ಕ್ಯಾಪ್ಟನ್ ಅಮರೀಂದರ್ ಸಿಂಗ್ ನೇತೃತ್ವದಲ್ಲಿಯೇ ಕಾಂಗ್ರೆಸ್ ಚುನಾವಣೆ ಎದುರಿಸಲಿದೆ- ಹರೀಶ್ ರಾವತ್

ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ವಿರುದ್ಧ ಶಾಸಕರ ಅಸಮಾಧಾನದ ಹೊರತಾಗಿಯೂ, ಪಂಜಾಬ್ ಉಸ್ತುವಾರಿ ಎಐಸಿಸಿ ಹರೀಶ್ ರಾವತ್ ಅವರು 2022 ರ ವಿಧಾನಸಭಾ ಚುನಾವಣೆಯಲ್ಲಿ ಕ್ಯಾಪ್ಟನ್ ಅಮರಿಂದರ್ ನಾಯಕತ್ವದಲ್ಲಿಯೇ ಚುನಾವಣೆ ಎದುರಿಸಲಿದೆ ಎಂದು ಹೇಳಿದರು.

Last Updated : Aug 25, 2021, 07:52 PM IST
  • ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ವಿರುದ್ಧ ಶಾಸಕರ ಅಸಮಾಧಾನದ ಹೊರತಾಗಿಯೂ, ಪಂಜಾಬ್ ಉಸ್ತುವಾರಿ ಎಐಸಿಸಿ ಹರೀಶ್ ರಾವತ್ ಅವರು 2022 ರ ವಿಧಾನಸಭಾ ಚುನಾವಣೆಯಲ್ಲಿ ಕ್ಯಾಪ್ಟನ್ ಅಮರಿಂದರ್ ನಾಯಕತ್ವದಲ್ಲಿಯೇ ಚುನಾವಣೆ ಎದುರಿಸಲಿದೆ ಎಂದು ಹೇಳಿದರು.
ಕ್ಯಾಪ್ಟನ್ ಅಮರೀಂದರ್ ಸಿಂಗ್ ನೇತೃತ್ವದಲ್ಲಿಯೇ ಕಾಂಗ್ರೆಸ್ ಚುನಾವಣೆ ಎದುರಿಸಲಿದೆ- ಹರೀಶ್ ರಾವತ್  title=

ನವದೆಹಲಿ: ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ವಿರುದ್ಧ ಶಾಸಕರ ಅಸಮಾಧಾನದ ಹೊರತಾಗಿಯೂ, ಪಂಜಾಬ್ ಉಸ್ತುವಾರಿ ಎಐಸಿಸಿ ಹರೀಶ್ ರಾವತ್ ಅವರು 2022 ರ ವಿಧಾನಸಭಾ ಚುನಾವಣೆಯಲ್ಲಿ ಕ್ಯಾಪ್ಟನ್ ಅಮರಿಂದರ್ ನಾಯಕತ್ವದಲ್ಲಿಯೇ ಚುನಾವಣೆ ಎದುರಿಸಲಿದೆ ಎಂದು ಹೇಳಿದರು.

ಇದನ್ನೂ ಓದಿ: Gail Omvedt: ಅಂಬೇಡ್ಕರವಾದಿ ಚಿಂತಕಿ ಗೇಲ್ ಓಮ್‌ವೆಡ್ ಇನ್ನಿಲ್ಲ

ಡೆಹ್ರಾಡೂನ್ ನಲ್ಲಿರುವ ಅವರ ನಿವಾಸದಲ್ಲಿ ಪಂಜಾಬ್ ಮಂತ್ರಿಗಳು ಮತ್ತು ಶಾಸಕರ ನಿಯೋಗದೊಂದಿಗೆ ಭೇಟಿಯಾದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ರಾವತ್,"ನಾವು ಕ್ಯಾಪ್ಟನ್ ಅಮರೀಂದರ್ ಸಿಂಗ್ (Captain Amarinder Singh) ನೇತೃತ್ವದಲ್ಲಿ 2022 ಪಂಜಾಬ್ ಚುನಾವಣೆಗಳಲ್ಲಿ ಸ್ಪರ್ಧಿಸುತ್ತೇವೆ."ಎಂದು ಹೇಳಿದರು.

