ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಚರ್ಚೆ ಮಧ್ಯೆ ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆದಿದೆ. ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಮೇ ತಿಂಗಳಿನಲ್ಲಿ ಚುನಾವಣೆ ನಡೆಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಹಿಂದಿನ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ಅಧ್ಯಕ್ಷರ ಬಗ್ಗೆ ಪ್ರತಿಭಟನೆ ನಡೆದಿತ್ತು.


COMMERCIAL BREAK
SCROLL TO CONTINUE READING

2019ರ ಮೇ ತಿಂಗಳಿನಲ್ಲಿ ರಾಹುಲ್ ಗಾಂಧಿ(Rahul Gandhi), ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವ್ರ ರಾಜೀನಾಮೆ ನಂತ್ರ ಸೋನಿಯಾ ಗಾಂಧಿ ಹಂಗಾಮಿ ಅಧ್ಯಕ್ಷರಾಗಿದ್ದರು. ಕಾಂಗ್ರೆಸ್ ನ ಒಂದು ಗುಂಪು ಪೂರ್ಣ ಪ್ರಮಾಣದ ಅಧ್ಯಕ್ಷರ ಆಯ್ಕೆಗೆ ಒತ್ತಾಯಿಸಿದೆ. ಅಧ್ಯಕ್ಷರು ಸಕ್ರಿಯವಾಗಿ ಕೆಲಸ ಮಾಡಬೇಕೆಂಬ ಬೇಡಿಕೆಯಿಟ್ಟಿದೆ.


Government Alert - ಇನ್ಮುಂದೆ ಮಂತ್ರಿಗಳು ಹಾಗೂ ಅಧಿಕಾರಿಗಳ ವಿರುದ್ಧ ಟೀಕೆ ಮಾಡಿದ್ರೆ ಹುಷಾರ್...!


ಇಂದು ನಡೆದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಮೂರು ಪ್ರಸ್ತಾಪಗಳನ್ನು ಅಂಗೀಕರಿಸಲಾಗಿದೆ. ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕು. ಖಾಸಗಿ ಚಾನೆಲ್‌ ಸಂಪಾದಕರ ವಾಟ್ಸಾಪ್ ಚಾಟ್‌ನಲ್ಲಿ ರಾಷ್ಟ್ರೀಯ ಭದ್ರತೆಯಲ್ಲಿನ ದೋಷಗಳ ಬಗ್ಗೆ ತನಿಖೆ ನಡೆಸಲು ಜಂಟಿ ಸಂಸದೀಯ ಸಮಿತಿ ರಚಿಸುವ ಬೇಡಿಕೆ. ಎಲ್ಲಾ ದೇಶವಾಸಿಗಳು ಕೊರೊನಾ ಲಸಿಕೆ ತೆಗೆದುಕೊಳ್ಳಬೇಕು. ಲಸಿಕೆ ತಯಾರಿಸಿದ್ದಕ್ಕಾಗಿ ವಿಜ್ಞಾನಿಗಳನ್ನು ಶ್ಲಾಘಿಸಲಾಯಿತು.


ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಖಾತೆ ನಿರ್ಬಂಧಿಸಿದ್ದಕ್ಕೆ ಟ್ವಿಟ್ಟರ್ ಮೇಲೆ ಸಂಸದೀಯ ಸಮಿತಿ ಗರಂ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.