National Herald Case: ಅಮಿತ್ ಶಾ, ನಿರ್ಮಲಾ ಸೀತಾರಾಮನ್ಗೆ ಲೀಗಲ್ ನೋಟಿಸ್ ಕಳುಹಿಸಿದ ಕಾಂಗ್ರೆಸ್
National Herald Case: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಜಾರಿ ನಿರ್ದೇಶನಾಲಯ ಸತತ ಮೂರನೇ ದಿನವೂ ವಿಚಾರಣೆ ನಡೆಸಿದೆ. ಈ ಬೆನ್ನಲ್ಲೇ ಅವರ ಪಕ್ಷ, ಕಾಂಗ್ರೆಸ್ ಕೇಂದ್ರ ಸರ್ಕಾರಕ್ಕೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ.
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಜಾರಿ ನಿರ್ದೇಶನಾಲಯ ಸತತ ಮೂರನೇ ದಿನವೂ ವಿಚಾರಣೆ ನಡೆಸಿದೆ. ಈ ಬೆನ್ನಲ್ಲೇ ಅವರ ಪಕ್ಷ, ಕಾಂಗ್ರೆಸ್ ಕೇಂದ್ರ ಸರ್ಕಾರಕ್ಕೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ.
ಇದನ್ನೂ ಓದಿ: Bhool Bhulaiyaa 2: ಒಟಿಟಿಗೆ ಬರ್ತಿದೆ ಕಾರ್ತಿಕ್ ಆರ್ಯನ್ ನಟನೆಯ ಭೂಲ್ ಭುಲಯ್ಯ 2
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ವಿಚಾರಣೆ ಎದುರಿಸುತ್ತಿರುವ ರಾಹುಲ್ ಗಾಂಧಿ ಅವರ ಕುರಿತು ಮಾಧ್ಯಮಗಳಿಗೆ ತಪ್ಪು ಮಾಹಿತಿ ಸೋರಿಕೆಯಾಗುತ್ತಿದೆ ಎಂದು ಕಾಗ್ರೆಸ್ ಆರೋಪಿಸಿ ಕೇಂದ್ರ ಸರ್ಕಾರಕ್ಕೆ ಲೀಗಲ್ ನೋಟಿಸ್ ಕಳುಹಿಸಿದೆ. ಗೃಹ ಸಚಿವ ಅಮಿತ್ ಶಾ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕಾಂಗ್ರೆಸ್ ಕಳುಹಿಸಿರುವ ನೋಟಿಸ್‌ನಲ್ಲಿ ಸರ್ಕಾರವು ಜಾರಿ ನಿರ್ದೇಶನಾಲಯವನ್ನು ರಾಜಕೀಯ ಸೇಡಿಗಾಗಿ ಬಳಸುತ್ತಿದೆ ಎಂದು ಆರೋಪಿಸಿದೆ.
ರಾಹುಲ್ ಗಾಂಧಿ ಅವರ ವಿಚಾರಣೆ ಪ್ರಜಾಪ್ರಭುತ್ವ ವಿರೋಧಿ ನಡೆ ಎಂದು ಆರೋಪಿಸಿರುವ ಕಾಂಗ್ರೆಸ್, ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುವುದನ್ನು ವಿರೋಧಿಸಿ ಕೈ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಈ ಮಧ್ಯೆ ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಲೀಗಲ್ ನೋಟಿಸ್ ನೀಡಿದೆ.
ಇದನ್ನೂ ಓದಿ: ಸಿಇಟಿ ಪರೀಕ್ಷೆಗೂ ಹಿಜಾಬ್ ಧರಿಸುವಂತಿಲ್ಲ: ಸಚಿವ ಅಶ್ವತ್ಥ ನಾರಾಯಣ
ಇಂದು (ಬುಧವಾರ) ಕಳುಹಿಸಿರುವ ಲೀಗಲ್ ನೋಟಿಸ್‌ನಲ್ಲಿ ಕಾಂಗ್ರೆಸ್ ಮೂರು ಸುದ್ದಿ ವಾಹಿನಿಗಳ ವರದಿಗಳನ್ನು ಉಲ್ಲೇಖಿಸಿದೆ. ಗೃಹ ಸಚಿವ ಅಮಿತ್ ಶಾ ಮತ್ತು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಈ ನೋಟಿಸ್ ಕಳುಹಿಸಲಾಗಿದೆ. ರಾಜಕೀಯ ಪ್ರತೀಕಾರಕ್ಕಾಗಿ ಸರ್ಕಾರವು ಇಡಿಯನ್ನು ಬಳಸಿಕೊಳ್ಳುತ್ತಿದೆ ಎಂದು ಕೈ ನಾಯಕರು ಆರೋಪಿಸಿದ್ದಾರೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.