೆಗಳನ್ನು ನೀಡಿದೆ. ಆದರೆ ಕಾಂಗ್ರೆಸ್ ನ ಈ ಭರವಸೆ ಎಲ್ಲೆಡೆ ಚರ್ಚೆಯಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಬಂದರೆ ನರೇಂದ್ರ ಮೋದಿ ಸ್ಟೇಡಿಯಂ ಹೆಸರನ್ನು ಬದಲಾಯಿಸಲಾಗುವುದು ಎಂದು ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಈ ಕ್ರೀಡಾಂಗಣಕ್ಕೆ ಸರ್ದಾರ್ ಪಟೇಲ್ ಹೆಸರಿಡಲಾಗುವುದು ಎಂದು ಭರವಸೆ ನೀಡಿದೆ.

ಈ ದೊಡ್ಡ ದೊಡ್ಡ ಭರವಸೆಗಳನ್ನು ನೀಡಿದ ಕಾಂಗ್ರೆಸ್ 

ಗುಜರಾತ್‌ಗೆ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಸರ್ಕಾರಿ ಉದ್ಯೋಗಗಳಲ್ಲಿ ಗುತ್ತಿಗೆ ಪದ್ಧತಿಯನ್ನು ಕೊನೆಗೊಳಿಸುವುದಾಗಿ ಭರವಸೆ ನೀಡಿದೆ. 10 ಲಕ್ಷ ಸರ್ಕಾರಿ ಉದ್ಯೋಗ ನೀಡಲಾಗುವುದು. 3000 ನಿರುದ್ಯೋಗ ಭತ್ಯೆ ನೀಡಲಾಗುವುದು. 500 ರೂಪಾಯಿಗೆ ಗ್ಯಾಸ್ ಸಿಲಿಂಡರ್ ದೊರೆಯಲಿದೆ. 300 ಯೂನಿಟ್ ವಿದ್ಯುತ್ ಉಚಿತವಾಗಿರುತ್ತದೆ. ಹಳೆಯ ಪಿಂಚಣಿ ಯೋಜನೆ ಜಾರಿಯಾಗಲಿದೆ. ಪ್ರತಿ ಗುಜರಾತಿಗೆ 10 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ದೊರೆಯಲಿದೆ. ರೈತರ 3 ಲಕ್ಷ ಸಾಲ ಮನ್ನಾ ಮಾಡಲಾಗುವುದು. ಇದಲ್ಲದೇ ಅವರ ವಿದ್ಯುತ್ ಬಿಲ್ ಕೂಡ ಮನ್ನಾ ಆಗಲಿದೆ ಎಂದು ಭರವಸೆ ನೀಡಿದೆ.

ಇದನ್ನೂ ಓದಿ : Rahul Gandhi : ಪುಟ್ಟ ಬಾಲಕಿಯ ಜೊತೆ ರಾಹುಲ್ ಮಾತುಕತೆ, ವಿಡಿಯೋ ವೈರಲ್‌

ರೈತರಿಗೆ ಕಾಂಗ್ರೆಸ್ ಭರವಸೆ

ಗುಜರಾತ್‌ನ ರೈತರ ಸ್ಥಿತಿಯನ್ನು ಸುಧಾರಿಸಲು, ಬೆಳೆಗೆ ಬೆಲೆ ಪಡೆಯಲು 'ಬೆಲೆ ನಿಗದಿ ಸಮಿತಿ' ರಚಿಸಲಾಗುವುದು ಎಂದು ಕಾಂಗ್ರೆಸ್ ಭರವಸೆ ನೀಡಿದೆ. ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು. ನಿರ್ಗತಿಕ ವಿದ್ಯಾರ್ಥಿಗಳಿಗೆ 500 ರೂ.ನಿಂದ 20,000 ರೂ.ವರೆಗಿನ ವಿದ್ಯಾರ್ಥಿ ವೇತನ ನೀಡಲಾಗುವುದು ಎಂದು ತಿಳಿಸಿದೆ.

ಹಾಲು ಉತ್ಪಾದಕರಿಗೆ ಸಬ್ಸಿಡಿ

ಗುಜರಾತ್ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹಾಲು ಉತ್ಪಾದಕರಿಗೆ ಲೀಟರ್‌ಗೆ 5 ರೂಪಾಯಿ ಸಬ್ಸಿಡಿ ನೀಡುವುದಾಗಿ ಭರವಸೆ ನೀಡಿದೆ. 4 ಲಕ್ಷ ಕೋವಿಡ್ ಪರಿಹಾರ ನೀಡಲಾಗುವುದು. ಕಳೆದ 27 ವರ್ಷಗಳಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲಾಗುವುದು. ಭ್ರಷ್ಟಾಚಾರ ನಿಗ್ರಹ ಕಾಯ್ದೆ ತಂದು ತಪ್ಪಿತಸ್ಥರನ್ನು ಜೈಲಿಗೆ ಕಳುಹಿಸಲಾಗುವುದು. MNREGA ಯೋಜನೆಯಂತಹ ನಗರ ಉದ್ಯೋಗ ಖಾತ್ರಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದೆ.

ಇದನ್ನೂ ಓದಿ : Viral Video: ‘ಭಾರತ್ ಜೋಡೋ ಯಾತ್ರೆ’ ವೇಳೆ ಬಂಬೂ ಚಿಕನ್ ತಯಾರಿಸಿದ ರಾಹುಲ್ ಗಾಂಧಿ..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News