ಈಗಷ್ಟೇ ಮಹಾರಾಷ್ಟ್ರದಲ್ಲಿ ಅಧಿಕಾರ ಕಳೆದುಕೊಂಡ ನೋವಿನಿಂದ ಕಾಂಗ್ರೆಸ್‌ ಹೊರಬುರತ್ತಿದೆ. ಆದರೆ ಈ ಬೆನ್ನಲ್ಲೇ ಗೋವಾದಲ್ಲಿ ಸಂಕಷ್ಟ ಎದುರಾಗಿದೆ. ಗೋವಾದಲ್ಲಿ ಸರ್ಕಾರ ಇಲ್ಲದಿದ್ದರೂ ರಾಜ್ಯದಲ್ಲಿ ಎರಡನೇ ಅತಿ ದೊಡ್ಡ ಪಕ್ಷವಾಗಿರುವ ಕಾಂಗ್ರೆಸ್‌ಗೆ ಭಾರೀ ಹೊಡೆತ ಬೀಳುವ ಸಾಧ್ಯತೆ ಕಂಡುಬರುತ್ತಿದೆ. ಕಾಂಗ್ರೆಸ್ ಪಕ್ಷದ ನಾಯಕರಾದ ಮೈಕೆಲ್ ಲೋಬೋ ಮತ್ತು ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್‌ ಕೆಲ ಶಾಸಕರ ಜೊತೆಗೂಡಿ ಆಡಳಿತ ಪಕ್ಷ ಬಿಜೆಪಿಗೆ ಸೇರಲು ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Vegetable Price: ಕಣ್ಣೀರು ತರಿಸುತ್ತಿದೆ ಈರುಳ್ಳಿ ಬೆಲೆ: ಮತ್ತೆ ಹೆಚ್ಚಳವಾಯ್ತು ತರಕಾರಿ ದರ!


ಲೋಬೊ ಅವರು ಪಕ್ಷಕ್ಕೆ ಹಾನಿ ಮಾಡುವ ಸಂಚು ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಗೋವಾ ಉಸ್ತುವಾರಿ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಗುಂಡೂರಾವ್ ಈ ಬಗ್ಗೆ ಮಾತನಾಡಿದ್ದು, “ಕಾಮತ್ ಮತ್ತು ಲೋಬೋ ಚುನಾವಣೆಗೆ ಮುನ್ನ ಸರ್ವೇಶ್ವರನ ಮುಂದೆ ಪಕ್ಷ ಬಿಡುವುದಿಲ್ಲ ಮತ್ತು ಪಕ್ಷಾಂತರ ಮಾಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದವರು. ಇದು ದೇವರಿಗೆ ಎಷ್ಟು ಬೆಲೆ ಕೊಡುತ್ತದೆ ಎಂಬುದಕ್ಕೆ ಸ್ಪಷ್ಟ ಪ್ರತಿಬಿಂಬವಾಗಿದೆ. ಆದರೆ ಈ ಇಬ್ಬರೂ ನಾಯಕರು ಬಿಜೆಪಿಯೊಂದಿಗೆ ಕೆಲಸ ಮಾಡುತ್ತಿದ್ದಾರೆ" ಎಂದು ಆರೋಪಿಸಿದರು.


"ದೇಶದಲ್ಲಿನ ವಿರೋಧ ಪಕ್ಷವನ್ನು ಹೋಗಲಾಡಿಸುವುದು ಬಿಜೆಪಿಯ ಧ್ಯೇಯವಾಗಿದೆ. ಅವರು ನಿರ್ದಿಷ್ಟವಾಗಿ ಕಾಂಗ್ರೆಸ್ ಅನ್ನು ಮುಗಿಸಲು ಬಯಸುತ್ತಿದ್ದಾರೆ. ಕಾಂಗ್ರೆಸ್ ಅನ್ನು ನಾಶಪಡಿಸುವ ಮೂಲಕ ಮತ್ತು ದುರ್ಬಲಗೊಳಿಸಲು ಪ್ರಯತ್ನಿಸುವ ಮೂಲಕ, ಅವರ ಹಾದಿಯನ್ನು ಸುಗಮಗೊಳಿಸುತ್ತಿದ್ದಾರೆ" ಎಂದು ಹೇಳಿದರು.


ಮೈಕಲ್ ಲೋಬೊ ಅವರನ್ನು ತಕ್ಷಣವೇ ಎಲ್‌ಒಪಿ ಹುದ್ದೆಯಿಂದ ತೆಗೆದುಹಾಕಲಾಗುತ್ತದೆ ಎಂದು ಅವರು ಹೇಳಿದರು. ಹೊಸ ನಾಯಕನನ್ನು ಆಯ್ಕೆ ಮಾಡಲಾಗುವುದು ಮತ್ತು ಕಾನೂನು ಪ್ರಕಾರ ಏನು ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ನಿರ್ಧರಿಸಲಾಗುವುದು ಎಂದರು. 


ಗೋವಾದ ಆಡಳಿತಾರೂಢ ಬಿಜೆಪಿಯು ನಮ್ಮ ಅನೇಕ ಶಾಸಕರಿಗೆ ಕಾಂಗ್ರೆಸ್‌ ಪಕ್ಷ ತೊರೆಯಲು ಭಾರಿ ಮೊತ್ತದ ಆಮಿಷ ಒಡ್ಡಲಾಗಿದೆ ಎಂದು ಆರೋಪಿಸಿದರು. 


5 ಶಾಸಕರು ಸಂಪರ್ಕದಲ್ಲಿಲ್ಲ:
ಗೋವಾದ 11 ಕಾಂಗ್ರೆಸ್ ಶಾಸಕರ ಪೈಕಿ ಐವರು ಪಕ್ಷದ ಸಂಪರ್ಕದಲ್ಲಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಜ್ಯದ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಮೇಲೆ ನಿಗಾ ಇಡಲು ಪಕ್ಷದ ಹಿರಿಯ ನಾಯಕ ಮುಕುಲ್ ವಾಸ್ನಿಕ್ ಅವರನ್ನು ಗೋವಾಕ್ಕೆ ಭೇಟಿ ನೀಡುವಂತೆ ಸೂಚಿಸಿದ್ದಾರೆ.


ಇದನ್ನೂ ಓದಿ: ಐಸಿಐಸಿಐ ಬ್ಯಾಂಕ್‌ ಗ್ರಾಹಕರೇ ಗಮನಿಸಿ: ಈ ವಾಟ್ಸಾಪ್ ಸಂದೇಶದ ಬಗ್ಗೆ ಇರಲಿ ಎಚ್ಚರ!


ಪಕ್ಷದ ಐದು ಶಾಸಕರಾದ ಲೋಬೋ, ಕಾಮತ್, ಕೇದಾರ್ ನಾಯ್ಕ್, ರಾಜೇಶ್ ಫಲ್ದೇಸಾಯಿ ಮತ್ತು ದೇಲಿಯಾಲ ಲೋಬೋ ಅವರನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ ಎಂದು ಗುಂಡೂರಾವ್ ಹೇಳಿದರು. ಈ ವರ್ಷದ ಆರಂಭದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 11 ಸ್ಥಾನಗಳನ್ನು ಗೆದ್ದಿದ್ದರೆ, ಬಿಜೆಪಿ 20 ಸ್ಥಾನಗಳನ್ನು ಗೆದ್ದಿತ್ತು. ಇದಕ್ಕೆ ಇತರ ಐವರ ಬೆಂಬಲವೂ ಇದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.