ಪಕ್ಷದ ರಾಜ್ಯ ಘಟಕ ಬದಲಾದ ನಂತರ ಸಂಭವನೀಯ ಸಮಸ್ಯೆಗಳನ್ನು ಪರಿಹರಿಸುವ ಆಲೋಚನೆಯನ್ನು ಪಕ್ಷ ಹೊಂದಿದೆ ಎಂದು ರಾವತ್ ಈ ಹಿಂದೆ ಹೇಳಿದ್ದರು.ಆದಾಗ್ಯೂ, ಕಾಂಗ್ರೆಸ್ ಈ ವಿಷಯವನ್ನು ಪರಿಶೀಲಿಸುತ್ತದೆ ಮತ್ತು ಪರಿಹಾರವನ್ನು ಕಂಡುಕೊಳ್ಳುತ್ತದೆ ಎಂದು ಅವರು ಹೇಳಿದರು.

ಇದನ್ನೂ ಓದಿ:Navjot Singh Sidhu : ಕಾಂಗ್ರೆಸ್ ಗೆದ್ದರೆ ಸಿಧು ಮುಂದಿನ ಪಂಜಾಬ್ ಸಿಎಂ!

"ಇದು ಪಕ್ಷದಲ್ಲಿ ನಡೆಯುತ್ತದೆ. ನಾವು ಪಿಸಿಸಿಯಲ್ಲಿ ಬದಲಾವಣೆಗಳನ್ನು ತಂದಾಗ, ಸಂಭವನೀಯ ಸಮಸ್ಯೆಗಳ ಬಗ್ಗೆ ನಮಗೆ ಒಂದು ಕಲ್ಪನೆ ಇತ್ತು. ನಾವು ಪರಿಹಾರವನ್ನು ಕಂಡುಕೊಳ್ಳುತ್ತೇವೆ ಎಂದು ಅವರು ಹೇಳಿದರು.

ಪಂಜಾಬ್ ಕಾಂಗ್ರೆಸ್ ನಾಯಕರ ಒಂದು ಬಣ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರನ್ನು ಮುಖ್ಯಮಂತ್ರಿಯಿಂದ ತೆಗೆದುಹಾಕುವಂತೆ ಒತ್ತಾಯಿಸಿ ಪಕ್ಷದ ಹೈಕಮಾಂಡ್‌ಗೆ ದೂರು ನೀಡಿತ್ತು, ಅವರ ಕೆಲಸದ ಶೈಲಿಯು ಪಕ್ಷ ಮತ್ತು ರಾಜ್ಯಕ್ಕೆ ಹಾನಿಯುಂಟುಮಾಡುತ್ತಿದೆ ಎಂದು ಅವರು ಉಲ್ಲೇಖಿಸಿತ್ತು.

ಚಂಡೀಗಡ್ ದಲ್ಲಿ, ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪರ್ಗತ್ ಸಿಂಗ್ ಇಂದು ಮುಖ್ಯಮಂತ್ರಿ ವಿರುದ್ಧ ಶಾಸಕರಲ್ಲಿ ಅಸಮಾಧಾನವಿದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ."ಸಮಸ್ಯೆಗಳನ್ನು ಬಗೆಹರಿಸದ ಕಾರಣ, ಶಾಸಕರಲ್ಲಿ ಅಸಮಾಧಾನವಿದೆ"ಎಂದು ತಿಳಿಸಿದರು.

