ತೆಲಂಗಾಣ: ಡಿಸೆಂಬರ್ 7 ರಂದು ನಡೆಯಲಿರುವ ತೆಲಂಗಾಣ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್  65 ಅಭ್ಯರ್ಥಿಗಳ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ತೆಲಂಗಾಣ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಎನ್. ಉತ್ತಮ್ ಕುಮಾರ್ ರೆಡ್ಡಿ ಹುಝುನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. 


COMMERCIAL BREAK
SCROLL TO CONTINUE READING

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಪಕ್ಷದ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಯ ದೀರ್ಘ ಸಭೆಯ ನಂತರ ಈ ಪಟ್ಟಿಯನ್ನು ಬಿಡುಗಡೆ ಮಾಡಲಾಯಿತು. ರಾಜ್ಯ ಕಾಂಗ್ರೆಸ್​ನ ಎಲ್ಲಾ ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದರು. ಸಿಇಸಿ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ಅವರು ಈ ಪಟ್ಟಿಯನ್ನು ಬಿಡುಗಡೆ ಮಾಡಿದರು.




ದಕ್ಷಿಣದ ಈ ರಾಜ್ಯದಲ್ಲಿ ಕಾಂಗ್ರೆಸ್ ಚಂದ್ರಶೇಖರ್ ರಾವ್ ನೇತೃತ್ವದ ಟಿಆರ್ ಸಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಇದಕ್ಕಾಗಿ ಹಲವು ಕ್ಷೇತ್ರಗಳಲ್ಲಿ ಚಂದ್ರಬಾಬು ನಾಯ್ಡು ಅವರ ಟಿಡಿಪಿಯೊಂದಿಗೆ ಚುನಾವಣಾ ಒಪ್ಪಂದಕ್ಕೆ ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಟಿಡಿಪಿ ಕೇಂದ್ರದಲ್ಲಿ ಆಡಳಿತಾರೂಢ ಎನ್ಡಿಎ ಒಕ್ಕೂಟದ ಪಾಲುದಾರರಾಗಿದ್ದರೂ, ಆಂಧ್ರಪ್ರದೇಶ ಕೇಂದ್ರ ವಿಶೇಷ ಸ್ಥಾನಮಾನ ನೀಡದಿರುವ ಬಗ್ಗೆ ಒಕ್ಕೂಟದಿಂದ ಬೇರ್ಪಟ್ಟಿದೆ.


ನಾಯ್ಡು ಈಗ ವಿಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಲುವಾಗಿ ಹಲವು ಪಕ್ಷದ  ಮುಖಂಡರನ್ನು ಭೇಟಿಯಾಗಿದ್ದು, ಬಿಜೆಪಿಯನ್ನು ಸೋಲಿಸಲು ಯುನೈಟೆಡ್ ಒಕ್ಕೂಟದ ಒಂದು ಭಾಗವೆಂದು ಮನವಿ ಮಾಡುತ್ತಿದ್ದಾರೆ.