ಇದನ್ನೂ ಓದಿ:ಕೊರೊನಾ ಲಸಿಕೆಗೆ ಕೇಂದ್ರ ಸರ್ಕಾರವೇ ಪೂರ್ತಿ ಹಣ ಕೊಡುತ್ತಾ?

ದೆಹಲಿಯಲ್ಲಿ ಪಕ್ಷದ ಹೈಕಮಾಂಡ್ ಭೇಟಿಯ ಕುರಿತು ಕೇಳಿದಾಗ,ಪರ್ಗತ್ ಸಿಂಗ್ ಮಾತನಾಡಿ, "ಖಂಡಿತವಾಗಿಯೂ ಕೆಲವರು ದೆಹಲಿಗೆ ಹೋಗಿದ್ದಾರೆ ಮತ್ತು ನಾನು ಕೂಡ ಅಲ್ಲಿಗೆ ಹೋಗುತ್ತೇನೆ. ಅದರಲ್ಲಿ ಯಾವುದೇ ಸಮಸ್ಯೆ ಇಲ್ಲ. ನಾವು ಸಮಸ್ಯೆಗಳನ್ನು ಬೇರೆಡೆಗೆ ತಿರುಗಿಸಬಾರದು. ಕ್ಯಾಪ್ಟನ್ ಅಮರಿಂದರ್ ಸಿಂಗ್ ನಮ್ಮ ಮುಖ್ಯಮಂತ್ರಿ ಮತ್ತು ನಾವು ಇದನ್ನು ಒಪ್ಪುವುದಿಲ್ಲ, ಆದರೆ ಕೆಲಸ ಮಾಡಬೇಕು' ಎಂದರು.

ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಪಕ್ಷದ ಪಂಜಾಬ್ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.ಸಿಧು ಅವರ ನೇಮಕಾತಿಯು ರಾಜ್ಯ ಘಟಕದಲ್ಲಿ ತಿಂಗಳುಗಳ ಒಳಜಗಳದ ನಂತರ ಬಂದಿದೆ, ಈ ಹಿಂದೆ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರ ಸರ್ಕಾರದ ವಿರುದ್ಧ ಸಿಧು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ:ಈ ರಾಜ್ಯದಲ್ಲಿ ಡಿಸೆಂಬರ್ 1ರಿಂದ ನೈಟ್ ಕರ್ಫ್ಯೂ, ನಿಯಮ ಉಲ್ಲಂಘಿಸಿದರೆ ಬೀಳುತ್ತೆ ಡಬಲ್ ದಂಡ

ಸಿದ್ದು ಜೊತೆಗೆ, ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸಂಗತ್ ಸಿಂಗ್ ಗಿಲ್ಜಿಯಾನ್, ಸುಖ್ವಿಂದರ್ ಸಿಂಗ್ ಡ್ಯಾನಿ, ಪವನ್ ಗೋಯೆಲ್ ಮತ್ತು ಕುಲ್ಜಿತ್ ಸಿಂಗ್ ನಾಗ್ರಾ ಅವರನ್ನು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಿದ್ದಾರೆ.

2017 ರ ವಿಧಾನಸಭಾ ಚುನಾವಣೆಯಲ್ಲಿ, ಕಾಂಗ್ರೆಸ್ 77 ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲಿ ಬಹುಮತವನ್ನು ಗಳಿಸಿತು.117 ಸದಸ್ಯರ ಪಂಜಾಬ್ ವಿಧಾನಸಭೆಯಲ್ಲಿ ಆಮ್ ಆದ್ಮಿ ಪಕ್ಷವು 20 ಸ್ಥಾನಗಳನ್ನು ಗೆಲ್ಲುವ ಮೂಲಕ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು, ಆದರೆ ಶಿರೋಮಣಿ ಅಕಾಲಿ ದಳವು ಕೇವಲ 15 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಯಿತು.ಬಿಜೆಪಿ ಕೇವಲ 3 ಸ್ಥಾನಗಳನ್ನು ಗಳಿಸಿತು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News